Vegetable Price: ನಿರಂತರ ಮಳೆ: ತರಕಾರಿ ಲಭ್ಯತೆ ಕಡಿಮೆ, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಬೀನ್ಸ್, ಕ್ಯಾರೆಟ್, ಟೊಮೆಟೊ ದರ ದಿನೇದಿನೆ ಹೆಚ್ಚಾಗುತ್ತಿದೆ.

Vegetable Price: ನಿರಂತರ ಮಳೆ: ತರಕಾರಿ ಲಭ್ಯತೆ ಕಡಿಮೆ, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 17, 2022 | 7:40 AM

ಮೈಸೂರು: ಕಳೆದ ಐದಾರು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆ ಹಿನ್ನೆಲೆಯಲ್ಲಿ ವಿವಿಧ ತರಕಾರಿಗಳ ಲಭ್ಯತೆ ಕಡಿಮೆಯಾಗಿದ್ದು, ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಬೀನ್ಸ್, ಕ್ಯಾರೆಟ್, ಟೊಮೆಟೊ ದರ ದಿನೇದಿನೆ ಹೆಚ್ಚಾಗುತ್ತಿದೆ. ಒಂದು ಕೆಜಿ ತರಕಾರಿ ಬೆಲೆಯು ₹ 40ರಷ್ಟು ಹೆಚ್ಚಾಗಿದೆ. ಮದುವೆ, ಶುಭ ಸಮಾರಂಭ ನಡೆಸುವವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಮಳೆ ಆರ್ಭಟ ಮುಂದುವರಿದರೆ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿಯೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. 15 ರೂಪಾಯಿಗೆ ಸಿಗುತ್ತಿದ್ದ ಟೊಮೆಟೊ ಒಂದೇ ವಾರದಲ್ಲಿ 80 ರೂಪಾಯಿ ದಾಟಿದೆ. ಬೀನ್ಸ್, ಸೋಪ್ಪು ಸೇರಿದಂತೆ ಇತರ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ. ಮಳೆ ಹಿನ್ನೆಲೆ ತರಕಾರಿ ಬೆಳೆ ಬೆಳೆಯಲು ಸಮಸ್ಯೆಯಾಗುತ್ತಿದೆ. ಇನ್ನು ಕೆಲವೆಡೆ ಬೆಳೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿವೆ. ಹೊಲ, ಗದ್ದೆಗಳು ಕೆರೆಯಂತಾಗುತ್ತಿರುವ ಕಾರಣ ಕೊಯ್ಲು ಮಾಡಲು ಸಾಧ್ಯವಾಗುತ್ತಿಲ್ಲ. ಹೊಲದಲ್ಲಿ ಬೆಳೆದಿರುವ ತರಕಾರಿ, ಹಣ್ಣುಗಳನ್ನು ಮಾರುಕಟ್ಟೆಗೆ ತರಲು ಕಷ್ಟವಾಗುತ್ತಿದೆ. ತರಕಾರಿ‌ ಬೆಲೆ ಕೇಳಿ ಗ್ರಾಹಕರು ಬಾಯಿ ಮೇಲೆ ಬೆರಳು ಇಟ್ಟುಕೊಳ್ಳುವಂತಾಗಿದೆ.

ಕರ್ನಾಟಕದ ಬಹುತೇಕ ನಗರ, ಪಟ್ಟಣಗಳಲ್ಲಿ ತರಕಾರಿಗಳ ಬೆಲೆ ಹೀಗಿದೆ; ಬೀನ್ಸ್ -80 ರೂ ಕ್ಯಾರೆಟ್ -80 ರೂ ಬಿಟ್ ರೋಟ್ -30ರೂ ಕ್ಯಾಪ್ಸಿಕಮ್ -60 ರೂ ನವಿಲುಕೋಸು -40 ರೂ ಬೆಂಡೆಕಾಯಿ -30 ರೂ ಶುಂಟಿ -80 ರೂ ಮೆಣಸಿನಕಾಯಿ -80ರೂ ಟೋಮಾಟೋ -80ರೂ ಮೂಲಂಗಿ -30ರೂ ಈರುಳ್ಳಿ -20ರೂ ಬದನೆಕಾಯಿ -40 ರೂ ಕೊತ್ತಂಬರಿ ಸೊಪ್ಪು -40ರೂ

ಹಣ್ಣುಗಳ‌ ಬೆಲೆ ಹೀಗಿದೆ; ಸೇಬು ಕೆಜಿಗೆ -160 ರೂ ದಾಳಿಂಬೆ ಕೆಜಿಗೆ -300 ರೂ ದಾಕ್ಷಿ ಕೆಜಿಗೆ -100 ರೂ ಮಾವಿನ ಹಣ್ಣು -120 ರೂ ಕಿತ್ತಲೆ -120 ರೂ ಅಪೋಟ -70 ರೂ ಬಾಳೆಹಣ್ಣು -70 ರೂ ಸೀಬೆಹಣ್ಣು -60 ರೂ ಮೊಸಂಬಿ -100 ರೂ ಪೈನಪಲ್ -40 ರೂ ಮುಂದಿನ ಒಂದು ತಿಂಗಳಲ್ಲಿ ತರಕಾರಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗೆ ಲಿಂಕ್ ಕ್ಲಿಕ್ ಮಾಡಿ

Published On - 7:40 am, Tue, 17 May 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ