ವಿಧಾನಪರಿಷತ್ ಚುನಾವಣೆ: ನಾಮಪತ್ರ ಅಂಗೀಕಾರ ಹಾಗೂ ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್
ಜೂ. 3ರಂದು ವಿಧಾನಪರಿಷತ್ತಿನ (Legislative Council) ಪದವೀಧರ, ಶಿಕ್ಷಕರ ಕೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ತನ್ನ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಬಿಜೆಪಿ ಉಸ್ತುವಾರಿಗಳನ್ನೂ ನೇಮಕ ಮಾಡಿದೆ. ಅದರಂತೆ ಇಂದು(ಮೇ.18) ಅದರಂತೆ ವಿಧಾನಪರಿಷತ್‌ನ ನೈಋತ್ಯ ಪದವೀಧರ, ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ನಾಮಪತ್ರ ಅಂಗೀಕಾರ ಮತ್ತು ತಿರಸ್ಕೃತ ಪಟ್ಟಿ ರಿಲೀಸ್ ಮಾಡಿದೆ. ಈ ಕುರಿತು ವಿವರ ಇಲ್ಲಿದೆ.
ಮೈಸೂರು, ಮೇ.18: ರಾಜ್ಯ ವಿಧಾನ ಪರಿಷತ್ಗೆ (Legislative Council) ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಅದರಂತೆ ವಿಧಾನಪರಿಷತ್‌ನ ನೈಋತ್ಯ ಪದವೀಧರ, ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ನಾಮಪತ್ರ ಅಂಗೀಕಾರ ಮತ್ತು ತಿರಸ್ಕೃತ ಪಟ್ಟಿ ರಿಲೀಸ್ ಮಾಡಿದ್ದು, ಹೀಗಿದೆ.
ಕ್ಷೇತ್ರ | ನಾಮಪತ್ರ ಸಲ್ಲಿಕೆ | ಅಂಗೀಕಾರ | ತಿರಸ್ಕೃತ |
ನೈಋತ್ಯ ಪದವೀಧರರ ಕ್ಷೇತ್ರ | 11 | 11 | 00 |
ದಕ್ಷಿಣ ಶಿಕ್ಷಕರ ಕ್ಷೇತ್ರ | 13 | 13 | 00 |
ನೈಋತ್ಯ ಶಿಕ್ಷಕರ ಕ್ಷೇತ್ರ | 10 | 09 | 01 |
ಇನ್ನು ಪಕ್ಷೇತರ ಅಭ್ಯರ್ಥಿ ಎಂ.ಸತೀಶ್ ಕಾರಂತ್ ಎಂಬುವವರ ನಾಮಪತ್ರ ಮಾತ್ರ ತಿರಸ್ಕೃತವಾಗಿದ್ದು, ಮೇ 20ರ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.
ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಮರಿತಿಬ್ಬೇಗೌಡ ಕಣಕ್ಕೆ
ಆರು ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ
ನಿನ್ನೆ(ಮೇ.17) ಆರು ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿದ್ದು, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್, ನೈಋತ್ಯ ಪದವೀಧರ, ನೈಋತ್ಯ ಶಿಕ್ಷಕರ ಕ್ಷೇತ್ರ: ವಿ.ಸುನೀಲ್ ಕುಮಾರ್, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ (ಸಹ ಉಸ್ತುವಾರಿ), ಬೆಂಗಳೂರು ಪದವೀಧರ ಕ್ಷೇತ್ರ: ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರ: ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರ: ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಅವರನ್ನು ನೇಮಕ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ