AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

ಬಾಲಕಿಯ ಮನೆಯಲ್ಲಿ ಇವರಿಬ್ಬರ ಪ್ರೀತಿಯ ವಿಷಯ ತಿಳಿದ ಹಿನ್ನೆಲೆ ಮುಡಿಕಟ್ಟೆ ಬಳಿ ಪ್ರೇಮಿಗಳು ಕಪಿಲಾ ನದಿಗೆ ಹಾರಿದ್ದಾರೆ. ಇಬ್ಬರಿಗೂ ಈಗ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಂಜನಗೂಡು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ  ಕಪಿಲಾ ನದಿಗೆ ಹಾರಿದರು! ಮುಂದೇನಾದರು?
ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?
TV9 Web
| Edited By: |

Updated on:Dec 01, 2021 | 8:17 AM

Share

ಮೈಸೂರು: ಇಬ್ಬರು ಯುವ ಪ್ರೇಮಿಗಳು ಜನುಮದ ಜೋಡಿಯಾಗಿ ಪರಸ್ಪರ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ಹಾಗೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಳಿ ನಡೆದಿದೆ. ಕೊನೆಗೆ ತೆಪ್ಪ ನಡೆಸುವ ಅಂಬಿಗರಿಂದ ಪ್ರೇಮಿಗಳ ರಕ್ಷಣೆಯಾಗಿದೆ. ಅಭಿ (19) ಮತ್ತು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆ ಯತ್ನ ನಡೆದಿದೆ. ಬಾಲಕಿಯು ಚಾಮರಾಜನಗರದ ಕಾಲೇಜು ವಿದ್ಯಾರ್ಥಿನಿಯಾಗಿದ್ದರೆ ಅಭಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾನೆ.

ಬಾಲಕಿಯ ಮನೆಯಲ್ಲಿ ಇವರಿಬ್ಬರ ಪ್ರೀತಿಯ ವಿಷಯ ತಿಳಿದ ಹಿನ್ನೆಲೆ ಮುಡಿಕಟ್ಟೆ ಬಳಿ ಪ್ರೇಮಿಗಳು ಕಪಿಲಾ ನದಿಗೆ ಹಾರಿದ್ದಾರೆ. ಇಬ್ಬರಿಗೂ ಈಗ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಂಜನಗೂಡು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಗಾಗಿ‌‌ ಮಳೆಯಲ್ಲಿ‌ ಧರಣಿ ಕುಳಿತ ಅಲೆ ಮಾರಿಗಳು: ಮೂರು ದಶಕಗಳಿಂದ ವಾಸವಿದ್ದರೂ ವಾಸಕ್ಕೆ ಮನೆಯಿಲ್ಲದೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ಅಲೆಮಾರಿಗಳು ಪರದಾಡುತ್ತಿದ್ದಾರೆ. ಇದನ್ನು ಕಂಡು ಸ್ಥಳೀಯ ಶಾಸಕ ಕರುಣಾಕರ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಅಲೆಮಾರಿಗಳು ಮೂರು ದಶಕಗಳಿಂದ ಇಲ್ಲಿ ವಾಸವಿದ್ದು, ನೆರವಿಗಾಗಿ ಈ ವರೆಗೆ ಮನವಿ ಸಲ್ಲಿಸಿದರೂ ಪ್ರಯೋಜನ ವಾಗಿಲ್ಲ. ಬುಡ್ಗ ಜಂಗಮ ಬುಡಕಟ್ಟಿನ ಅಲೆಮಾರಿಗಳು ವಾಸಕ್ಕೆ ಮನೆ ಕೊಡುವಂತೆ ವಿನಂತಿಸುತ್ತಾ ಬಂದಿದ್ದಾರೆ. ಈಗಾಗಲೇ ಕೆಲ ಕಡೆ ಸ್ಥಳ ನೋಡಲಾಗಿದೆ. ಅದಷ್ಟು ಬೇಗ ಎಲ್ಲ ಅಲೆಮಾರಿಗಳಿಗೆ ಮನೆ ನೀಡುವುದಾಗಿ ಹರಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ ಭರವಸೆ ನೀಡಿದರು.

2ನೇ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆ, ಪತ್ನಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಪತಿ ಗೋಪಾಲ 2ನೇ ವಿವಾಹ ಮಾಡಿಕೊಳ್ಳಲು ಪತ್ನಿ ಒಪ್ಪಿಗೆ ನೀಡದ ಹಿನ್ನೆಲೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಗ್ರಾಮದಲ್ಲಿ ಪತಿರಾಯ ತನ್ನ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಪತ್ನಿ ಶೀಲಾ ಹರಿಜನ ಮೇಲೆ ಪತಿ ಗೋಪಾಲ ಹರಿಜನ ಹಲ್ಲೆ ಮಾಡಿದ್ದಾನೆ. ಪತ್ನಿ ಶೀಲಾ ಮುಖ, ಕತ್ತು, ಕೈಗೆ ಗಾಯಗಳಾಗಿವೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ ಗೋಪಾಲ ಪರಾರಿಯಾಗಿದ್ದಾನೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:01 am, Wed, 1 December 21

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು