AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022: ಇಂದು ಅರಮನೆಗೆ ಗಜಪಡೆ ಆಗಮನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಇಂದು ಅರಮನೆಗೆ ದಸರಾ ಗಜಪಡೆ ಆಗಮಿಸಲಿದ್ದು, ಸಚಿವ ಎಸ್​ಟಿ ಸೋಮಶೇಖರ್‌ ಅವರು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಮನೆಗೆ ಸ್ವಾಗತಿಸಲಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022: ಇಂದು ಅರಮನೆಗೆ ಗಜಪಡೆ ಆಗಮನ
ಇಂದು ಅರಮನೆಗೆ ಆಗಮಿಸಲಿರುವ ದಸರಾ ಗಜಪಡೆ
TV9 Web
| Edited By: |

Updated on:Aug 10, 2022 | 7:09 AM

Share

ಮೈಸೂರು: 2022ರ ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara)  ಮಹೋತ್ಸವ ಹಿನ್ನೆಲೆ ಇಂದು ಅರಮನೆಗೆ ದಸರಾ ಗಜಪಡೆ ಆಗಮಿಸಲಿವೆ. ಸದ್ಯ ಆನೆಗಳು ಮೈಸೂರು ಅರಣ್ಯ ಭವನದಲ್ಲಿದ್ದು, ಅಭಿಮನ್ಯು ನೇತೃತ್ವದಲ್ಲಿ ಕಾಡಿನಿಂದ ನಾಡಿಗೆ ಗಜಪಡೆ ಆಗಮಿಸಿವೆ. ಅಭಿಮನ್ಯು, ಅರ್ಜುನ, ಗೋಪಾಲಸ್ವಾಮಿ, ಭೀಮ, ಧನಂಜಯ, ಕಾವೇರಿ, ಚೈತ್ರ, ಲಕ್ಷ್ಮೀ, ಮಹೇಂದ್ರ ಸೇರಿ ಎಲ್ಲಾ ಆನೆಗಳಿಗೂ ಅರಣ್ಯ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್​ಟಿ ಸೋಮಶೇಖರ್‌ರಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಮನೆಗೆ ಸ್ವಾಗತಿಸಲಿದ್ದಾರೆ. ಪೂಜೆ ಸಲ್ಲಿಸಿದ ನಂತರ ಅಶೋಕಪುರಂ, ಬಲ್ಲಾಳ್ ವೃತ್ತ, ಆರ್ ಟಿ ಓ ವೃತ್ತ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ‌ ರಸ್ತೆ, ಗನ್ ಹೌಸ್ ವೃತ್ತ ದಸರಾ ವಸ್ತು ಪ್ರದರ್ಶನದ ರಸ್ತೆಯಿಂದ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸಲಿವೆ. ಇಂದಿನಿಂದ ಅರಮನೆಯಲ್ಲೇ ದಸರಾ ಗಜಪಡೆ ಬೀಡು ಬಿಡಲಿವೆ.

ಇದನ್ನೂ ಓದಿ: ಮೈಸೂರು ದಸರಾ 2022: ಈ ಬಾರಿ ಗೋಲ್ಡ್ ಪಾಸ್ ಇಲ್ಲ- ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟನೆ

ಮೈಸೂರು ದಸರಾ ಗಜಪಯಣ ಆರಂಭ

ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣ ಆಗಸ್ಟ್​ 7ರಂದು ಆರಂಭಿಸಲಾಗಿತ್ತು. ಕಾಡಿನಿಂದ ನಾಡಿಗೆ ದಸರಾ ಗಜಪಡೆ ಬರಲಿದ್ದು, ಗಜಪಯಣಕ್ಕೆ ಸಚಿವ ಎಸ್​.ಟಿ ಸೋಮಶೇಖರ್ ಚಾಲನೆ ನೀಡಿದ್ದರು. ವೀರನಹೊಸಹಳ್ಳಿ ಅರಣ್ಯ ಪ್ರದೇಶದ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಜಪಡೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ನಂತರ ಲಾರಿಗಳ ಮೂಲಕ‌ ಅಭಿಮನ್ಯು ನೇತೃತ್ವದ ಆನೆಗಳ ತಂಡ ಮೈಸೂರಿಗೆ ಆನೆಗಳು ಆಗಮಿಸಲಿವೆ. ಈ ಭಾರಿ 14 ಆನೆಗಳು ಮೈಸೂರು ದಸರೆಯಲ್ಲಿ‌ ಭಾಗವಹಿಸಲಿವೆ. ಈ ಭಾರಿ ಅದ್ದೂರಿ ಹಾಗೂ ಸಾಂಪ್ರದಾಯಿಕ ದಸರೆಗೆ ಸರ್ಕಾರ ಸಿದ್ದತೆ ನಡೆಸಿದೆ.

ಜಂಬೂಸವಾರಿಗೆ ಸಿದ್ದವಾದ ಗಜಪಡೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಆನೆಗಳ ಪಟ್ಟಿ ಕೂಡ ಅಂತಿಮಗೊಂಡಿದೆ. ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಕಾಲಿಡಲಿದ್ದು,  4 ಹೆಣ್ಣಾನೆಗಳು ಸೇರಿದಂತೆ 14 ಅನೆಗಳ ಪಟ್ಟಿ ಅಂತಿಮಗೊಂಡಿದೆ. ಮತ್ತಿಗೋಡು ಆನೆ ಶಿಬಿರದಿಂದ 39 ವರ್ಷದ ಗೋಪಾಲಸ್ವಾಮಿ, 57 ವರ್ಷದ ಅಭಿಮನ್ಯು, 22 ವರ್ಷ ಭೀಮ, 38 ವರ್ಷದ ಮಹೇಂದ್ರ, ಬಳ್ಳೆ ಆನೆ ಶಿಬಿರದಿಂದ 63 ವರ್ಷದ ಅರ್ಜುನ  ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿವೆ.

ದುಬಾರೆ ಆನೆ ಶಿಬಿರದಿಂದ 59 ವರ್ಷದ ವಿಕ್ರಮ, 44 ವರ್ಷದ ಧನಂಜಯ, 45 ವರ್ಷದ ಕಾವೇರಿ, 41 ವರ್ಷದ ಗೋಪಿ, 40 ವರ್ಷದ ಶ್ರೀರಾಮ, 63 ವರ್ಷದ ವಿಜಯಾ ಆನೆ, ರಾಮಾಪುರ ಆನೆ ಶಿಬಿರದಿಂದ 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮೀ, 18 ವರ್ಷದ ಪಾರ್ಥಸಾರಥಿ ಆನೆ ಆಗಮಿಸಲಿವೆ. ಆಗಸ್ಟ್ 7 ರಂದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯ ದೊಡ್ಡಹೆಜ್ಜೂರು ಗ್ರಾಮದಿಂದ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ  9 ಆನೆಗಳು ಮೈಸೂರಿಗೆ ಆಗಮಿಸಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:06 am, Wed, 10 August 22

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ