ಮೈಸೂರಲ್ಲಿ ಹುಲಿ ದಾಳಿ: ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ತಿಂದು ತೇಗಿದ ವ್ಯಾಘ್ರ

| Updated By: ರಮೇಶ್ ಬಿ. ಜವಳಗೇರಾ

Updated on: May 26, 2024 | 12:56 PM

ಕಾಡು ಬಿಟ್ಟು ನಾಡಿಗೆ ಬರುತ್ತಿರುವ ಕಾಡು ಪ್ರಾಣಿಗಳು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಸದ್ಯ ಮೈಸೂರಿನಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿಯೊಂದು ದಾಳಿ ಮಾಡಿ, ಆಕೆಯನ್ನು ಹೊತ್ತೊಯ್ದು ತಿಂದು ತೇಗಿ ಹೋಗಿದೆ.

ಮೈಸೂರಲ್ಲಿ ಹುಲಿ ದಾಳಿ: ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ತಿಂದು ತೇಗಿದ ವ್ಯಾಘ್ರ
Follow us on

ಮೈಸೂರು, (ಮೇ 26): ರೈತ ಮಹಿಳೆ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಅಲ್ಲಿನ ಮೂರ್ಬಾಂದ್ ಬೆಟ್ಟದ ಸಮೀಪದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಚಿಕ್ಕಿ (48) ಹುಲಿ ದಾಳಿಗೆ ಬಲಿಯಾದ ಮಹಿಳೆ. ಎಚ್.ಡಿ.ಕೋಟೆ ತಾಲ್ಲೂಕು ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ. ಮೇಕೆ ಮೇಯಿಸುತ್ತಿದ್ದಾಗ ಹಠಾತ್ ಮಹಿಳೆ ಮೇಲೆ ಹುಲಿ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ ಮಹಿಳೆಯ ಕಾಲು ಮಾತ್ರ ಸಿಕ್ಕಿದೆ. ಆದ್ರೆ, ಮಹಿಳೆಯ ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಅರಣ್ಯ‌ಇಲಾಖೆ ನಿರ್ಮಿಸಿದ್ದ ಅರಣ್ಯ ವೀಕ್ಷಣೆಯ ಟವರ್ ಮೇಲೆ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಹುಲಿ ದಾಳಿಗೆ ವಿದೇಶಿ ತಳಿಯ 2 ನಾಯಿಗಳು ಬಲಿ

ಕೊಡಗಿನಲ್ಲಿ ಹುಲಿ ದಾಳಿ ಮುಂದುವರಿದಿದೆ. ಹುಲಿ ದಾಳಿಗೆ ವಿದೇಶಿ ತಳಿಯ 2 ನಾಯಿಗಳು ಬಲಿಯಾಗಿದೆ. ಕೊಡಗಿನ ವಿರಾಜಪೇಟೆ ಹೊರವಲಯದ ಕುಟ್ಟಂದಿ ಬಳಿ ಘಟನೆ ನಡೆದಿದೆ. ಕುಟ್ಟಂದಿಯ ಕೆ.ಕೆ. ಗ್ರೂಪ್ ಎಸ್ಟೇಟ್‌ನಲ್ಲಿದ್ದ ಹಸ್ಕಿ ಮತ್ತು ಫಿಟ್ ಬುಲ್ ತಳಿಯ 2 ನಾಯಿಗಳು ಮೃತಪಟ್ಟಿವೆ.

ತೋಟದ ಮಾಲೀಕರು ಹುಲಿ ಹೆಜ್ಜೆಯನ್ನು ಪತ್ತೆ ಹಚ್ಚಿದ್ದಾರೆ. ಇಷ್ಟು ದಿನ ದನ ಕರುಗಳ ಮೇಲೆ ಅಟ್ಯಾಕ್ ಮಾಡುತ್ತಿದ್ದ ಹುಲಿ ಇದೀಗ ನಾಯಿ ಮೇಲೆ ದಾಳಿ ಮಾಡುತ್ತಿದೆ. ಹುಲಿ ಸುದ್ದಿ ಕೇಳಿ ಗ್ರಾಮದ ಸುತ್ತ ಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ. ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ತೋಟದ ಮಾಲೀಕರು ಒತ್ತಾಯಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:44 pm, Sun, 26 May 24