AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kempegowda statue: ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಅನುಮೋದನೆ

Basavaraj Bommai: ಸಿಎಂ ಬೊಮ್ಮಾಯಿ ಕಳೆದ ಕೆಂಪೇಗೌಡ ಜಯಂತಿ ವೇಳೆ ವಿಧಾನಸೌಧ ಬಳಿ ಪ್ರತಿಮೆ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು. ಸಚಿವ ಅಶ್ವಥ್ ನಾರಾಯಣ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರುಗಳು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಸಂಬಂಧ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದರು.

Kempegowda statue: ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಅನುಮೋದನೆ
ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಅನುಮೋದನೆ
TV9 Web
| Edited By: |

Updated on: Aug 20, 2022 | 10:37 PM

Share

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ (Vidhana Soudha) ಬೆಂಗಳೂರಿನ ನಾಡಪ್ರಭು ಕೆಂಪೇಗೌಡರ ಪ್ರತಿಮೆ (Nadaprabhu Kempegowda statue) ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜೊತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ ಸ್ಥಳ ಗುರುತಿಸುವಂತೆ ರಾಜ್ಯ ಲೋಕೋಪಯೋಗಿ ಇಲಾಖೆಗೆ ಸಿಎಂ ಬೊಮ್ಮಾಯಿ (CM Basavaraj Bommai) ಸೂಚನೆ ನೀಡಿದ್ದಾರೆ.

ವಿಧಾನಸೌಧದ ಈಶಾನ್ಯ ಭಾಗದ ರೋಸ್ ಗಾರ್ಡನ್ ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ನವೆಂಬರ್ 1 ರಂದು ಕೆಂಪೇಗೌಡ ಪ್ರತಿಮೆ ಮತ್ತು ಬಸವೇಶ್ವರ ಪುತ್ಥಳಿ‌ ಅನಾವರಣಗೊಳಿಸಲು ಕ್ರಮ ವಹಿಸುವಂತೆಯೂ ಲೋಕೋಪಯೋಗಿ ಇಲಾಖೆಗೆ ಡಿಪಿಎಆರ್ ನಿಂದ ಸೂಚನೆ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ಕೆಂಪೇಗೌಡ ಜಯಂತಿ ವೇಳೆ ವಿಧಾನಸೌಧ ಬಳಿ ಪ್ರತಿಮೆ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು. ಸಚಿವ ಡಾ. ಅಶ್ವಥ್ ನಾರಾಯಣ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರುಗಳು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಸಂಬಂಧ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದರು. ಇನ್ನು ಬಿ.ಎಸ್. ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬಸವೇಶ್ವರ ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು.

ಐವರು IAS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ:

ಐವರು IAS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ವೇಳೆ, ಮೂವರು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ.

1. ಎಸ್​ ಆರ್ ಉಮಾಶಂಕರ್ -ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ

2. ಸೆಲ್ವಕುಮಾರ್ -ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ

3. ಗಿರೀಶ್‌ ಆರ್‌ -ಕೆಐಎಡಿಬಿ ಸಿಇಒ

4. ಎಂ.ಎಸ್‌. ಅರ್ಚನಾ -ಹಾಸನ ಜಿಲ್ಲಾಧಿಕಾರಿ

5. ಡಾ. ಎನ್‌. ಶಿವಶಂಕರ್ -ಪೌರಾಡಳಿತ ಇಲಾಖೆಯ ನಿರ್ದೇಶಕ

ಇನ್ನು, ಮೂವರು IAS ಅಧಿಕಾರಿಗಳಿಗೆ ಸರ್ಕಾರ ಹೆಚ್ಚುವರಿ ಹೊಣೆ ನೀಡಿದೆ:

1. ಕಪಿಲ್ ಮೋಹನ್ -ಕಂದಾಯ ಇಲಾಖೆ ಎಸಿಎಸ್ 2. ಸೆಲ್ವಕುಮಾರ್ – ಪ್ರಧಾನ ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ 3. ವಿ. ಪೊನ್ನುರಾಜ್ -ಶಿಕ್ಷಣ ‌ಇಲಾಖೆ ಕಾರ್ಯದರ್ಶಿ

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ