ಆಯುಧಪೂಜೆ ದಿನ ಯದುವಂಶಕ್ಕೆ ಸಿಹಿ ಸುದ್ದಿ: ಎರಡನೇ ಮಗುವಿನ ತಂದೆಯಾದ ಯದುವೀರ್ ಒಡೆಯರ್
ನವರಾತ್ರಿಯ 9ನೇ ದಿನ ಇಂದು (ಅ.11) ಆಯುಧ ಪೂಜೆ. ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಆಯುಧ ಪೂಜೆ ದಿನದಂದೇ ಯದುವಂಶಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ.
ಮೈಸೂರು, ಅಕ್ಟೋಬರ್ 11: ದಸರಾ ಹಬ್ಬದ ಸಂಭ್ರಮದಲ್ಲಿರುವ ಮೈಸೂರು ಯದುವೀರ್ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಣಿ ತ್ರಿಷಿಕಾ ಕುಮಾರಿ (Trishika Kumari Devi)ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಯುಧ ಪೂಜೆ ದಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯದಿಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:17 am, Fri, 11 October 24