ಪೊಲೀಸರ ಕಿರುಕುಳ ಆರೋಪ; ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು. ಗಲಾಟೆ ಪ್ರಕರಣದಲ್ಲಿ ವಿಚಾರಣೆಗೆಂದು ಕಿರಣ್​ ಕುಮಾರ್​ನನ್ನು​ ಬಿಳಿಗೆರೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಕಿರಣ್ ಪೊಲೀಸ್ ವಶದಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದ. ಬಳಿಕ ಮನೆಯಲ್ಲಿ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾನೆ.

ಪೊಲೀಸರ ಕಿರುಕುಳ ಆರೋಪ; ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು
ಕಿರಣ್​ ಕುಮಾರ್
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Nov 14, 2023 | 7:58 AM

ಮೈಸೂರು, ನ.14: ಪೊಲೀಸರ ಕಿರುಕುಳ ಆರೋಪ,(Police Torture Allegations) ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಕೆ.ಆರ್.ಆಸ್ಪತ್ರೆಯಲ್ಲಿ ಪ್ರಾಣ (Death) ಬಿಟ್ಟಿದ್ದಾನೆ. ಕಿರಣ್​ ಕುಮಾರ್​(23) ಮೃತ ದುರ್ದೈವಿ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಿರಣ್​ ಕುಮಾರ್, ಪೆಟ್ರೋಲ್​ ಸುರಿದುಕೊಂಡು ಬೆಂಕಿಹಚ್ಚಿಕೊಂಡಿದ್ದ. ದುರಾದೃಷ್ಟವಶಾತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮೃತ ಕಿರಣ್, ಪೊಲೀಸರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ವಿಡಿಯೋ ಮಾಡಿದ್ದಾನೆ.

ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು. ಗಲಾಟೆ ಪ್ರಕರಣದಲ್ಲಿ ವಿಚಾರಣೆಗೆಂದು ಕಿರಣ್​ ಕುಮಾರ್​ನನ್ನು​ ಬಿಳಿಗೆರೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಕಿರಣ್ ಪೊಲೀಸ್ ವಶದಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದ. ಬಳಿಕ ಮನೆಯಲ್ಲಿ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಆತ್ಮಹತ್ಯೆಗೂ ಮುನ್ನ ಪೊಲೀಸರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ವಿಡಿಯೋ ಮಾಡಿದ್ದಾನೆ. ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದು ಸ್ಥಳೀಯರು ತಕ್ಷಣವೇ ಕೆಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಕಿರಣ್ ಮೃತಪಟ್ಟಿದ್ದಾನೆ. ಆಸ್ಪತ್ರೆಗೆ ನಂಜನಗೂಡು ಡಿವೈಎಸ್‌ಪಿ ಗೋವಿಂದರಾಜು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಟುಂಬದಲ್ಲಿ ಆಕ್ರಂದನ ಮನೆ ಮಾಡಿದೆ. ಸೂತಕದ ಛಾಯೇ ಆವರಿಸಿದೆ.

ಇದನ್ನೂ ಓದಿ: ದೀಪಾವಳಿಗೆ ಬೆಂಗಳೂರಿನಲ್ಲಿ ಅಧಿಕ ಪಟಾಕಿ ಸಿಡಿತ: ವಾಯು ಮಾಲಿನ್ಯ ಏರಿಕೆ

ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮ

ಇನ್ನು ಮತ್ತೊಂದೆಡೆ ಮೈಸೂರು ಜಿಲ್ಲೆಯ ಹುಣಸೂರಿನ ಸ್ಟೋರ್ ಬೀದಿಯಲ್ಲಿ ಶೇಖರ್​ ಎಂಬುವರಿಗೆ ಸೇರಿದ ಮನೆಯಲ್ಲಿದ್ದ ವಸ್ತು ಸುಟ್ಟು ಭಸ್ಮವಾಗಿದೆ. ಅಂಗಡಿಯಿಂದ ಮನೆಗೆ ಬಟ್ಟೆ ತಂದು ಐರನ್ ಮಾಡ್ತಿದ್ದಾಗ ಅವಘಡ ಸಂಭವಿಸಿದ್ದು ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಐರನ್ ಮಾಡಿ ಜೀವನ ನಡೆಸುತ್ತಿದ್ದ ಶೇಖರ್​ ಅವರಿಗೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಐರನ್ ಮಾಡಲು ಬಹಳ ಬಟ್ಟೆ ಬಂದಿದ್ದವು. ಹೀಗಾಗಿ ಅವರು ಅಂಗಡಿಯಿಂದ ಮನೆಗೆ ತಂದು ಐರನ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಇದರಿಂದ ಬೆಂಕಿ ಹಚ್ಚಿಕೊಂಡಿದ್ದು ಮನೆಯಲ್ಲಿದ್ದ ಟಿವಿ, ವಾಷಿಂಗ್ ಮಷೀನ್ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಶೇಖರ್ ಅವರಿಗೆ ಗಾಯಗಳಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ