ಮೈಸೂರು ಸರ್ಕಾರಿ ಆಸ್ಪತ್ರೆಯಲ್ಲಿ ನೀರು, ವಿದ್ಯುತ್ ಸಮಸ್ಯೆ; ಸರಿಯಾದ ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ
ಹೆಚ್‌ಡಿ ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಮತ್ತು ನೀರಿನ ನಿರಂತರ ಕೊರತೆಯಿಂದಾಗಿ ರೋಗಿಗಳು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನೀರಿಲ್ಲದೆ ಪರದಾಡುತ್ತಿರುವ ಬಗ್ಗೆ ಹೇಳಿಕೊಳ್ಳಲಾಗಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೈಸೂರು, ಮೇ.16: ಕರ್ನಾಟಕದ ಗ್ರಾಮೀಣ ಭಾಗ ಮತ್ತು ದೂರದ ಊರುಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿವೆ, ಆದರೆ ಇಲ್ಲಿಯ ವಾಸ್ತವವೇ ಬೇರೆ ಇದೆ. ಬಡವರ ಆರೋಗ್ಯ ಸೇವೆಗಾಗಿ ಶ್ರಮಿಸುತ್ತಿದ್ದೇವೆ. ಆರೋಗ್ಯ ಕ್ಷೇತ್ರದಲ್ಲಿ ನಾವು ಬಹಳಷ್ಟು ಅಭಿವೃದ್ಧಿ ಮಾಡಿದ್ದೇವೆ ಎಂದು ಹೇಳುವ ರಾಜಕಾರಣಿಗಳು ಒಮ್ಮೆ ಹೆಚ್‌ಡಿ ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ (Government Hospital) ಭೇಟಿ ನೀಡಿ.
ಈ ಭಾಗದಲ್ಲಿ ಹೆಚ್ಚಾಗಿರುವ ಬುಡಕಟ್ಟು ಜನರಿಗೆ ಸೇವೆ ಸಲ್ಲಿಸುತ್ತಿರುವ ಹೆಚ್‌ಡಿ ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಮತ್ತು ನೀರಿನ ನಿರಂತರ ಕೊರತೆಯಿಂದಾಗಿ ರೋಗಿಗಳು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನೀರಿಲ್ಲದೆ ಪರದಾಡುತ್ತಿರುವ ಬಗ್ಗೆ ಹೇಳಿಕೊಳ್ಳಲಾಗಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರೋಗಿಗಳಿಗೆ ಬೇಕಾಗಿರುವ ಅಗತ್ಯ ಚಿಕಿತ್ಸೆಗಳನ್ನು ನೀಡಲು ಸೌಲಭ್ಯದ ಕೊರತೆಯಿಂದಾಗಿ ಕಳೆದ ಎರಡು ದಿನದಿಂದ ಕನಿಷ್ಠ 5 ರಿಂದ 10 ಡಯಾಲಿಸಿಸ್ ರೋಗಿಗಳಿಗೆ ಆಸ್ಪತ್ರೆಯ ಸಿಬ್ಬಂದಿ ಚಿಕಿತ್ಸೆ ನೀಡಲಾಗಿಲ್ಲ. ತೀವ್ರ ಮೂತ್ರಪಿಂಡದ ಸಮಸ್ಯೆಗಳಿರುವ ವ್ಯಕ್ತಿಗಳಿಗೆ ಡಯಾಲಿಸಿಸ್ ಮಾಡುವುದು ಅತ್ಯವಶ್ಯಕ. ಆದರೆ ಆಸ್ಪತ್ರೆಯಲ್ಲಿ ವಿದ್ಯುತ್ ಮತ್ತು ನೀರಿನ ಸಮಸ್ಯೆಯಿಂದಾಗಿ ರೋಗಿಗಳಿಗೆ ಚಿಕಿತ್ಸೆ ಸಹ ಕಷ್ಟಕರವಾಗಿದೆ. ಈ ಆಸ್ಪತ್ರೆಯಲ್ಲಿ ಅತಿ ಮುಖ್ಯವಾದ ನೀರು, ವಿದ್ಯುತ್ ಇಲ್ಲದೆ ಅನೇಕರ ರೋಗಿಗಳ ಜೀವಕ್ಕೆ ಅಪಾಯವಿದೆ ಎಂಬಂತಾಗಿದೆ.
ಆಸ್ಪತ್ರೆಗೆ ಬಂದ ರೋಗಿಗಳು ಸರಿಯಾದ ಚಿಕಿತ್ಸೆ ಸಿಗದೆ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆಸ್ಪತ್ರೆಗೆ ಸೇರಿದ ನಂತರವೂ ಚಿಕಿತ್ಸೆ ಸಿಗದೆ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬೇರೆಡೆ ತೆರಳಿದ್ದಾರೆ. ಡಯಾಲಿಸಿಸ್ ಮಿಸ್ ಆದ ರೋಗಿಗಳು ಮತ್ತಷ್ಟು ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಈ ಸರ್ಕಾರಿ ಆಸ್ಪತ್ರೆಯಲ್ಲಿನ ಕಳಪೆ ಸೇವೆ ಮತ್ತು ಸಂಪನ್ಮೂಲಗಳ ಕೊರತೆಯ ವಿರುದ್ಧ ರೋಗಿಗಳು ತಮ್ಮ ಹತಾಶೆ ಮತ್ತು ಭಯವನ್ನು ವ್ಯಕ್ತಪಡಿಸಿದ್ದಾರೆ. ಬಡ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆ ಇದ್ದರೂ ಇಲ್ಲದಂತಾಗಿದೆ.
Disruption of power & water shortages are putting lives at risk in HD Kote taluk government hospital in #Mysuru district. Patients, including dialysis-dependent individuals, are being turned away due to the hospital’s inability to provide essential treatments. @XpressBengaluru… pic.twitter.com/oKsViAu65a
— Karthik K K (@Karthiknayaka) May 15, 2024
ಇದನ್ನೂ ಓದಿ: ಲಾಲ್ ಬಾಗ್ ಮಾವಿನ ಮೇಳಕ್ಕೆ ಡೇಟ್ ಫಿಕ್ಸ್; ಮೇ 24 -ಜೂನ್ 10 ವರೆಗೆ ಮಾವಿನ ಮೇಳ
ನಾವು ಸರ್ಕಾರಿ ಆಸ್ಪತ್ರೆಗಳ ಮೇಲೆ ಡಿಪೆಂಡ್ ಆಗಿದ್ದೇವೆ. ಆರೋಗ್ಯ ಸುಧಾರಿಸಬಹುದು ಎಂದು ಇಲ್ಲಿಗೆ ಬಂದ್ವಿ. ಸಾವಿರಾರು ರೂಪಾಯಿ ನೀಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ನಮ್ಮಿಂದ ಸಾಧ್ಯವಿಲ್ಲ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ವಿದ್ಯುತ್, ನೀರು ಮುಂತಾದ ಮೂಲ ಸೌಕರ್ಯಗಳೇ ಇಲ್ಲದಿದ್ದರೆ ರೋಗಿಗಳ ಪರಿಸ್ಥಿತಿ ಏನಾಗಬಹುದು? ಕೆಲವೊಮ್ಮೆ ಆಸ್ಪತ್ರೆ ಸಿಬ್ಬಂದಿ ಮಳೆ, ಸೆಸ್ಕ್ ಅಧಿಕಾರಿಗಳನ್ನು ದೂಷಿಸುತ್ತಾರೆ, ಆದರೆ ಚಿಕಿತ್ಸೆಗೆಂದೇ ಅಕ್ಕಪಕ್ಕದ ಹಳ್ಳಿಗಳಿಂದ ದೂರದೂರಿಂದ ಬರುವ ರೋಗಿಗಳ ಪರಿಸ್ಥಿತಿ, ಸಮಸ್ಯೆಗಳನ್ನು ಪರಿಗಣಿಸುವುದಿಲ್ಲ ಎಂದು ರೋಗಿಯ ಸಂಬಂಧಿ ರಂಗಸ್ವಾಮಿ ಬೇಸರ ವ್ಯಕ್ತಪಡಿಸಿದರು.
“ನಾವು ನಮ್ಮಲ್ಲಿರುವದರೊಂದಿಗೆ ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದ್ದೇವೆ, ಆದರೆ ಸ್ಥಿರವಾದ ವಿದ್ಯುತ್ ಮತ್ತು ನೀರು ಇಲ್ಲದೆ, ಈ ರೋಗಿಗಳಿಗೆ ಅಗತ್ಯವಿರುವ ಆರೈಕೆಯನ್ನು ಮಾಡಲು ಅಸಾಧ್ಯವಾಗುತ್ತಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿಯೊಬ್ಬರು ಹೇಳಿದರು.
ಇನ್ನು ಈ ಸಮಸ್ಯೆ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ.ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದು ಈ ಬಗ್ಗೆ ಪರಿಶೀಲಿಸಿ ಶೀಘ್ರದಲ್ಲಿಯೇ ಪರಿಹರಿಸುವುದಾಗಿ ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ