ಮೈಸೂರು, ಮೇ.18: ರಾಜ್ಯ ವಿಧಾನ ಪರಿಷತ್ಗೆ (Legislative Council) ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಅದರಂತೆ ವಿಧಾನಪರಿಷತ್‌ನ ನೈಋತ್ಯ ಪದವೀಧರ, ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ನಾಮಪತ್ರ ಅಂಗೀಕಾರ ಮತ್ತು ತಿರಸ್ಕೃತ ಪಟ್ಟಿ ರಿಲೀಸ್ ಮಾಡಿದ್ದು, ಹೀಗಿದೆ.
ಕ್ಷೇತ್ರ | ನಾಮಪತ್ರ ಸಲ್ಲಿಕೆ | ಅಂಗೀಕಾರ | ತಿರಸ್ಕೃತ |
ನೈಋತ್ಯ ಪದವೀಧರರ ಕ್ಷೇತ್ರ | 11 | 11 | 00 |
ದಕ್ಷಿಣ ಶಿಕ್ಷಕರ ಕ್ಷೇತ್ರ | 13 | 13 | 00 |
ನೈಋತ್ಯ ಶಿಕ್ಷಕರ ಕ್ಷೇತ್ರ | 10 | 09 | 01 |
ಇನ್ನು ಪಕ್ಷೇತರ ಅಭ್ಯರ್ಥಿ ಎಂ.ಸತೀಶ್ ಕಾರಂತ್ ಎಂಬುವವರ ನಾಮಪತ್ರ ಮಾತ್ರ ತಿರಸ್ಕೃತವಾಗಿದ್ದು, ಮೇ 20ರ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.
ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಮರಿತಿಬ್ಬೇಗೌಡ ಕಣಕ್ಕೆ
ನಿನ್ನೆ(ಮೇ.17) ಆರು ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿದ್ದು, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್, ನೈಋತ್ಯ ಪದವೀಧರ, ನೈಋತ್ಯ ಶಿಕ್ಷಕರ ಕ್ಷೇತ್ರ: ವಿ.ಸುನೀಲ್ ಕುಮಾರ್, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ (ಸಹ ಉಸ್ತುವಾರಿ), ಬೆಂಗಳೂರು ಪದವೀಧರ ಕ್ಷೇತ್ರ: ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರ: ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರ: ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಅವರನ್ನು ನೇಮಕ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ