Mysuru News: ಪಿರಿಯಾಪಟ್ಟಣದಲ್ಲಿ ಅಕ್ರಮ ಸಂಪರ್ಕದ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ಪಿರಿಯಾಪಟ್ಟಣ ತಾಲೂಕಿನ ಕುಗ್ರಾಮದ ಬುಡಕಟ್ಟು ನಿವಾಸಿ ಮಣಿ ಎಂಬುವವರ ಒಡೆತನದ ಸರ್ವೆ ನಂಬರ್ 2ರ ಜಮೀನಿನಲ್ಲಿ ಆನೆ ವಿದ್ಯುತ್ ಸ್ಪರ್ಶಿಸಿದೆ. ನಿನ್ನೆ ಗುರುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಜಂಬೂ ಶವವಾಗಿ ಪತ್ತೆಯಾಗಿದೆ.

Mysuru News: ಪಿರಿಯಾಪಟ್ಟಣದಲ್ಲಿ ಅಕ್ರಮ ಸಂಪರ್ಕದ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
ಅಕ್ರಮ ಸಂಪರ್ಕದ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
ಸಾಧು ಶ್ರೀನಾಥ್​

Updated on: Dec 15, 2023 | 10:40 AM

ಮೈಸೂರು ಜಿಲ್ಲೆ ಪಿರಿಯಾಪಟ್ಟಣ (Periyapatna) ತಾಲೂಕಿನ ಮರಳುಕಟ್ಟೆಯಲ್ಲಿ ಅಕ್ರಮವಾಗಿ ಸರಬರಾಜು ಮಾಡುತ್ತಿದ್ದ ತಂತಿ ಬೇಲಿ ಸಂಪರ್ಕಕ್ಕೆ ಬಂದ 30 ವರ್ಷದ ಕಾಡಾನೆಯೊಂದು (Wild Elephant) ವಿದ್ಯುತ್ ಸ್ಪರ್ಶದಿಂದ (Electrocution) ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಕುಗ್ರಾಮದ ಬುಡಕಟ್ಟು ನಿವಾಸಿ ಮಣಿ ಎಂಬುವವರ ಒಡೆತನದ ಸರ್ವೆ ನಂಬರ್ 2ರ ಜಮೀನಿನಲ್ಲಿ ಆನೆ ವಿದ್ಯುತ್ ಸ್ಪರ್ಶಿಸಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಆನೆ ಶವವಾಗಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದರು ಎಂದು deccanherald.com ವರದಿ ಮಾಡಿದೆ.

Also Read:  ಧಾರವಾಡ – ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಮರಣೋತ್ತರ ಪರೀಕ್ಷೆ ನಡೆಸಿದ ಪಶುವೈದ್ಯ ಚಿಟ್ಟಿಯಪ್ಪ, ವಿದ್ಯುತ್ ಸ್ಪರ್ಶದಿಂದ ಸಾವು ಸಂಭವಿಸಿದೆ ಎಂದು ಖಚಿತಪಡಿಸಿದ್ದಾರೆ. ಮಣಿ ವಿರುದ್ಧ ಅರಣ್ಯ ಇಲಾಖೆ ಪೊಲೀಸರಿಗೆ ದೂರು ನೀಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:36 am, Fri, 15 December 23

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us