ಕೇಂದ್ರ ಸಚಿವ ಅಮಿತ್ ಶಾ ಇಂದು ಮೈಸೂರಿಗೆ: ಇಲ್ಲಿದೆ ಪ್ರವಾಸದ ವೇಳಾಪಟ್ಟಿ

ವಿಧಾನಸಭೆ ಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್​​ ಶಾ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಲೋಕಸಭಾ ಚುನಾವಣೆ ಸನಿಹದಲ್ಲೇ ಬಿಜೆಪಿ ಚಾಣಕ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವುದು, ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಕೇಂದ್ರ ಸಚಿವರ ಕಾರ್ಯಕ್ರಮದ ವಿವರ ಇಲ್ಲಿದೆ.

ಕೇಂದ್ರ ಸಚಿವ ಅಮಿತ್ ಶಾ ಇಂದು ಮೈಸೂರಿಗೆ: ಇಲ್ಲಿದೆ ಪ್ರವಾಸದ ವೇಳಾಪಟ್ಟಿ
ಅಮಿತ್​ ಶಾ ಮೈಸೂರು ಜಿಲ್ಲಾ ಪ್ರವಾಸ
Follow us
| Updated By: ವಿವೇಕ ಬಿರಾದಾರ

Updated on:Feb 10, 2024 | 7:27 AM

ಬೆಂಗಳೂರು, ಫೆ.10: ಲೋಕಸಭಾ ಚುನಾವಣೆ ಕೆಲವೆ ತಿಂಗಳು ಬಾಕಿ ಉಳಿದಿರುವಾಗಲೆ ಬಿಜೆಪಿ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್​​ ಶಾ ಅವರು ಇಂದು (ಫೆ.10) ಮೈಸೂರಿಗೆ (Mysore) ಆಗಮಿಸಲಿದ್ದಾರೆ. ವಿಧಾನಸಭೆ ಸಭೆ ಚುನಾವಣೆ ಬಳಿಕ ಅಮಿತ್​ ಶಾ ಅವರ ಇದೇ ಮೊದಲ ರಾಜ್ಯ ಪ್ರವಾಸವಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಇಂದು (ಶನಿವಾರ) ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರು ರಾತ್ರಿ 10.50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಲಿರುವ ಅಮಿತ್​​ ಶಾ, ಫೆ.11 ರಂದು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದ ವಿವರ ಹೀಗಿದೆ

ಇನ್ನು ಫೆ.11 ರಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ‌ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿಂದ 11.45ಕ್ಕೆ ಹೆಲಿಕಾಪ್ಟರ್​ನಲ್ಲಿ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳಸಲಿದ್ದು, ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಅದೇ ದಿನ ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಅದನ್ನು ಮುಗಿಸಿಕೊಂಡು ಮಧ್ಯಾಹ್ನ 2.30ಕ್ಕೆ ರಾಡಿಸನ್ ಬ್ಲೂ ಹೋಟೆಲ್‌ಗೆ ಆಗಮಿಸಲಿದ್ದಾರೆ.

ಇದನ್ನೂ ಓದಿ:ಬಿಜೆಪಿಗೆ ಜಗದೀಶ್ ಶೆಟ್ಟರ್​ ಕರೆತರಲು ಅಖಾಡಕ್ಕಿಳಿದ ಅಮಿತ್ ಶಾ; ಲಕ್ಷ್ಮಣ ಸವದಿ ಆಗಮನದ ನಿರೀಕ್ಷೆಯಲ್ಲಿ ರಾಜ್ಯ ನಾಯಕರು

ಮುಖಂಡರ ಜೊತೆ ಕೇಂದ್ರ ಸಚಿವ ಅಮಿತ್ ಶಾ ಸಭೆ

ನಂತರ ಮಧ್ಯಾಹ್ನ 2.40ಕ್ಕೆ ಕೇಂದ್ರ ಸಚಿವ ಅಮಿತ್ ಶಾ ಸಭೆ ನಿಗದಿಪಡಿಸಿದ್ದು, ಸುಮಾರು 2 ಗಂಟೆ ಕಾಲ ಮುಖಂಡರ ಜೊತೆ ಚರ್ಚೆ ನಡೆಯಲಿದೆ. ಈ ಸಭೆ ಮೂಲಕ ಚುನಾವಣಾ ಸಿದ್ಧತೆಗೆ ಅಮಿತ್ ಶಾ ಚಾಲನೆ ನೀಡಲಿದ್ದಾರಾ?,  ಸುತ್ತೂರು ಜಾತ್ರಾ ಮಹೋತ್ಸವದ ನೆಪದಲ್ಲಿ ಚುನಾವಣೆಗೆ ರಣತಂತ್ರ ಹೆಣೆಯಲು ಬಿಜೆಪಿ ಚಾಣಕ್ಯ ಆಗಮಿಸಿದರಾ?. ಇಂತಹ ಹತ್ತು ಹಲವು ಪ್ರಶ್ನೆಗಳು ಇದೀಗ ರಾಜಕೀಯ ಪಡಸಾಲೆಯಲ್ಲಿ ಶುರುವಾಗಿದೆ.

ರಾಜ್ಯದ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 pm, Thu, 8 February 24