ನಾಗಮಂಗಲ ಘಟನೆಗೆ ರಾಜ್ಯ ಸರ್ಕಾರವೇ ಹೊಣೆ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಂಭವಿಸಿದ ಗಲಭೆ ಈಗ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಘಟನೆಗೆ ರಾಜ್ಯ ಸರ್ಕಾರದ ಓಲೈಕೆ ನೀತಿ, ವೈಫಲ್ಯವೇ ಕಾರಣ ಎಂದು ಬಿಜೆಪಿ, ಜೆಡಿಎಸ್ ನಾಯಕರು ಟೀಕಿಸಿದ್ದಾರೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ನಾಗಮಂಗಲ ಘಟನೆಗೆ ರಾಜ್ಯ ಸರ್ಕಾರವೇ ಹೊಣೆ: ಪ್ರಲ್ಹಾದ್ ಜೋಶಿ ವಾಗ್ದಾಳಿ
ಪ್ರಲ್ಹಾದ್ ಜೋಶಿ
Follow us
| Updated By: ಗಣಪತಿ ಶರ್ಮ

Updated on:Sep 12, 2024 | 9:45 AM

ಹುಬ್ಬಳ್ಳಿ, ಸೆಪ್ಟೆಂಬರ್ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು. ಘಟನೆ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದ ಗಲಭೆ ಆಗಿದೆ. ನಾಗಮಂಗಲದಲ್ಲಿ ದೊಡ್ಡ ಪ್ರಮಾಣದಲ್ಲಿ ಗಲಾಟೆ ಸಂಭವಿಸಿದೆ ಎಂದರು.

ಗಣೇಶ ಮೂರ್ತಿ ಇದ್ದರೂ ಕಲ್ಲು ಹೊಡೆದು ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್​ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕಿದೆ. ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಘಟನೆಗಳು ಆಗುತ್ತಿದೆ. ಇದಕ್ಕೆಲ್ಲ ರಾಜ್ಯ ಸರ್ಕಾರವೇ ಹೊಣೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಸನಗೌಡ ಪಾಟೀಲ್ ಯತ್ನಾಳ್ ಖಂಡನೆ

ಮಂಡ್ಯದಲ್ಲಿ ಗಣೇಶ ವಿಸರ್ಜನೆಯ ಸಮಯದಲ್ಲಿ ಅನ್ಯಕೋಮಿನವರು ಮತ್ತೊಮ್ಮೆ ತಮ್ಮ ದುರ್ಬುದ್ದಿ, ದುಷ್ಟತನ ತೋರಿದ್ದಾರೆ. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಕಲ್ಲುತೂರಿರುವುದು ಇವರ ರೋಗಗ್ರಸ್ಥ ಮನಃಸ್ಥಿತಿ ತೋರಿಸುತ್ತದೆ. ಗಣೇಶನ ಪ್ರಸಾದ ತಯಾರು ಮಾಡಲು ನಿಯಮಾವಳಿ ರೂಪಿಸಿದ ಸರ್ಕಾರ ಯಾರಿಗೂ ತೊಂದರೆ ಕೊಡದೆ ಗಣಪತಿ ವಿಸರ್ಜನೆಯ ಮೆರವಣಿಗೆಯ ಮೇಲೆ ಕಲ್ಲು ತೂರುವವರ ಮೇಲೆ ಏನು ಕ್ರಮ ತೆಗೆದುಕೊಳ್ಳುತ್ತದೆ? ಕಲ್ಲು ತೂರಿದ ಪುಂಡರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿ ಶಿಕ್ಷಿಸಬೇಕು ಹಾಗೂ ಕಲ್ಲುತೂರಾಟವನ್ನು ಪ್ರಚೋದಿಸಿದ ಪಟ್ಟಭದ್ರರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿದ್ದಾರೆ: ಕುಮಾರಸ್ವಾಮಿ ಕಿಡಿ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸಹ ಘಟನೆಯನ್ನು ಈಗಾಗಲೇ ಖಂಡಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಚಿವರ ಜತೆ ಪೊಲೀಸ್ ಕಮಿಷನರ್ ಚರ್ಚೆ

ನಾಗಮಂಗಲದಲ್ಲಿ ಗಲಭೆ ಸಂಭವಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಭದ್ರತಾ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರನ್ನು ಭೇಟಿಯಾದರು.

ಗುರುವಾರ ಬೆಳಗ್ಗೆಯೇ ಗೃಹ ಸಚಿವರ ನಿವಾಸಕ್ಕೆ ಆಗಮಿಸಿದ ಪೊಲೀಸ್ ಆಯುಕ್ತ ಬಿ.ದಯಾನಂದ್ ಬೆಂಗಳೂರಿನ ಭದ್ರತೆ ಬಗ್ಗೆ ಮಾಹಿತಿ ನೀಡಿದರು. ನಾಗಮಂಗಲ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಭದ್ರತಾ ಸ್ಥಿತಿಗತಿಯ ಪರಿಶೀಲನೆ ನಡೆಸುತ್ತಿದೆ.

ಇದನ್ನೂ ಓದಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದೇನು? ಇಲ್ಲಿದೆ ಸಮಗ್ರ ಮಾಹಿತಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ಸಂಜೆ ಗಣೇಶೋತ್ಸವ ಮೆರವಣಿಗೆ ವೇಳೆ ಮಸೀದಿ ಬಳಿ ಕಲ್ಲು ತೂರಾಟ ನಡೆದಿತ್ತು. ನಂತರ ಸಂಭವಿಸಿದ ಗಲಭೆಯಲ್ಲಿ ಅನೇಕ ಅಂಗಡಿಗಳು, ವಾಹನಗಳಿಗೆ ಹಾನಿಯಾಗಿದೆ. ಘಟನೆ ಸಂಬಂಧ ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈವರೆಗೆ ಜನರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:00 am, Thu, 12 September 24

ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ