ಉದ್ಯೋಗ ನೀಡುವುದಾಗಿ ಭೂಮಿ ಪಡೆದು ವಂಚನೆ: ಕಂಪನಿ ವಿರುದ್ಧ ಡೆತ್ ನೋಟ್ ಬರೆದಿಟ್ಟು ಯುವ ರೈತ ಆತ್ಮಹತ್ಯೆ
ಅಡಕನಹಳ್ಳಿ ಗ್ರಾಮದ ನಿವಾಸಿ ಸಿದ್ದರಾಜು ಅವರಿಗೆ ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಎಂಬ ಖಾಸಗಿ ಕಂಪನಿ ಉದ್ಯೋಗ ನೀಡುವುದಾಗಿ ಹೇಳಿ ಭೂಮಿ ಪಡೆದಿತ್ತು. ಆದರೆ ಉದ್ಯೋಗ ನೀಡದೆ ವಂಚಿಸಿದೆ. ಇದರಿಂದ ಮನನೊಂದ ಸಿದ್ದರಾಜು ಅವರು ಕಂಪನಿ ವಿರುದ್ಧ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು, ನ.20: ಉದ್ಯೋಗ ನೀಡುವುದಾಗಿ ನಂಬಿಸಿ ಭೂಮಿ ಪಡೆದು ವಂಚನೆ (Cheating) ಮಾಡಲಾಗಿರುವ ಗಂಭೀರ ಆರೋಪ ಕೇಳಿ ಬಂದಿದ್ದು ಖಾಸಗಿ ಕಂಪನಿ ಹೆಸರು ಬರೆದಿಟ್ಟು ಯುವ ರೈತ ಆತ್ಮಹತ್ಯೆ (Death) ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿಯಲ್ಲಿ ನಡೆದಿದೆ. ಖಾಸಗಿ ಕಂಪನಿ ವಂಚನೆಗೆ ಮನನೊಂದ ಸಿದ್ದರಾಜು ಎಂಬ ಯುವ ರೈತ (Farmer) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಡಕನಹಳ್ಳಿ ಗ್ರಾಮದ ನಿವಾಸಿ ಸಿದ್ದರಾಜು ಅವರಿಗೆ ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಎಂಬ ಖಾಸಗಿ ಕಂಪನಿ ಉದ್ಯೋಗ ನೀಡುವುದಾಗಿ ಹೇಳಿ ಭೂಮಿ ಪಡೆದಿತ್ತು. ಅಲ್ಲದೆ ಸಿದ್ದರಾಜು ತಂದೆ ಸಿದ್ದೇಗೌಡ ಸೇರಿದಂತೆ ಅನೇಕ ರೈತರು ಅಡಕನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಜಮೀನು ನೀಡಿದ್ದಾರೆ. ರೈತರ ಬಳಿ ಭೂಮಿ ಪಡೆಯುವಾಗ ಕಂಪನಿ ಕೆಲಸ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಉದ್ಯೋಗ ನೀಡದೆ ವಂಚಿಸಿದೆ. ಇದರಿಂದ ಮನನೊಂದ ಸಿದ್ದರಾಜು ಅವರು ಕಂಪನಿ ವಿರುದ್ಧ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳೆದ 45 ದಿನಗಳಿಂದ ಕಂಪನಿ ವಿರುದ್ಧ ರೈತರು ಧರಣಿ ನಡೆಸುತ್ತಿದ್ದಾರೆ. ಈವರೆಗೂ ಜನಪ್ರತಿನಿಧಿಗಳು, ಅಧಿಕಾರಿಗಳು ನೆರವಿಗೆ ಬಂದಿಲ್ಲ ಎಂದು ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ಕೋಲಾರ: ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಯುವಕರ ಬಂಧನ
ನೀರಲ್ಲಿ ಮುಳುಗಿ ಮೂವರು ಸಾವು
KRS ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನ ಜ್ಯೋತಿ, ಹರೀಶ್, ನಂಜುಂಡ ಎಂದು ಗುರುತಿಸಲಾಗಿದೆ. ಜ್ಯೋತಿ ವಿದ್ಯಾರ್ಥಿಯಾಗಿದ್ದು, ಹರೀಶ್ ಎಂಬುವವರು ಕಾರುಣ್ಯ ಟ್ರಸ್ಟ್ನಲ್ಲಿ ಕೇರ್ಟೇಕರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇನ್ನೂ ನಂಜುಂಡ, ಈಗಷ್ಟೇ ಐಟಿಐ ಮುಗಿಸಿ ಕೆಲಸಕ್ಕೆ ಸೇರಿದ್ದರು. ಟ್ರಿಪ್ಗೆಂದು KRSಗೆ ಹೋಗಿದ್ದಾಗ ದುರಂತ ಸಂಭವಿಸಿದೆ. ಇನ್ನೂ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಗಾರಕ್ಕೆ ಮೃತದೇಹಗಳನ್ನ ಶಿಫ್ಟ್ ಮಾಡಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಅಪರಿಚಿತ ಮಹಿಳೆಯ ಶವ ಪತ್ತೆ
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಭುವನಹಳ್ಳಿಯ ಕೆಂಚಣ್ಣ ಕೆರೆ ಬಳಿ ಸುಮಾರು 35-40 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಶಿರಾ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:04 am, Mon, 20 November 23