ಮೈಸೂರು: ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ; 100 ಕೋಟಿ ರೂ. ಮೌಲ್ಯದ 5.14 ಎಕರೆ ಒತ್ತುವರಿ ಜಾಗ ತೆರವು

ಮಹದೇವಯ್ಯ ಜಮೀನು ಸ್ವಾಧೀನ ಮಾಡಿಕೊಂಡಿದ್ದರು. ಅಲ್ಲದೇ ಭೂಮಿ‌ ನೀಡದೆ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಮುಡಾ ಪರ ಮೈಸೂರು ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶೆಡ್ ತೆರವುಗೊಳಿಸಿ ಮುಡಾ ನಾಮಫಲಕ ಅಳವಡಿಸಲಾಗಿದೆ.

ಮೈಸೂರು: ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ; 100 ಕೋಟಿ ರೂ. ಮೌಲ್ಯದ 5.14 ಎಕರೆ ಒತ್ತುವರಿ ಜಾಗ ತೆರವು
ಒತ್ತುವರಿ ಮಾಡಿದ್ದ ಜಾಗ ತೆರವು
Follow us
TV9 Web
| Updated By: preethi shettigar

Updated on:Dec 19, 2021 | 9:16 AM

ಮೈಸೂರು: ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು (Urban Development)  ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು ಜಿಲ್ಲೆಯ ಬಸವನಹಳ್ಳಿಯಲ್ಲಿ ಒತ್ತುವರಿ ಮಾಡಿದ್ದ ಜಾಗವನ್ನು ತೆರವು ಮಾಡಿ, ಜಮೀನಿನಲ್ಲಿ ಹಾಕಿದ್ದ ಶೆಡ್ ತೆಗೆದು ಮುಡಾ ನಾಮಫಲಕ ಅಳವಡಿಸಿದ್ದಾರೆ. ಸುಮಾರು 100 ಕೋಟಿ ರೂಪಾಯಿ ಮೌಲ್ಯದ 5.14 ಎಕರೆ ಒತ್ತುವರಿ ಜಾಗವನ್ನು ಇಂದು (ಡಿಸೆಂಬರ್ 19) ಅಧಿಕಾರಿಗಳು ತೆರವು ಮಾಡಿದ್ದಾರೆ.

ಬಸವನಹಳ್ಳಿ ಗ್ರಾಮದ ಮಹದೇವಯ್ಯ ಅವರಿಗೆ ಸೇರಿದ ಜಮೀನಿನಲ್ಲಿ ತೆರವು ಕಾರ್ಯ ಆರಂಭಗೊಂಡಿದೆ. ಮಹದೇವಯ್ಯ ಜಮೀನು ಸ್ವಾಧೀನ ಮಾಡಿಕೊಂಡಿದ್ದರು. ಅಲ್ಲದೇ ಭೂಮಿ‌ ನೀಡದೆ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಮುಡಾ ಪರ ಮೈಸೂರು ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶೆಡ್ ತೆರವುಗೊಳಿಸಿ ಮುಡಾ ನಾಮಫಲಕ ಅಳವಡಿಸಲಾಗಿದೆ.

ಸರ್ವೇ ನಂ 118ರಲ್ಲಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಒತ್ತುವರಿ ಮಾಡಿದ್ದು, ಜಮೀನಿನಲ್ಲಿ ನಿರ್ಮಾಣ ಮಾಡಿದ್ದ ಎರಡು ಶೆಡ್​ಗಳನ್ನು ತೆರವು ಮಾಡಲಾಗಿದೆ. ಪೊಲೀಸ್ ಬಿಗಿ ಬಂದೊಬಸ್ತ್‌ನಲ್ಲಿ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ಈ ಹಿಂದೆಯೂ ಕೂಡ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಜತೆಗೆ ತೆರವು ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ತರಾಟೆಗೂ ಕೂಡ ತೆಗೆದುಕೊಳ್ಳಲಾಗಿದೆ. ಇದಕ್ಕೆ ಒಂದು ಉದಾಹರಣೆ ನೀಡುವುದಾದರೆ,

4 ಅಧಿಕಾರಿಗಳಿಗೆ ಕೊಪ್ಪಳ ಡಿಸಿ ನೋಟಿಸ್ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಂಪಿ ಪಕ್ಕದ ವಿರೂಪಾಪೂರ ಗಡ್ಡಿಯ ಅಕ್ರಮ ರೆಸಾರ್ಟ್​ಗಳನ್ನು ಕೊಪ್ಪಳ ಜಿಲ್ಲಾಡಳಿತ ನೆಲಸಮ ಮಾಡಿತ್ತು. ಇದರ ಬೆನ್ನಲ್ಲೇ ರೆಸಾರ್ಟ್ ಮಾಲೀಕರು ಪಟ್ಟಾ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್ ನಿರ್ಮಾಣ ಮಾಡಿರುವ ಆರೋಪ ಈಗ ಮತ್ತೆ ಕೇಳಿ ಬಂದಿದೆ. ಇದಕ್ಕೂ ಕೊಪ್ಪಳ ಜಿಲ್ಲಾಡಳಿತ ಬ್ರೇಕ್ ಹಾಕಲು ಮುಂದಾಗಿತ್ತು. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯ ಹಂಪಿ ಪ್ರದೇಶ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ರೆಸಾರ್ಟ್​ಗಳನ್ನು ತೆರವು ಮಾಡಿ. ಇಲ್ಲದಿದ್ದರೆ ಅದಕ್ಕೆ ನೀವೇ ಹೊಣೆಗಾರರಾಗಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಸ್.ವಿಕಾಸ ಕಿಶೋರ ಅವರು ನೋಟಿಸ್ ನೀಡಿದ್ದರು.

ಹಂಪಿ ಪರಂಪರೆ ಪ್ರದೇಶ ವ್ಯಾಪ್ತಿಗೆ ಒಳಪಡುವ ಕೊಪ್ಪಳದ ಗಂಗಾವತಿ ತಾಲೂಕಿನ ವಿರೂಪಾಪೂರ ಗಡ್ಡಿಯಲ್ಲಿದ್ದ ಅಕ್ರಮ ರೆಸಾರ್ಟ್​ಗಳು ಕಳೆದ 2 ವರ್ಷದ ಹಿಂದೆ ನೆಲಸಮ ಆಗಿದ್ದವು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಇಲ್ಲಿನ ರೆಸಾರ್ಟ್​ಗಳನ್ನು ತೆರವು ಮಾಡಿತ್ತು. ವಿರೂಪಾಪೂರ ಗಡ್ಡಿಯಲ್ಲಿನ ರೆಸಾರ್ಟ್ ನೆಲಸಮ ಆದ ನಂತರ ಗಂಗಾವತಿ ತಾಲೂಕಿನ ಆನೇಗೊಂದಿ, ಹನುಮನಹಳ್ಳಿ, ಜಂಗ್ಲಿ, ಸಣಾಪೂರ, ರಂಗಾಪೂರ, ಗಡ್ಡಿ, ಪಂಪಾ ಸರೋವರ ಸುತ್ತಮುತ್ತ ಪಟ್ಟಾ ಭೂಮಿಯಲ್ಲಿ ಮತ್ತೆ ಅಕ್ರಮವಾಗಿ ರೆಸಾರ್ಟ್​ಗಳು ತಲೆ ಎತ್ತುತ್ತಿವೆ. ಈ ಕಾರಣಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಎಸ್.ವಿಕಾಸ ಕಿಶೋರ್ ಅವರು ಹೊಸಪೇಟೆಯ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಕೊಪ್ಪಳ ಉಪ ವಿಭಾಗಾಧಿಕಾರಿ, ಗಂಗಾವತಿಯ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯತ್ ಇಒಗೆ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಅಕ್ರಮ ಕಟ್ಟಡ ತೆರವು ವಿಚಾರ: ಬಿಬಿಎಂಪಿ ಕಾರ್ಯವೈಖರಿಗೆ ಹೈಕೋರ್ಟ್​ ಗರಂ

Assam Violence: ಒತ್ತುವರಿ ತೆರವುಗೊಳಿಸಲು ಬಂದ ಪೊಲೀಸರೊಂದಿಗೆ ಸಂಘರ್ಷ: ಇಬ್ಬರ ಸಾವು, ಜನರ ಮೇಲಿನ ಹಲ್ಲೆ ಕ್ಯಾಮೆರಾದಲ್ಲಿ ದಾಖಲು

Published On - 8:30 am, Sun, 19 December 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ