ಎಂಇಎಸ್ ಪುಂಡಾಟಿಕೆ: ಸಂಸದೆ ಸುಮಲತಾರನ್ನ 1 ರೂಪಾಯಿಗೆ ಹರಾಜು ಹಾಕಿದ ವಾಟಾಳ್ ನಾಗರಾಜ್

ಮೈಸೂರು: ನೆರೆಯ ಮಹಾರಾಷ್ಟ್ರದ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟಿಕೆ ಖಂಡಿಸಿ ಮಾಜಿ ಶಾಸಕ ವಾಟಾಳ್ ನಾಗರಾಜ್ ಇಂದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಬಗ್ಗೆ ಸಂಸದರು ಧ್ವನಿ ಎತ್ತುತ್ತಿಲ್ಲವೆಂದು ಅವರ ವಿರುದ್ಧ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಲೋಕಸಭಾ ಸದಸ್ಯರನ್ನು ಹರಾಜು ಹಾಕುವ ಮೂಲಕ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿ ಈ ವಿನೂತನ ಪ್ರತಿಭಟನೆ ನಡೆಯಿತು. ಕರ್ನಾಟಕದ ಸಂಸದರ ಭಾವಚಿತ್ರಗಳನ್ನಿಟ್ಟು ಹರಾಜು ಪ್ರಕ್ರಿಯೆ ನಡೆಸಿದರು. 1 ರೂ ಗೆ ಮಂಡ್ಯ ಸಂಸದೆ […]

ಎಂಇಎಸ್ ಪುಂಡಾಟಿಕೆ: ಸಂಸದೆ ಸುಮಲತಾರನ್ನ 1 ರೂಪಾಯಿಗೆ ಹರಾಜು ಹಾಕಿದ ವಾಟಾಳ್ ನಾಗರಾಜ್
ಎಂಇಎಸ್ ಪುಂಡಾಟಿಕೆ: ಸಂಸದೆ ಸುಮಲತಾರನ್ನ 1 ರೂಪಾಯಿಗೆ ಹರಾಜು ಹಾಕಿದ ವಾಟಾಳ್ ನಾಗರಾಜ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 21, 2021 | 2:07 PM

ಮೈಸೂರು: ನೆರೆಯ ಮಹಾರಾಷ್ಟ್ರದ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟಿಕೆ ಖಂಡಿಸಿ ಮಾಜಿ ಶಾಸಕ ವಾಟಾಳ್ ನಾಗರಾಜ್ ಇಂದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಬಗ್ಗೆ ಸಂಸದರು ಧ್ವನಿ ಎತ್ತುತ್ತಿಲ್ಲವೆಂದು ಅವರ ವಿರುದ್ಧ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಲೋಕಸಭಾ ಸದಸ್ಯರನ್ನು ಹರಾಜು ಹಾಕುವ ಮೂಲಕ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿ ಈ ವಿನೂತನ ಪ್ರತಿಭಟನೆ ನಡೆಯಿತು. ಕರ್ನಾಟಕದ ಸಂಸದರ ಭಾವಚಿತ್ರಗಳನ್ನಿಟ್ಟು ಹರಾಜು ಪ್ರಕ್ರಿಯೆ ನಡೆಸಿದರು. 1 ರೂ ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ 1 ರೂಪಾಯಿಗೆ ಹರಾಜು ಆದರು. ಆದರೆ ಉಳಿದ ಸಂಸದರನ್ನು ಯಾರೂ ಖರೀದಿಸಲಿಲ್ಲ. ಆದ್ದರಿಂದ ಉಳಿದ ಸಂಸದರಿಗೆ ಒಂದು ರೂಪಾಯಿಯ ಬೆಲೆಯೂ ಇಲ್ಲವೆಂದು ವಾಟಾಳ್ ನಾಗರಾಜ್​ ವ್ಯಂಗ್ಯವಾಡಿದರು. ಇದೇ ವೇಳೆ ವಾಟಾಳ್ ನಾಗರಾಜ್​ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ರಾಜ್ಯದಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಹೆಚ್ಚಾಗಿದೆ. ಆದರೆ ಎಂಇಎಸ್ ಬ್ಯಾನ್ ಮಾಡುವುದಕ್ಕೆ ರಾಜ್ಯದ ಜನಪ್ರತಿನಿಧಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಶಾಸನ ಸಭೆಯಲ್ಲಿ ಕೇವಲ ಮನ್ನಣೆ ಇಲ್ಲದ ಮಾತುಗಳನ್ನಾಡುತ್ತಿದ್ದಾರೆ. ಈ ಬಗ್ಗೆ ಗಂಭೀರವಾದ ನಿರ್ಣಯ ಕೈಗೊಳ್ಳುತ್ತಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಂದು ಸಂಜೆ ಒಳಗೆ ಎಂಇಎಸ್ ನಿಷೇಧ ಮಾಡಬೇಕು. ಈ ಬಗ್ಗೆ ನಾಳೆ ಬೆಂಗಳೂರಿನಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆ ಕರೆದಿದ್ದೇನೆ. ಉಗ್ರ ಹೋರಾಟದ ತೀರ್ಮಾನ ಕೈಗೊಳ್ಳುತ್ತೇವೆ. ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳದಿದ್ದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತೆ. ನಾಳಿನ ಸಭೆಯಲ್ಲಿ ಕರ್ನಾಟಕ ಬಂದ್ ಬಗ್ಗೆ ತೀರ್ಮಾನ ಮಾಡುತ್ತೇವೆ. ಕೇಂದ್ರ ಸರ್ಕಾರ ಉದ್ದವ್ ಠಾಕ್ರೆಯ ಸರ್ಕಾರವನ್ನು ವಜಾ ಮಾಡಬೇಕು. ಇಷ್ಟೆಲ್ಲಾ ಆಗಿದ್ದರೂ ರಾಜ್ಯದ ಸಂಸದರು ನಮಗೇನು ಗೊತ್ತಿಲ್ಲ ಅನ್ನೋ ರೀತಿ ವರ್ತಿಸುತ್ತಿದ್ದಾರೆ. ಇತ್ತ ಗಂಡಸರೂ ಅಲ್ಲ, ಹೆಂಗಸರೂ ಅಲ್ಲ ಅನ್ನೋ ರೀತಿ ವರ್ತನೆ ಮಾಡ್ತಿದ್ದಾರೆ. ಈ ಬಗ್ಗೆ ಧ್ವನಿ ಎತ್ತದ ಸಂಸದರನ್ನು ಹರಾಜು ಹಾಕಿ ಮಾನ ಕಳೆದಿದ್ದೇವೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಇದನ್ನೂ ಓದಿ:

Mekedatu Project: ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದರೂ ಮೇಕೆದಾಟು ಯೋಜನೆಗೆ ಎದುರಾಗಿರುವ ಅಡೆತಡೆಗಳು ಏನು?

Sa Ra Govind on MES|ಎಂಇಎಸ್ ಪುಂಡಾಟಿಕೆ ವಿರುದ್ಧ ದನಿ ಎತ್ತಿದೆ ಕನ್ನಡ ಫಿಲ್ಮ್ ಚೇಂಬರ್|TV9 Kannada

Published On - 2:01 pm, Tue, 21 December 21