ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್; ಇಬ್ಬರೂ ಆತ್ಮಹತ್ಯೆಗೆ ಶರಣು

ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಮುರಳಿ, ತಾನು ಶೃತಿ ಜೊತೆ ಇದ್ದ ಫೋಟೋವನ್ನು ಅಪ್​ಲೋಡ್ ಮಾಡಿ ​​​ಸ್ಟೇಟಸ್​ನಲ್ಲಿ ಇಟ್ಟುಕೊಂಡಿದ್ದ. ಈ ಫೋಟೋ ವೈರಲ್ ಆಗಿದೆ. ಫೋಟೋ ಕಣ್ಣಿಗೆ ಬೀಳುತ್ತಿದ್ದಂತೆ ಮನನೊಂದ ಗೃಹಿಣಿ ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ ಆತ್ಮಹತ್ಯೆ ಬೆನ್ನಲ್ಲೇ ಮುರಳಿ ಕೂಡ ನೇಣಿಗೆ ಶರಣಾಗಿದ್ದಾನೆ.

ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್; ಇಬ್ಬರೂ ಆತ್ಮಹತ್ಯೆಗೆ ಶರಣು
ಶೃತಿ, ಮುರಳಿ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Dec 20, 2023 | 9:29 AM

ಮೈಸೂರು, ಡಿ.20: ವಿವಾಹಿತ ಮಹಿಳೆಯೊಂದಿಗೆ (Married Woman) ಯುವಕ ಸಲುಗೆ ಬೆಳೆಸಿದ್ದು ಇಂದು ಅವರಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆ ಹಾಗೂ ಯುವಕನ ಫೋಟೋ ವೈರಲ್ ಆಗಿದ್ದು ಇದರಿಂದ ಹೆದರಿ ಮಹಿಳೆ ಮತ್ತು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು (Mysuru) ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಹುಣಸೂರು ಪಟ್ಟಣದ ಕಲ್ಕುಣಿಗೆ ನಿವಾಸಿಗಳಾದ ಶೃತಿ(28), ಮುರಳಿ(20) ಆತ್ಮಹತ್ಯೆ ಮಾಡಿಕೊಂಡವರು.

ವಿವಾಹಿತ ಮಹಿಳೆ ಜೊತೆ ಯುವಕ ಸಲುಗೆಯಿಂದ ಇದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಫೋಟೋ ಕಣ್ಣಿಗೆ ಬೀಳುತ್ತಿದ್ದಂತೆ ಮನನೊಂದ ಗೃಹಿಣಿ ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ ಆತ್ಮಹತ್ಯೆ ಬೆನ್ನಲ್ಲೇ ಮುರಳಿ ಕೂಡ ನೇಣಿಗೆ ಶರಣಾಗಿದ್ದಾನೆ. ಮೃತರಿಬ್ಬರೂ ಹುಣಸೂರು ಪಟ್ಟಣದ ಕಲ್ಕುಣಿಗೆ ನಿವಾಸಿಗಳು ಎಂದು ತಿಳಿದುಬಂದಿದೆ.

ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಮುರಳಿ, ತಾನು ಶೃತಿ ಜೊತೆ ಇದ್ದ ಫೋಟೋವನ್ನು ಅಪ್​ಲೋಡ್ ಮಾಡಿ ​​​ಸ್ಟೇಟಸ್​ನಲ್ಲಿ ಇಟ್ಟುಕೊಂಡಿದ್ದ. ಈ ಫೋಟೋ ವೈರಲ್ ಆಗಿದೆ. ಬಳಿಕ ಇದು ಶೃತಿ ಹಾಗೂ ಮುರಳಿ ಮನೆಯವರಿಗೂ ಮುಟ್ಟಿದೆ. ಇದೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದೆ. ಇದರಿಂದ ಹೆದರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎರಡೂ ಕುಟುಂಬದವರು ಪರಸ್ಪರ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯದ ಆಲೆಮನೆ ಮಾತ್ರವಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ?

ವಿದ್ಯುತ್ ಕಂಬಕ್ಕೆ ಕೇರಳ ಸಾರಿಗೆ ಬಸ್​ ಡಿಕ್ಕಿ, 6 ಜನರಿಗೆ ಗಾಯ

ಮೈಸೂರು ಜಿಲ್ಲೆ ಹುಣಸೂರಿನ ಅರಸು ಪ್ರತಿಮೆ ವೃತ್ತದ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕೇರಳ ಸಾರಿಗೆ ಬಸ್​ ಡಿಕ್ಕಿ ಹೊಡೆದಿದ್ದು 6 ಜನರಿಗೆ ಗಾಯಗಳಾಗಿವೆ. ಬಸ್ಸು ಗೋಣಿಕೊಪ್ಪ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಕೇರಳ ಸರ್ಕಾರಿ ಬಸ್​ನಲ್ಲಿ ಸುಮಾರು 30 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್