ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ (Vidhana Soudha) ಬೆಂಗಳೂರಿನ ನಾಡಪ್ರಭು ಕೆಂಪೇಗೌಡರ ಪ್ರತಿಮೆ (Nadaprabhu Kempegowda statue) ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜೊತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ ಸ್ಥಳ ಗುರುತಿಸುವಂತೆ ರಾಜ್ಯ ಲೋಕೋಪಯೋಗಿ ಇಲಾಖೆಗೆ ಸಿಎಂ ಬೊಮ್ಮಾಯಿ (CM Basavaraj Bommai) ಸೂಚನೆ ನೀಡಿದ್ದಾರೆ.
ವಿಧಾನಸೌಧದ ಈಶಾನ್ಯ ಭಾಗದ ರೋಸ್ ಗಾರ್ಡನ್ ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ನವೆಂಬರ್ 1 ರಂದು ಕೆಂಪೇಗೌಡ ಪ್ರತಿಮೆ ಮತ್ತು ಬಸವೇಶ್ವರ ಪುತ್ಥಳಿ ಅನಾವರಣಗೊಳಿಸಲು ಕ್ರಮ ವಹಿಸುವಂತೆಯೂ ಲೋಕೋಪಯೋಗಿ ಇಲಾಖೆಗೆ ಡಿಪಿಎಆರ್ ನಿಂದ ಸೂಚನೆ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ಕೆಂಪೇಗೌಡ ಜಯಂತಿ ವೇಳೆ ವಿಧಾನಸೌಧ ಬಳಿ ಪ್ರತಿಮೆ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು. ಸಚಿವ ಡಾ. ಅಶ್ವಥ್ ನಾರಾಯಣ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರುಗಳು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಸಂಬಂಧ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದರು. ಇನ್ನು ಬಿ.ಎಸ್. ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬಸವೇಶ್ವರ ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು.
ಐವರು IAS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ:
ಐವರು IAS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ವೇಳೆ, ಮೂವರು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ.
1. ಎಸ್ ಆರ್ ಉಮಾಶಂಕರ್ -ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ
2. ಸೆಲ್ವಕುಮಾರ್ -ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ
3. ಗಿರೀಶ್ ಆರ್ -ಕೆಐಎಡಿಬಿ ಸಿಇಒ
4. ಎಂ.ಎಸ್. ಅರ್ಚನಾ -ಹಾಸನ ಜಿಲ್ಲಾಧಿಕಾರಿ
5. ಡಾ. ಎನ್. ಶಿವಶಂಕರ್ -ಪೌರಾಡಳಿತ ಇಲಾಖೆಯ ನಿರ್ದೇಶಕ
ಇನ್ನು, ಮೂವರು IAS ಅಧಿಕಾರಿಗಳಿಗೆ ಸರ್ಕಾರ ಹೆಚ್ಚುವರಿ ಹೊಣೆ ನೀಡಿದೆ:
1. ಕಪಿಲ್ ಮೋಹನ್ -ಕಂದಾಯ ಇಲಾಖೆ ಎಸಿಎಸ್
2. ಸೆಲ್ವಕುಮಾರ್ – ಪ್ರಧಾನ ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ
3. ವಿ. ಪೊನ್ನುರಾಜ್ -ಶಿಕ್ಷಣ ಇಲಾಖೆ ಕಾರ್ಯದರ್ಶಿ