AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರದ ಪ್ರೈಡ್ ಹೋಟೆಲ್‌ನಲ್ಲಿ ಊಟ‌ ಮಾಡುವಾಗ ಕುಸಿದು ಬಿದ್ದು ಯುವಕ ಸಾವು

Death: ಕನಕಪುರದ ಪ್ರೈಡ್ ಹೋಟೆಲ್‌ನಲ್ಲಿ ಊಟ‌ ಮಾಡುವಾಗ ಕುಸಿದು ಬಿದ್ದು ಮೈಸೂರು ಮೂಲದ ಯುವಕ ಮೃತಪಟ್ಟಿದ್ದಾನೆ.

ಕನಕಪುರದ ಪ್ರೈಡ್ ಹೋಟೆಲ್‌ನಲ್ಲಿ ಊಟ‌ ಮಾಡುವಾಗ ಕುಸಿದು ಬಿದ್ದು ಯುವಕ ಸಾವು
ಊಟ‌ ಮಾಡುವಾಗ ಕುಸಿದು ಬಿದ್ದು ಯುವಕ ಸಾವು
TV9 Web
| Edited By: |

Updated on:Dec 27, 2022 | 10:37 AM

Share

ಮೈಸೂರು: ಕನಕಪುರದ ಪ್ರೈಡ್ ಹೋಟೆಲ್‌ನಲ್ಲಿ ಊಟ‌ ಮಾಡುವಾಗ ಕುಸಿದು ಬಿದ್ದು ಮೈಸೂರು ಮೂಲದ ಯುವಕ ಮೃತಪಟ್ಟಿದ್ದಾನೆ. ಮೈಸೂರಿನ ಸಿದ್ದಾರ್ಥ ನಗರದ ನಿವಾಸಿ ಪ್ರೀತಂ(35) ಮೃತ ದುರ್ದೈವಿ. ಬೆಂಗಳೂರಿನಿಂದ ವಾಪಸ್ ಮೈಸೂರಿಗೆ​ ಬರುವಾಗ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಕನಕಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರೀತಂ ಮೃತಪಟ್ಟಿದ್ದಾನೆ. ಪ್ರೀತಂ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಾವು ಕಚ್ಚಿ ರೈತ ಸಾವು

ಜಮೀನಿನಲ್ಲಿ ಮೆಕ್ಕೆಜೋಳ ತೆಗೆಯುವಾಗ ಹಾವು ಕಚ್ಚಿ ರೈತ ದುರಗಪ್ಪ (70) ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮಾದನಹಳ್ಳಿಯಲ್ಲಿ ಮೆಕ್ಕೆಜೋಳದ ರಾಶಿ ತೆಗೆಯುವಾಗ ರೈತ ದುರಗಪ್ಪನಿಗೆ ಹಾವು ಕಚ್ಚಿದೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಿಸದೇ ರೈತ ಮೃತಪಟ್ಟಿದ್ದಾರೆ. ಬಿಳಿಚೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ಬೈಕ್ ವ್ಹೀಲಿಂಗ್: ಹಿಡಿಯಲು ಮುಂದಾದ ಡಿವೈಎಸ್​ಪಿ ಜೊತೆ ಪುಂಡರ ವಾಗ್ವಾದ 

ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

ಮೈಸೂರು: ನಂಜನಗೂಡು ತಾಲೂಕಿನ ಕೆಂಪಿ ಸಿದ್ದನ ಹುಂಡಿಯಲ್ಲಿ ಸಾಲಭಾದೆ ತಾಳಲಾರದೆ ರೈತ ಸಣ್ಣಪ್ಪ(50) ನೇಣಿಗೆ ಶರಣಾಗಿದ್ದಾರೆ. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕೈಕೊಟ್ಟಿದ್ದರಿಂದ ತಮ್ಮ ಹೊಲದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ರೈತ ಸಣ್ಣಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದುಕೊಂಡು ಅಪರಿಚಿತ ವೃದ್ದ ಸಾವು

ರಾಮನಗರದ ‌ಹಳೇ ಬಸ್ ನಿಲ್ದಾಣದ ಬಳಿ ನೇಣು ಬಿಗಿದುಕೊಂಡು ಅಪರಿಚಿತ ವೃದ್ದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರಸಭೆ ವಾಣಿಜ್ಯ ಸಂಕೀರ್ಣದಲ್ಲಿ‌ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ರಾಮನಗರ ಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:18 am, Tue, 27 December 22

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ