AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಡುಗಾಡು ಸಿದ್ದ’ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ; ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ ಸೋಮಣ್ಣ ಕಿಡಿ

ಪದೇಪದೆ ಮನೆಗಳನ್ನು ನೀಡಿಲ್ಲವೆಂದು ಹೇಳಬೇಡಿ. ನೂರು ಬಾರಿ ಸುಳ್ಳು ಹೇಳಿದರೆ ಸತ್ಯವಾಗುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ವಿ ಸೋಮಣ್ಣ, ನಾನು, ನೀವು ಇಬ್ಬರೂ ಒಂದೇ ಗರಡಿಯಲ್ಲಿ ಇದ್ದವರು.

'ಸುಡುಗಾಡು ಸಿದ್ದ' ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ; ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ ಸೋಮಣ್ಣ ಕಿಡಿ
ವಸತಿ ಸಚಿವ ವಿ ಸೋಮಣ್ಣ
TV9 Web
| Updated By: sandhya thejappa|

Updated on:Feb 12, 2022 | 12:13 PM

Share

ಮೈಸೂರು: ‘ಸುಡುಗಾಡು ಸಿದ್ದ’ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ ಅಂತ ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ವಸತಿ ಸಚಿವ ವಿ ಸೋಮಣ್ಣ (V Somanna) ಕಿಡಿ ಕಾರಿದ್ದಾರೆ. ಅವರ ಕಾಲದಲ್ಲಿ ಬರೀ ಘೋಷಣೆ ಆಗಿತ್ತು. ನಾವು ಮನೆ ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡಬೇಡಿ. ನಾವು ಕೊಟ್ಟಿದ್ದು, ನೀವು ಕೊಟ್ಟಿದ್ದು ಅನ್ನುವುದಲ್ಲ. ಜನರಿಗೆ ಮನೆ ಸಿಗಬೇಕು. ಸಿದ್ದರಾಮಯ್ಯ ಸಹ ಮನೆಯಿಂದ ತಂದು ಕೊಟ್ಟಿಲ್ಲ. ನಾನು ಸಹ ಮನೆಯಿಂದ ತಂದು ಕೊಡಲ್ಲ. ಇನ್ನು ಮುಂದೆಯಾದರೂ ಸೋಮಣ್ಣನನ್ನು ಟಾರ್ಗೆಟ್ ಮಾಡುವುದನ್ನು ಬಿಡಿ ಅಂತ ಸಚಿವರು ಹೇಳಿದರು.

ಪದೇಪದೆ ಮನೆಗಳನ್ನು ನೀಡಿಲ್ಲವೆಂದು ಹೇಳಬೇಡಿ. ನೂರು ಬಾರಿ ಸುಳ್ಳು ಹೇಳಿದರೆ ಸತ್ಯವಾಗುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ವಿ ಸೋಮಣ್ಣ, ನಾನು, ನೀವು ಇಬ್ಬರೂ ಒಂದೇ ಗರಡಿಯಲ್ಲಿ ಇದ್ದವರು. ನಿಮಗೆ ಅದೃಷ್ಟ ಇದ್ದು ಮುಖ್ಯಮಂತ್ರಿ ಆಗಿದ್ದೀರಿ. ನನಗೂ ಎಲ್ಲಾ ಅರ್ಹತೆ ಇದೆ. ನಾಲಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಿ ಅಂತ ಕಿಡಿಕಾರಿದ್ದಾರೆ.

ಇದೇ ವೇಳೆ ಹಿಜಾಬ್, ಕೇಸರಿ ವಿವಾದ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಸೋಮಣ್ಣ, ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಯಾರ್ ಯಾರು ಏನ್ ಮಾಡುತ್ತಿದ್ದಾರೆ ಎನ್ನುವುದನ್ನು ಸರ್ಕಾರ ಗಂಭೀರವಾಗಿ ಗಮನಿಸುತ್ತಿದೆ. ಇಲ್ಲಿ ಯಾರು ದೊಡ್ಡವರಲ್ಲ, ಎಲ್ಲರಿಗಿಂತ ದೊಡ್ಡದು ದೇಶ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಸಂಘಟನೆಗಳನ್ನು ಬಗ್ಗು ಬಡಿಯುವ ಕೆಲಸವನ್ನ ಸರ್ಕಾರ ಮಾಡಲಿದೆ. ಘಜಿನಿ ಮಹಮ್ಮದ್ 17 ಬಾರಿ ದಂಡೆತ್ತಿ ಬಂದ. ಅನೇಕ ರಾಜರು ದಾಳಿ ಮಾಡಿದರು. ಆದರೂ ಭಾರತ ಭಾರತವಾಗಿಯೇ ಇದೆ. ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡದಿರಿ ಅಂತ ಸಚಿವರು ಹೇಳಿದರು.

ಇದನ್ನೂ ಓದಿ

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ; ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಜಯತೀರ್ಥ, ಸತ್ಯ ಮೆಚ್ಚಿದ ‘ಗಿಲ್ಕಿ’ ಟ್ರೇಲರ್​; ಇದು ಅಪರೂಪದ ಪ್ರೇಮಕಥೆಯ ವಿಭಿನ್ನ ಪ್ರಯತ್ನ

Published On - 12:13 pm, Sat, 12 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ