ಮೈಸೂರು: ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಟ್ರ್ಯಾಕ್ಟರ್‌ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಕೃಷಿ ಕೆಲಸಕ್ಕೆ ಹೋಗುತ್ತಿದ್ದ 24 ವರ್ಷದ ರೂಪಾ ಮೃತ ದುರ್ದೈವಿ. ಟ್ರ್ಯಾಕ್ಟರ್‌ನಲ್ಲಿ ಹೆಚ್ಚು ಜನರನ್ನು ಸಾಗಿಸುತ್ತಿದ್ದಿದ್ದೇ ಘಟನೆಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದು, ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರ ಸೆರೆ
ಪ್ರಯಾಣಿಕರ ಸೋಗಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಲಗೇಜ್ ಬ್ಯಾಗ್ ಮೂಲಕ ಹೊರ ರಾಜ್ಯದಿಂದ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ವೇಳೆ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 6.5 ಲಕ್ಷ ರೂಪಾಯಿ ಮೌಲ್ಯದ 21.5 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.
ಬಂಧಿತ ಡ್ರಗ್ಸ್ ಪೆಡ್ಲರ್ಸ್ ತ್ರಿಪುರಾ ಮತ್ತು ಬಿಹಾರದಿಂದ ಡ್ರಗ್ಸ್ ಸಾಗಾಟ ಮಾಡುತ್ತಿದ್ದರು. ಗಾಂಜಾವನ್ನು ಪಾಕೇಟ್ ಮಾದರಿಯಲ್ಲಿ ಸಿದ್ಧಪಡಿಸುತ್ತಿದ್ದರು. ಬಳಿಕ ಆ ಪಾಕೇಟ್ಗಳನ್ನು ಲಗೇಜ್ ಬ್ಯಾಗ್ಗಳಲ್ಲಿಟ್ಟು ಸಾಗಾಟ ಮಾಡುತ್ತಿದ್ದರು ಎಂದು ತನಿಖೆ ವೇಳೆ ವಿಷಯ ಬೆಳಕಿಗೆ ಬಂದಿದೆ. ಸದ್ಯ ಬೆಂಗಳೂರಿಗೆ ಬಂದು ಸಾರ್ವಜನಿಕವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಡ್ರಗ್ಸ್ ಪೆಡ್ಲರ್ಸ್ರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಅಕ್ರಮ ಚಟುವಟಿಕೆಗಳ ಮೇಲೆ ಸಿಸಿಬಿ ಹದ್ದಿನಕಣ್ಣು
ಬೆಂಗಳೂರಲ್ಲಿ ಅಕ್ರಮ ಚಟುವಟಿಕೆಗಳ ಮೇಲೆ ಸಿಸಿಬಿ ತನಿಖೆ ನಡೆಸುತ್ತಿದ್ದು, ಒಂದು ತಿಂಗಳಲ್ಲಿ 20 ಜೂಜಾಟ, 25 ವೇಶ್ಯಾವಾಟಿಕೆ ಸೇರಿ ಒಟ್ಟು 45 ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 291 ಆರೋಪಿಗಳನ್ನು ಬಂಧಿಸಿದ್ದು, 91 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ಈಗಾಗಲೇ ಸಿಸಿಬಿ ಪೊಲೀಸರು 33.45 ಲಕ್ಷ ರೂಪಾಯಿ ಜಪ್ತಿ ಮಾಡಿದ್ದಾರೆ. 11 ಜೂಜಾಟ, 02 ಕ್ರಿಕೆಟ್ ಬೆಟ್ಟಿಂಗ್, 6 ಮಟ್ಕಾ ಸೇರಿ 20 ಕೇಸ್ ದಾಖಲಾಗಿದೆ. ಇನ್ನು 11 ಸ್ಪಾ ಮತ್ತು 14 ವೇಶ್ಯಾವಾಟಿಕೆ ಅಡ್ಡಗಳ ಮೇಲೆ ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರು ಈ ಸಂಬಂಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಇದನ್ನೂ ಓದಿ:
ಸಾಗರದ ಕಾಸ್ಪಾಡಿ ಬಳಿ ಕೆರೆಗೆ ಉರುಳಿದ ಕೆಎಸ್ಆರ್ಟಿಸಿ ಬಸ್; ಗಾಯಗೊಂಡ ಬೈಕ್ ಸವಾರ ಸಾವು
ಸೆಲ್ಫಿ ತೆಗೆದುಕೊಳ್ಳಲು ಹೋಗಿ ದುರಂತ ಅಂತ್ಯ ಕಂಡ ಯುವತಿ; ಜಲಪಾತಕ್ಕೆ ಬಿದ್ದು ಸಾವು
Published On - 12:37 pm, Sat, 31 July 21