ನಾಗೇಂದ್ರ ರಾಜೀನಾಮೆ: ಬಿಜೆಪಿಗೆ ಸಿಕ್ಕ ಜಯ, ಸಿಎಂ ರಾಜೀನಾಮೆಗೂ ಹೋರಾಟ ಎಂದ ರವಿ ಕುಮಾರ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನ‌ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್​, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ದಲಿತರ ಅಭಿವೃದ್ಧಿಗೆ ತೆಗೆದಿಟ್ಟ ಹಣ ಚುನಾವಣೆಗೆ ಬಳಸಿರುವುದು ಸಾಬೀತಾಗಿದೆ. ನಾಗೇಂದ್ರ ರಾಜೀನಾಮೆ ಬಿಜೆಪಿಗೆ ಸಿಕ್ಕ ಜಯ. ಒಬ್ಬ ಪ್ರಾಮಾಣಿಕ ಅಧಿಕಾರಿ ಹೋರಾಟಕ್ಕೆ ಸಂದ ಜಯ ಎಂದು ಹೇಳಿದ್ದಾರೆ.

ನಾಗೇಂದ್ರ ರಾಜೀನಾಮೆ: ಬಿಜೆಪಿಗೆ ಸಿಕ್ಕ ಜಯ, ಸಿಎಂ ರಾಜೀನಾಮೆಗೂ ಹೋರಾಟ ಎಂದ ರವಿ ಕುಮಾರ್
ನಾಗೇಂದ್ರ ರಾಜೀನಾಮೆ: ಬಿಜೆಪಿಗೆ ಸಿಕ್ಕ ಜಯ, ಸಿಎಂ ರಾಜೀನಾಮೆಗೂ ಹೋರಾಟ ಎಂದ ರವಿ ಕುಮಾರ್
Edited By:

Updated on: Jun 06, 2024 | 5:12 PM

ಬೆಂಗಳೂರು, ಜೂನ್​ 06: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರ ಹೆಸರು ಕೇಳಿಬಂದ ಹಿನ್ನಲ್ಲೆ ಇಂದು ರಾಜೀನಾಮೆ ನೀಡಿದ್ದಾರೆ. ಆದರೆ ಸಂಜೆ ಅಧಿಕೃತವಾಗಿ ಮಾಹಿತಿ ಹೊರಬಿಳ್ಳಲಿದೆ. ನಾಗೇಂದ್ರ ರಾಜೀನಾಮೆ ಬಿಜೆಪಿಗೆ ಸಿಕ್ಕ ಜಯ. ಒಬ್ಬ ಪ್ರಾಮಾಣಿಕ ಅಧಿಕಾರಿ ಹೋರಾಟಕ್ಕೆ ಸಂದ ಜಯ ಎಂದು ವಿಧಾನ‌ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ದಲಿತರ ಅಭಿವೃದ್ಧಿಗೆ ತೆಗೆದಿಟ್ಟ ಹಣ ಚುನಾವಣೆಗೆ ಬಳಸಿರುವುದು ಸಾಬೀತಾಗಿದೆ. ಸರ್ಕಾರ ಭ್ರಷ್ಟಾಚಾರ ಆಗಿರುದನ್ನು ಒಪ್ಪಿಕೊಂಡಿದೆ. ಇಷ್ಟು ದೊಡ್ಡ ಭ್ರಷ್ಟಾಚಾರ ಸಿಎಂ ಅನುಮತಿ ಇಲ್ಲದೇ ಕಳಿಸಲು ಸಾಧ್ಯವಿಲ್ಲ.

ಇದನ್ನೂ ಓದಿ: ಸಚಿವ ನಾಗೇಂದ್ರ ರಾಜೀನಾಮೆ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ

ಹಣಕಾಸು ಸಚಿವರಾಗಿರುವ ಸಿದ್ದರಾಮಯ್ಯ ಕೂಡ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ರಾಜೀನಾಮೆ ಕೊಡದಿದ್ದರೆ ರಾಜ್ಯಾದ್ಯಂತ ಸಿದ್ದರಾಮಯ್ಯ ವಿರುದ್ದ ಹೋರಾಟ ಮಾಡುತ್ತೇವೆ. ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

ಇನ್ನೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಟಿವಿ9ಗೆ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಂಜೆ 4.30ಕ್ಕೆ ಸುದ್ದಿಗೋಷ್ಠಿ ನಡೆಸುತ್ತೇನೆ. ಬಳಿಕ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದುಕೊಂಡ ವಾಲ್ಮೀಕಿ ನಿಗಮ ಹಗರಣ: ಇಡಿ ಮೊರೆ ಹೋದ ಬಿಜೆಪಿ

ನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಸುದ್ದಿಗೋಷ್ಠಿ ಮಾಡಿದ್ದು, ವೇಳೆ ಸಚಿವ ನಾಗೇಂದ್ರ ಕರೆ ಮಾಡಿದ್ದು, ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಡಿಸಿಎಂಗೆ ಸ್ಪಷ್ಟನೆ ನೀಡಿದ್ದಾರೆ. ಸಂಜೆ 4.30ಕ್ಕೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಮಾಡ್ತೇನೆ. ಬಳಿಕ ತೀರ್ಮಾನ ಮಾಡ್ತೇನೆ ಎಂದು ಡಿಕೆ ಶಿವಕುಮಾರ್​ಗೆ ನಾಗೇಂದ್ರ ಹೇಳಿದ್ದಾರೆ. ಸಂಜೆ 7.30ಕ್ಕೆ ಸಿಎಂರನ್ನು ನಾಗೇಂದ್ರ ಭೇಟಿ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:12 pm, Thu, 6 June 24

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us