ನನ್ನಂಥವನು ವಿಧಾನಸೌಧಕ್ಕೆ ಹೋಗಬೇಕು ಹೀಗಾಗಿ ಚುನಾವಣೆಗೆ ನಿಲ್ತೀನಿ: ವಾಟಾಳ್ ನಾಗರಾಜ್ ಘೋಷಣೆ

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗಲು ನಡೆಯುವ ಚುನಾವಣೆಯಲ್ಲಿ ನಾನು ಕಣಕ್ಕಿಳಿಯುತ್ತೇನೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ನನ್ನಂಥವನು ವಿಧಾನಸೌಧಕ್ಕೆ ಹೋಗಬೇಕು ಹೀಗಾಗಿ ಚುನಾವಣೆಗೆ ನಿಲ್ತೀನಿ: ವಾಟಾಳ್ ನಾಗರಾಜ್ ಘೋಷಣೆ
ವಾಟಾಳ್ ನಾಗರಾಜ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 20, 2021 | 5:51 PM

ಮೈಸೂರು: ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಮುಂಬರುವ ಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದರು.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗಲು ನಡೆಯುವ ಚುನಾವಣೆಯಲ್ಲಿ ನಾನು ಕಣಕ್ಕಿಳಿಯುತ್ತೇನೆ. ಈ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳೇ ಮತದಾರರಾಗಿರುತ್ತಾರೆ. ಎರಡು ಮತ ಚಲಾವಣೆಗೆ ಅವಕಾಶವಿದೆ. ನನಗೊಂದು ಮತ ಕೊಡಿ ಉಳಿದೊಂದು ಮತವನ್ನು ಬೇರೆ ಯಾರಿಗೆ ಬೇಕಾದರೂ ಚಲಾಯಿಸಿ. ನನ್ನಂಥವನು ಸದನದಲ್ಲಿ ಇರಬೇಕು ಎಂದು ಹೇಳಿದರು.

ಹಿಂದಿ ಹೇರಿಕೆಗೆ ವಾಟಾಳ್ ನಾಗರಾಜ್ ವಿರೋಧ ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡಬಾರದು. ಇಂಥ ಪ್ರಯತ್ನಗಳ ವಿರುದ್ಧ ನಿರಂತರ ಹೋರಾಟ ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷ ತೀವ್ರ ಹೋರಾಟ ಮಾಡಲಿದೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಚಾಮರಾಜನಗರದಲ್ಲಿ ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ಯಾಂಕ್‌ಗಳಲ್ಲಿ ಚೆಕ್‌ಗಳು ಹಿಂದಿಯಲ್ಲಿವೆ. ಹಿಂದಿಯಷ್ಟೇ ರಾಷ್ಟ್ರಭಾಷೆ ಅಲ್ಲ, ಕನ್ನಡವೂ ರಾಷ್ಟ್ರಭಾಷೆ. ರಾಜ್ಯದಲ್ಲಿರುವ ಅನ್ಯಭಾಷಿಕರು ಗಂಭೀರವಾಗಿ ಕನ್ನಡವನ್ನು ಕಲಿಯಬೇಕು. ಇಲ್ಲವಾದರೆ ಅವರು ರಾಜ್ಯ ಬಿಟ್ಟು ಹೋಗಬಹುದು ಎಂದರು.

ಕೊರೊನದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನಬಳಕೆ ವಸ್ತುಗಳ ದರ ಗಗನಕ್ಕೇರಿದೆ. ಬೆಲೆ ಏರಿಕೆಯ ಬಗ್ಗೆ ಯಾರು ಮಾತನಾಡುತ್ತಿಲ್ಲ. ವಿಧಾನಸಭೆಯಲ್ಲಿ ವಿರೋಧ ಪಕ್ಷವೂ ಬೆಲೆಏರಿಕೆಯನ್ನು ಸಮರ್ಪಕವಾಗಿ ವಿರೋಧಿಸಲಿಲ್ಲ. ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.

ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಕ್ರಮಕ್ಕೆ ಜೆಡಿಎಸ್ ಆಗ್ರಹ; ಧೈರ್ಯ ಇದ್ರೆ ರೋಹಿಣಿರನ್ನು ಮತ್ತೆ ಡಿಸಿ ಮಾಡಿ ಎಂದ ವಾಟಾಳ್ ನಾಗರಾಜ್ ಇದನ್ನೂ ಓದಿ: ಬೂಟು ಏಟು ತಿಂದ ದಿನವನ್ನೇ ಜನ್ಮದಿನ ಎಂದು ಆಚರಣೆ ಮಾಡಿಕೊಳ್ಳುತ್ತಾರೆ ವಾಟಾಳ್ ನಾಗರಾಜ್!

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?