ಮೋದಿ ಭೇಟಿಯಾಗಿ ಮೀನುಗಾರ ಮತ್ಸ್ಯ ದೇವತೆಯ ಸ್ಮರಣಿಕೆ ನೀಡಿದ ಕೋಟ ಶ್ರೀನಿವಾಸ ಪೂಜಾರಿ, ಕಟೀಲ್​

ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಕೇಂದ್ರದ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಮೀನುಗಾರರ ಕಲ್ಯಾಣ ಸಂಬಂಧಿತ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮೋದಿ ಭೇಟಿಯಾಗಿ ಮೀನುಗಾರ ಮತ್ಸ್ಯ ದೇವತೆಯ ಸ್ಮರಣಿಕೆ ನೀಡಿದ ಕೋಟ ಶ್ರೀನಿವಾಸ ಪೂಜಾರಿ, ಕಟೀಲ್​
ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಕೋಟಾ ಶ್ರೀನಿವಾಸ ಪೂಜಾರಿ, ನಳೀನ್​ ಕುಮಾರ್ ಕಟೀಲ್​​
Edited By:

Updated on: Dec 14, 2022 | 8:57 PM

ನವದೆಹಲಿ: ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಕೇಂದ್ರದ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಕರಾವಳಿ ಭಾಗದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳು, ಮೀನುಗಾರರ ಕಲ್ಯಾಣ ಸಂಬಂಧಿತ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ ನೀಡುವುದಾಗಿ ಪ್ರಧಾನಿ ಮೋದಿ (Nagendra Modi) ಭರವಸೆ ನೀಡಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ತಿಳಿಸಿದ್ದಾರೆ.

ಇಂದು (ಡಿ.14) ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಮತ್ತು ಹಿಂದುಳಿದ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಸಂಸತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಈ ವೇಳೆ ​ಕೋಟಾ ಶ್ರೀನಿವಾಸ್ ಪೂಜಾರಿ ಸಮಾಜಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗದ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವರಿಸಿದರು.ಈ ವೇಳೆ ಪ್ರಧಾನಿಯವರಿಗೆ ಮತ್ಸ್ಯ ದೇವತೆ ಸ್ಮರಣಿಕೆ ನೀಡಿ ಗೌರವಿಸಿದರು.

ಹಿಂದೂಗಳ ಪ್ರತಿ ಆಚರಣೆ ಅಣುಕಿಸುವ ಕಾಂಗ್ರೆಸ್​ಗೆ ಸೋಲಿನ ಭೀತಿ

ವಾಸ್ತುವಿಗಾಗಿ ಕಾಂಗ್ರೆಸ್ ಕಚೇರಿಯ ಮೆಟ್ಟಿಲನ್ನು ನವೀಕರಣ ನಾಡುತ್ತಿರುವ ವಿಚಾರವಾಗಿ ಟ್ವೀಟ್ ಮೂಲಕ ಕಾಂಗ್ರೆಸ್​ಗೆ ನಳಿನ್ ಕುಮಾರ್ ಕಟೀಲು ಟಾಂಗ್ ಕೊಟ್ಟಿದ್ದಾರೆ. ಹಿಂದೂಗಳ ಪ್ರತಿ ಆಚರಣೆ ಅಣುಕಿಸುವ ಕಾಂಗ್ರೆಸ್​ಗೆ ಸೋಲಿನ ಭೀತಿ ಇದೆ. ಹೀಗಾಗಿ ಮಂಗಳೂರಿನಲ್ಲಿ ವಾಸ್ತು ದೋಷದ ಮೊರೆ ಹೋಗಿದೆ. ತಲೆಗೆ ಹೊಯ್ದ ನೀರು ಕಾಲಿಗೆ ಬರಲೇಬೇಕೆಂಬುದಕ್ಕೆ ಉದಾಹರಣೆ ಎಂದು ಟ್ವೀಟ್​ ಮಾಡಿದ್ದಾರೆ.

ಕಾಂಗ್ರೆಸ್​ಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಮುನ್ಸೂಚನೆ ದೊರೆತಿದೆ. ಸೋಲಿನ ಮುನ್ಸೂಚನೆ ಸಿಗುತ್ತಿದ್ದಂತೆ ಇನ್ನಿಲ್ಲದ ಪ್ರಯತ್ನಕ್ಕೆ ಕೈಹಾಕಿದೆ. ಅಂದು ಕೇಸರಿ ತಿಲಕ ಇಡುವವರನ್ನು ಕಂಡರೆ ಭಯ ಎಂದರು. ಮಾಜಿ ಸಿಎಂ ಸಿದ್ದರಾಮಯ್ಯ ತಮಗೆ ಭಯ ಅಂತ ಹೇಳಿದರು. ಸತೀಶ್ ಜಾರಕಿಹೊಳಿ ಹಿಂದೂ ಎನ್ನುವ ಪದವೇ ಅಶ್ಲೀಲ ಎಂದರು. ಅವಕಾಶ ಸಿಕ್ಕಾಗಲೆಲ್ಲಾ ಹಿಂದೂ ಧರ್ಮ ಹೀಯಾಳಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮದ ಸಂಪ್ರದಾಯ ಹಾಗೂ ಆಚಾರ ವಿಚಾರಗಳನ್ನು ಹೀಯಾಳಿಸುವುದನ್ನೇ ಕಾಂಗ್ರೆಸ್‌ ನಾಯಕರು ಕಸುಬಾಗಿಸಿಕೊಂಡಿದ್ದಾರೆ. ಈಗ ತಮ್ಮ ಪಕ್ಷದ ಪ್ರಗತಿಗಾಗಿ ವಾಸ್ತುವಿನ ಮೊರೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Published On - 8:56 pm, Wed, 14 December 22