AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ: 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದ ಮಾಜಿ ಸಿಎಂ

Siddaramaiah Announces Retirement From Electoral Politics: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಒಟ್ಟು ಎರಡು ಅವಧಿಗಳಲ್ಲಿ ಮುಖ್ಯಮಂತ್ರಿಯಾಗಿ 8 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನೂ ಬರೆದಿರುವ ಇವರು, ಈ ಹಿಂದೆಯೂ ಇಂತಹುದ್ದೇ ಹೇಳಿಕೆಯನ್ನು ಹಲವು ಬಾರಿ ನೀಡಿದ್ದರು ಎನ್ನುವುದೂ ಇಲ್ಲಿ ಗಮನಾರ್ಹ ವಿಷಯ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ: 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದ ಮಾಜಿ ಸಿಎಂ
ಸಿದ್ದರಾಮಯ್ಯImage Credit source: PTI
ದಿಲೀಪ್​, ಚೌಡಹಳ್ಳಿ
| Edited By: |

Updated on:Jul 26, 2026 | 1:26 PM

Share

ಮುಖ್ಯಾಂಶಗಳು

  • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ
  • ಕೆ‌.ಆರ್.ಪೇಟೆಯಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ
  • 2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಸಿದ್ದರಾಮಯ್ಯ

ಮಂಡ್ಯ, ಜುಲೈ 26: ಇತ್ತೀಚೆಗಷ್ಟೇ ಕರ್ನಾಟಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆಯಲ್ಲಿ‌ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಈ ರೀತಿ ಹೇಳಿಕೆ ನೀಡಿದ್ದಾರೆ. ಆದರೆ ಅದೇ ವೇಳೆ ನೀವಿನ್ನೂ 10 ವರ್ಷ ರಾಜಕೀಯದಲ್ಲಿ ಇರಬೇಕೆಂದು ಬೆಂಬಲಿಗರು ಒತ್ತಾಯಿಸಿರುವ ಘಟನೆಯೂ ನಡೆದಿದೆ.

ಸಿದ್ದರಾಮಯ್ಯ ಹೇಳಿರೋದೇನು?

ಚುನಾವಣಾ ರಾಜಕೀಯದ ನಿವೃತ್ತಿಯ ತೀರ್ಮಾನದ ಬಗ್ಗೆ  ಸಿದ್ದರಾಮಯ್ಯನವರು ಆಡಿರುವ ಮಾತುಗಳನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದೆ. ಅವರ ಈ ಮಾತಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ನೀವು ರಾಜಕೀಯದಲ್ಲಿ ಇರಬೇಕು ಎಂದು ಒತ್ತಾಯಿಸಿದರೂ ಸಿದ್ದರಾಮಯ್ಯನವರು ಮಾತ್ರ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್!

ಸಿದ್ದರಾಮಯ್ಯ ಅವರು ಎರಡು ಅವಧಿಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು, ಒಟ್ಟು 8 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನೂ ಬರೆದಿದ್ದಾರೆ. ಮೊದಲ ಅವಧಿಯಲ್ಲಿ 13 ಮೇ 2013 ರಿಂದ 15 ಮೇ 2018 ರವರೆಗೆ ಅವರು ಸಿಎಂ ಆಗಿ 5 ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರೆ, ಎರಡನೇ ಅವಧಿಯಲ್ಲಿ 20 ಮೇ 2023 ರಿಂದ 3 ಜೂನ್ 2026 ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ಹಿಂದೆಯೂ ಇಂತಹುದ್ದೇ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ

2013ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗುವ ಸಂದರ್ಭದಲ್ಲಿ, ಇದು ತಮ್ಮ ಕೊನೆಯ ಚುನಾವಣೆ ಎಂದು ಮಾಧ್ಯಮಗಳ ಮುಂದೆ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರಗಳಿಂದ ಸ್ಪರ್ಧಿಸುವ ಮುನ್ನ, 2018ರ ಚುನಾವಣೆಯು ಬಹುಪಾಲು ತಮ್ಮ ಕೊನೆಯ ಚುನಾವಣೆಯಾಗಲಿದೆ ಎಂದು ಪುನರುಚ್ಚರಿಸಿದ್ದರು. 2024ರ ಏಪ್ರಿಲ್‌ನಲ್ಲಿ ಮೈಸೂರಿನಲ್ಲಿ ಮಾತನಾಡುವ ಸಂದರ್ಭದಲ್ಲಿಯೂ ತನಗೆ ಈಗ 77 ವರ್ಷ. ಈ ಅವಧಿ ಮುಗಿಯುವಾಗ 81-82 ವರ್ಷ ದಾಟಿರುತ್ತದೆ. ಆ ಸಂದರ್ಭದಲ್ಲಿ ಉತ್ಸಾಹದಿಂದ ಕೆಲಸ ಮಾಡಲು ಆರೋಗ್ಯ ಸಹಕರಿಸುವುದಿಲ್ಲ. ಹಾಗಾಗಿ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:10 pm, Sun, 26 July 26

Follow Us
ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!
ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ