AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು?

ಗಂಡ ಹೆಂಡ್ತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಪ್ರವಾಸದ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದು, ಪ್ರವಾಸಕ್ಕೆ ಪತಿ ಅನುಮತಿ ನಿರಾಕರಿಸಿದ್ದಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರು ಪ್ರಕರಣ ನಡೆದಿದೆ . ಆದರೆ, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಮಗಳು ಆರೋಪಿಸಿದರೆ, ಮಗ ತಂದೆಯ ಪರ ನಿಂತಿದ್ದಾನೆ. ಈ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು?
ಸಂಧ್ಯಾ (ಮೃತ ಮಹಿಳೆ)
ರಾಮ್​, ಮೈಸೂರು
| Edited By: |

Updated on: Feb 20, 2026 | 3:14 PM

Share

ಮೈಸೂರು (ಫೆಬ್ರವರಿ.20): ಪ್ರವಾಸದ ವಿಚಾರಕ್ಕೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತ್ನಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಸರಸ್ವತಿಪುರಂನಲ್ಲಿ ನಡೆದಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ ಸಂಧ್ಯಾ ಎಂಬುವವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆದರೆ, ಈ ಸಾವಿನ ಸುತ್ತ ಇದೀಗ ಕುಟುಂಬದ ಸದಸ್ಯರ ನಡುವೆಯೇ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಹೀಗಾಗಿ ಗೃಹಿಣಿ ಸಂಧ್ಯಾ ಆತ್ಮಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ.

ಕಳೆದ ಬುಧವಾರ ಸಂಜೆ ಪ್ರವಾಸಕ್ಕೆ (ಫಾರಿನ್ ಟ್ರಿಪ್) ಹೋಗುವ ವಿಚಾರವಾಗಿ ದಂಪತಿ ನಡುವೆ ಗಲಾಟೆಯಾಗಿತ್ತು ಎನ್ನಲಾಗಿದೆ. ಗಲಾಟೆಯ ನಂತರ ರಂಗನಾಥ್ ಮನೆಯಿಂದ ಹೊರಹೋಗಿದ್ದ ಸಮಯದಲ್ಲಿ ಸಂಧ್ಯಾ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಇದನನ್ನೂ ನೋಡಿ: ಮಾನಸಿಕ ಒತ್ತಡ, ಆತಂಕ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಮೂಲತಃ ಬೆಂಗಳೂರಿನವರಾದ ಸಂಧ್ಯಾ ಅವರು 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಸೃಷ್ಟಿ ಎಂಬ ಪುತ್ರಿ ಹಾಗೂ ಕೌಶಿಕ್ ಎಂಬ ಪುತ್ರನಿದ್ದಾನೆ. ಸೃಷ್ಟಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಕೌಶಿಕ್ ತಂದೆ-ತಾಯಿಯೊಂದಿಗೆ ಮೈಸೂರಿನಲ್ಲಿ ನೆಲೆಸಿದ್ದಾನೆ.

ತಾಯಿಯನ್ನು ಅನುಮಾನದಿಂದ ನೋಡುತ್ತಿದ್ದರು

ನನ್ನ ತಾಯಿ ಸಂಧ್ಯಾಳ ಸಾವು ಕೇವಲ ಆತ್ಮಹತ್ಯೆಯಲ್ಲ, ಇದೊಂದು ಕೊಲೆ ಎಂದು ಮೃತ ಸಂಧ್ಯಾ ಅವರ ಪುತ್ರಿ ಸೃಷ್ಟಿ ಗಂಭೀರ ಆರೋಪ ಮಾಡಿದ್ದಾರೆ. ‘ನನ್ನ ತಂದೆ ಮತ್ತು ಸಹೋದರ ಸೇರಿಕೊಂಡು ತಾಯಿಗೆ ಕಿರುಕುಳ ನೀಡುತ್ತಿದ್ದರು. ತಂದೆ ಯಾವಾಗಲೂ ತಾಯಿಯನ್ನು ಅನುಮಾನದಿಂದ ನೋಡುತ್ತಿದ್ದರು ಹಾಗೂ ಹಣದ ವಿಷಯಕ್ಕೆ ಗಲಾಟೆ ಮಾಡುತ್ತಿದ್ದರು. ತಂದೆ ಜೊತೆ ಸೇರಿಕೊಂಡು ನನ್ನ ಸಹೋದರ ಕೆಟ್ಟ ಬುದ್ಧಿ ಕಲಿತ್ತಿದ್ದಾನೆ. ತಂದೆ ಹಾಗೂ ನನ್ನ ಸಹೋದರ ಪ್ರತಿನಿತ್ಯ ದುಡ್ಡು ದುಡ್ಡು ಎನ್ನುತ್ತಾರೆ.  ನನ್ನ ತಾಯಿಯ ಸಾವಿಗೆ ಇವರಿಬ್ಬರೇ ಕಾರಣ, ಅವರಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ತಾಯಿಯ ಅಂತ್ಯಸಂಸ್ಕಾರವನ್ನು ಇವರು ಮಾಡಬಾರದು. ಬದಲಿಗೆ ನನ್ನ ಮಾವ ಮಾಡಬೇಕು’ ಎಂದು ಸೃಷ್ಟಿ ಆಕ್ರೋಶ ಹೊರಹಾಕಿದ್ದಾರೆ.

ತಾಯಿ ಆತ್ಮಹತ್ಯೆಗೆ ಮಗ ಹೇಳಿದ್ದೇನು?

ಇನ್ನೊಂದೆಡೆ, ಮೃತ ಸಂಧ್ಯಾ ಅವರ 17 ವರ್ಷದ ಮಗ ಕೌಶಿಕ್ ತನ್ನ ತಂದೆಯ ಪರವಾಗಿ ಹೇಳಿಕೆ ನೀಡಿದ್ದಾನೆ. ನಮ್ಮ ಕುಟುಂಬದಲ್ಲಿ ಯಾವುದೇ ಜಗಳವಿರಲಿಲ್ಲ. ತಾಯಿ ಪ್ರವಾಸಕ್ಕೆ ಹೋಗುತ್ತೇನೆ ಎಂದಾಗ, ನನಗೆ ಪರೀಕ್ಷೆ ಇರುವ ಕಾರಣ ತಂದೆ ಈಗ ಬೇಡ’ ಎಂದಿದ್ದರು. ಇಷ್ಟಕ್ಕೇ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮ್ಮ ಸಾವಿಗೆ ಶರಣಾಗಿದ್ದನ ನಂತರ ಶವವನ್ನು ನಾನೇ ಮೊದಲು ನೋಡಿದ್ದೇನೆ. ನಂತರ ಅಪ್ಪ ಬಂದು ನೋಡಿದ್ದಾರೆ. ಆದರೆ, ಅಕ್ಕ ವಿದೇಶದಲ್ಲಿದ್ದುಕೊಂಡು ಅಪ್ಪನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾಳೆ ಎಂದು ಕೌಶಿಕ್ ಹೇಳಿದ್ದಾನೆ.

ಪತಿ ರಂಗನಾಥ್ ಸ್ಪಷ್ಟನೆ

ಇನ್ನು ಪತ್ನಿ ಸಂಧ್ಯಾ ಸಾವಿನ ಬಗ್ಗೆ ಪತಿ ರಂಗನಾಥ್ ಪ್ರತಿಕ್ರಿಯಿಸಿದ್ದು, ನಾನು ನನ್ನ ಪತ್ನಿಯನ್ನು ತುಂಬಾ ಪ್ರೀತಿಸುತ್ತಿದ್ದೆ. ಅವಳ ಹೆಸರಿಗೇ 90% ಆಸ್ತಿ ಮಾಡಿದ್ದೇನೆ. ಈ ಹಿಂದೆ ಡೆನ್ಮಾರ್ಕ್ ಸೇರಿದಂತೆ ಹಲವು ದೇಶಗಳಿಗೆ ಅವಳನ್ನು ನಾನೇ ಪ್ರವಾಸಕ್ಕೆ ಕಳುಹಿಸಿಕೊಟ್ಟಿದ್ದೆ. ಈ ಬಾರಿ ಮಗನ ಎಕ್ಸಾಮ್ ಇದೆ ಎಂಬ ಕಾರಣಕ್ಕೆ ಬೇಡ ಎಂದಿದ್ದೆ. ಫೋನಿನಲ್ಲಿ ಯಾರೋ ಮಾತನಾಡುತ್ತಾರೆ ಎಂಬ ವಿಷಯಕ್ಕೆ ಹಿಂದೆ ಒಮ್ಮೆ ಗಲಾಟೆಯಾಗಿದ್ದು ನಿಜ. ಆದರೆ, ನಾನು ಅವಳನ್ನು ಕೊಂದಿಲ್ಲಎಂದಿದ್ದಾರೆ.

ಸದ್ಯ ಮೃತ ಸಂಧ್ಯಾ ಅವರ ಸಹೋದರ ಗುರುಮೂರ್ತಿ ಅವರು ನೀಡಿದ ದೂರಿನ ಮೇರೆಗೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​