ಸ್ವಾತಂತ್ರ್ಯೋತ್ಸವವನ್ನು ನಾವು ಗೌರವದಿಂದ ಆಚರಿಸುತ್ತೇವೆ, ಬಿಜೆಪಿಯವರಂತೆ ಹರ್​ ಘರ್ ಎಂದು ನಾಟಕವಾಡಲ್ಲ; ಸಿದ್ಧರಾಮಯ್ಯ

ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಬಿಜೆಪಿ ಟೀಕೆ ಮುಂದುವರೆದ ವಿಚಾರವಾಗಿ ಮಾತನಾಡಿದ್ದು, ಬಿಜೆಪಿ ಅವರಿಗೆ ಕಾರ್ಯಕ್ರಮದಿಂದ ಭಯ ಬಂದಿದೆ. ಈ ಭಯದಲ್ಲಿಯೇ ಅವರು ಇನ್ನೂ ವ್ಯರ್ಥ ಟೀಕೆಗಳನ್ನು ‌ಮಾಡುತ್ತಿದ್ದಾರೆ.

ಸ್ವಾತಂತ್ರ್ಯೋತ್ಸವವನ್ನು ನಾವು ಗೌರವದಿಂದ ಆಚರಿಸುತ್ತೇವೆ, ಬಿಜೆಪಿಯವರಂತೆ ಹರ್​ ಘರ್ ಎಂದು ನಾಟಕವಾಡಲ್ಲ; ಸಿದ್ಧರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 08, 2022 | 2:00 PM

ಮೈಸೂರು: ನಾವು ಗೌರವದಿಂದ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದೇವೆ. ಬಿಜೆಪಿಯವರಂತೆ ಹರ್​ ಘರ್ ತಿರಂಗಾ​ ಎಂದು ನಾಟಕ ಮಾಡಲ್ಲ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದರು. ಹರಘರ್ ತಿರಂಗ ಇದು ಬಿಜೆಪಿ ಅವರ ನಾಟಕ. ಬಿಜೆಪಿ ಎಂದೂ ರಾಷ್ಟ್ರದ ಬಾವುಟಕ್ಕೆ ಗೌರವ ಕೊಟ್ಟವರಲ್ಲ. ಅವರು ರಾಷ್ಟ್ರಗೀತೆ, ಬಾವುಟವನ್ನು ವಿರೋಧಿಸುತ್ತಿದ್ದವರು. ಸಾವರ್ಕರ್, ಗೋಳ್ವಾಲ್‌ಕರ್ ಇವರು ಯಾರಿಗೂ ಬಾವುಟದ ಮೇಲೆ ನಂಬಿಕೆ ಇಲ್ಲ. ಬಿಜೆಪಿ ಸ್ವಾತಂತ್ರ್ಯ ರಾಷ್ಟ್ರ ಮಹೋತ್ಸವನ್ನು ರಾಜಕೀಯಕರಣ ಮಾಡಲು ಮುಂದಾಗುತ್ತಿದೆ. ರಾಷ್ಟ್ರಧ್ವಜವನ್ನು ಖಾದಿ ಅಥವಾ ಸಿಲ್ಕ್‌ನಲ್ಲಿ ಮಾತ್ರ ಮಾಡಬೇಕು. ಪಾಲಿಸ್ಟರ್‌ನಲ್ಲಿ ಮಾಡಿ ಚೀನಾಗೆ ಅನುಕೂಲ ಮಾಡುತ್ತಿದ್ದಾರೆ. ಚೀನಾದ ಅಮದು ಹೆಚ್ಚಾಗಿದೆ ಇದರಿಂದ ಮೇಕ್ ಇನ್ ಇಂಡಿಯಾ ಎಲ್ಲಿದೆ ಎಂದು ಪ್ರಶ್ನಿಸಿದರು. ಆತ್ಮ ನಿರ್ಭರ ಭಾರತ ಎಂದರೇನು ಎಂದು ಸಿದ್ದರಾಮಯ್ಯ ಪ್ರಶ್ನಿದರು.

ಇದನ್ನೂ ಓದಿ: ಸಿದ್ದರಾಮೋತ್ಸವದಿಂದ ಮರಳುವಾಗ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಿದ ಸಿದ್ದರಾಮಯ್ಯ

ಸಿದ್ದರಾಮೋತ್ಸವ ಕಾರ್ಯಕ್ರಮದಿಂದ ಬಿಜೆಪಿಗೆ ಭಯ ಶುರುವಾಗಿದೆ

ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಬಿಜೆಪಿ ಟೀಕೆ ಮುಂದುವರೆದ ವಿಚಾರವಾಗಿ ಮಾತನಾಡಿದ್ದು, ಬಿಜೆಪಿ ಅವರಿಗೆ ಕಾರ್ಯಕ್ರಮದಿಂದ ಭಯ ಬಂದಿದೆ. ಈ ಭಯದಲ್ಲಿಯೇ ಅವರು ಇನ್ನೂ ವ್ಯರ್ಥ ಟೀಕೆಗಳನ್ನು ‌ಮಾಡುತ್ತಿದ್ದಾರೆ. ಅಹಿಂದ ಮತಗಳನ್ನು ಮತ ಪಟ್ಟಿಯಿಂದ ತೆಗೆಸಿರುವ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ನಮ್ಮ ಅಧ್ಯಕ್ಷರು ಹೇಳಿದ ಮೇಲೆ ಆ ಮಾತಿನಲ್ಲಿ ಸತ್ಯವಿರುತ್ತದೆ. ಅಲ್ಪ ಸಂಖ್ಯಾತರು, ಹಿಂದುಳಿದ, ದಲಿತರ ಮತಗಳು ಕಾಂಗ್ರೆಸ್ ಪರವಾಗಿ ಇರುತ್ತದೆ. ಈ ಕಾರಣ ಆ ಮತಗಳನ್ನ ಪಟ್ಟಿಯಿಂದ ಡೀಲಿಟ್ ಮಾಡುವ ಕೆಲಸ ನಡೆದಿರಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು. ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ನಾವು ಸರ್ವೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಮಳೆಯಿಂದಾಗಿ ಅಪಾರ ಹಾನಿಯಾಗಿದೆ ಎಂದು ದೇಶದ ಆರ್ಥಿಕ ಸ್ಥಿತಿ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಭಾರತದಲ್ಲೂ ಶ್ರೀಲಂಕಾ ಪರಿಸ್ಥಿತಿ ಎದುರಾದ್ರೂ ಆಶ್ಚರ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಮೊಳೆ ಹೊಡೆದಿರಿ: ಸಿದ್ದರಾಮಯ್ಯ ವಿರುದ್ಧ ಮತ್ತೆ ಹರಿಹಾಯ್ದ ಎಚ್​ಡಿ ಕುಮಾರಸ್ವಾಮಿ

ಮುಂದಿನ ಚುನಾವಣೆಗೆ ಸಿದ್ದರಾಮಯ್ಯ ಕ್ಷೇತ್ರ ವಿಚಾರವಾಗಿ ಮಾತನಾಡಿದ ಅವರು ಚುನಾವಣೆ ಹತ್ತಿರ ಬಂದಾಗ ನಿಮಗೆ ನನ್ನ ಸ್ಪರ್ಧೆಯ ಕ್ಷೇತ್ರ ಹೇಳುತ್ತೇನೆ. ಈಗ ಯಾವುದೇ ನಿರ್ಧಾರ ಇಲ್ಲ. ವರುಣದಲ್ಲಿ ಕಾರ್ಯಕ್ರಮ ಮಾಡಿದ ಕೂಡಲೇ ವರುಣಾದಲ್ಲಿ ಸ್ಪರ್ಧಿಸುತ್ತೇನೆ ಅಂತಾ ಯಾಕೆ ಅಂದು ಕೊಳ್ತಿರಾ? ನಾನು ಕಾಂಗ್ರೆಸ್ ನಾಯಕನಾಗಿ ಎಲ್ಲಾ ಕ್ಷೇತ್ರಕ್ಕೂ ಹೋಗಿ ಕಾರ್ಯಕ್ರಮ ಮಾಡ್ತಿದ್ದೇನೆ ಅಷ್ಟೇ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:59 pm, Mon, 8 August 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ