AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಹೆಂಡಿರ ಜಗಳ ಹತ್ಯೆ ತನಕ: ಪತಿಗೇ ಸ್ಕೆಚ್​ ಹಾಕಿದ್ದ ಪತ್ನಿ ಅರೆಸ್ಟ್​

ಕೌಟುಂಬಿಕ ಕಲಹ ಹಿನ್ನಲೆ ಸಹೋದರ ಮತ್ತು ತಂಡದ ಜೊತೆ ಸೇರಿ ಪತ್ನಿಯೇ ಪತಿಯನ್ನ ಕೊಲೆ ಮಾಡಿಸಿರುವ ಆಘಾತಕಾರಿ ಘಟನೆ ಮೈಸೂರಲ್ಲಿ ನಡೆದಿದೆ. ದರೋಡೆ ಯತ್ನದ ವೇಳೆ ದಾಳಿ ನಡೆದಿದೆ ಎಂದು ಬಿಂಬಿಸಲು ಹೊರಟಿದ್ದ ಪತ್ನಿಯ ಕಳ್ಳಾಟ ಪೊಲೀಸರ ತನಿಖೆ ವೇಳೆ ಗೊತ್ತಾಗಿದ್ದು, ಘಟನೆ ಸಂಬಂಧ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಗಂಡ ಹೆಂಡಿರ ಜಗಳ ಹತ್ಯೆ ತನಕ: ಪತಿಗೇ ಸ್ಕೆಚ್​ ಹಾಕಿದ್ದ ಪತ್ನಿ ಅರೆಸ್ಟ್​
ಸಾಂದರ್ಭಿಕ ಚಿತ್ರ
ರಾಮ್​, ಮೈಸೂರು
| Edited By: |

Updated on: Nov 16, 2025 | 6:53 AM

Share

ಮೈಸೂರು, ನವೆಂಬರ್​ 16: ಕೌಟುಂಬಿಕ ಕಲಹ ಹಿನ್ನಲೆ ದರೋಡೆ ನಾಟಕವಾಡಿ ಪತಿಯನ್ನೇ ಸ್ಕೆಚ್​​ ಹಾಕಿ ಪತ್ನಿ ಮುಗಿಸಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡಿನ ರಾಜೇಂದ್ರ ಮೃತ ದುರ್ದೈವಿಯಾಗಿದ್ದು, ಆರೋಪಿ ಸಂಗೀತಾ ಮತ್ತು ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನು ಮಾಡಿರುವ ತಪ್ಪನ್ನು ಸಂಗೀತಾ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ.

ಘಟನೆ ಏನು?

ಅಕ್ಟೋಬರ್ 25ರಂದು ರಾಜೇಂದ್ರ ತನ್ನ ಪತ್ನಿ ಸಂಗೀತಾಳ ಜೊತೆ ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಸಮಯದಲ್ಲಿ ಬಿಳಿ ಬಣ್ಣದ ಕಾರಿನಲ್ಲಿದ್ದ ದುಷ್ಕರ್ಮಿಗಳು ಬೈಕ್​ ಅಡ್ಡಗಟ್ಟಿದ್ದರು. ಕಾರಿನಲ್ಲಿದ್ದ ವ್ಯಕ್ತಿ ಹತ್ತಿರ ಬಂದು ಮೊದಲು ಸ್ಕೂಟರ್ ಬೀಳಿಸಿದ್ದು, ರಾಜೇಂದ್ರ ಹಾಗೂ ಸಂಗೀತಾ ಕೆಳಗೆ ಬಿದ್ದಿದ್ದರು. ಈ ವೇಳೆ ಕಾರಿನಿಂದ ಕೆಳಗೆ ಇಳಿದಿದ್ದ ಮತ್ತೊಬ್ಬ ರಾಜೇಂದ್ರ ಜೊತೆ ಜಗಳ ಮಾಡಿದ್ದ. ಸಂಗೀತಾ ಕುತ್ತಿಗೆಯಲ್ಲಿದ್ದ ಚೈನ್ ಕಸಿಯಲೂ ಆರೋಪಿಗಳು ಯತ್ನಿಸಿದ್ದರು. ಅಲ್ಲದೆ, ಹರಿತವಾದ ಆಯುಧದಿಂದ ರಾಜೇಂದ್ರಗೆ ಒಬ್ಬ ತಿವಿದಿದ್ದ. ಅದೇ ವೇಳೆ ಸ್ಥಳಕ್ಕೆ ಮತ್ತೊಂದು ವಾಹನ ಬಂದ ಕಾರಣ ಆರೋಪಿಗಳು ಎಸ್ಕೇಪ್​ ಆಗಿದ್ದರು.

ಇದನ್ನೂ ಓದಿ: ಗೋವಾದಲ್ಲಿ ವಿದೇಶಿ ಮಹಿಳೆಯರಿಗೆ ಕಿರುಕುಳ, ಪಿರಿಯಾಪಟ್ಟಣದ 3 ಯುವಕರ ಬಂಧನ

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜೇಂದ್ರ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ನಂಜನಗೂಡು ಪೊಲೀಸರಿಗೆ ತನಿಖೆ ವೇಳೆ ಆಘಾತಕಾರಿ ಸತ್ಯ ಗೊತ್ತಾಗಿದೆ. ಇದು ದರೋಡೆ ಯತ್ನ ಅಲ್ಲ, ರಾಜೇಂದ್ರ ಕೊಲೆ ಮಾಡಲು ಆತನ ಪತ್ನಿ ಸಂಗೀತಾ ಹಾಕಿದ್ದ ಸ್ಕೆಚ್ ಎಂಬುದು ಬೆಳಕಿಗೆ ಬಂದಿದೆ. ತನ್ನ ಸಹೋದರ ಸಂಜಯ್ ಬಳಸಿಕೊಂಡು ಸಂಗೀತಾ ಪತಿ ಮೇಲೆ ದಾಳಿ ಮಾಡಿಸಿದ್ದು, ಈ ಕೃತ್ಯದಲ್ಲಿ ಸಂಜಯ್ ಸ್ನೇಹಿತ ವಿಘ್ನೇಶ್ ಹಾಗೂ ಒಬ್ಬ ಬಾಲಕ ಭಾಗಿಯಾಗಿದ್ದಾರೆ.

ಇನ್ನು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಆರೋಪಿಗಳು ಬಾಡಿಗೆಗೆ ಪಡೆದಿದ್ದು, ಸಂಗೀತಾ ಸಹೋದರ ಸಂಜಯ್ ಮತ್ತು ತಂಡ ಹತ್ಯೆಗೆ ಸಂಚು ರೂಪಿಸಿತ್ತು. ಘಟನೆ ವೇಳೆ ಸಂಗೀತಾ ಸಹ ಸಾಕಷ್ಟು ನಟಿಸಿದ್ದಳು ಎಂಬುದು ಗೊತ್ತಾಗಿದೆ. ಘಟನೆ ಸಂಬಂಧ ಪೊಲೀಸರು ಸಂಗೀತಾ, ಸಂಜಯ್​​, ವಿಘ್ನೇಶ್​ ಮತ್ತು ಓರ್ವ ಬಾಲಕನನ್ನು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!