ಯತ್ನಾಳ್ ವಿರುದ್ಧ ರಾಷ್ಟ್ರೀಯ ಶಿಸ್ತು ಸಮಿತಿಯೇ ಕ್ರಮಕೈಗೊಳ್ಳುತ್ತದೆ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

| Updated By: ganapathi bhat

Updated on: Apr 06, 2022 | 11:03 PM

ಯತ್ನಾಳ್ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ಮಾಹಿತಿ ನೀಡಲಾಗುವುದು. ಅವರ ವಿರುದ್ಧ ಶಿಸ್ತು ಸಮಿತಿಯೇ ಕ್ರಮಕೈಗೊಳ್ಳುತ್ತದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಯತ್ನಾಳ್ ವಿರುದ್ಧ ರಾಷ್ಟ್ರೀಯ ಶಿಸ್ತು ಸಮಿತಿಯೇ ಕ್ರಮಕೈಗೊಳ್ಳುತ್ತದೆ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್
ನಳಿನ್ ಕುಮಾರ್ ಕಟೀಲ್ (ಸಂಗ್ರಹ ಚಿತ್ರ)
Follow us on

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಹಿರಂಗ ಅಸಮಾಧಾನ ಹೊರ ಹಾಕಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಯತ್ನಾಳ್ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ಮಾಹಿತಿ ನೀಡಲಾಗುವುದು. ಅವರ ವಿರುದ್ಧ ಶಿಸ್ತು ಸಮಿತಿಯೇ ಕ್ರಮಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಯಾರಿಗೂ ಪಕ್ಷ, ಮುಖ್ಯಮಂತ್ರಿ ವಿರುದ್ಧ ಅಸಮಾಧಾನವಿಲ್ಲ. ಸಭೆಯಲ್ಲಿ ಕೆಲ ಶಾಸಕರು ಅನುದಾನವನ್ನು ಕೇಳಿದ್ದಾರೆ. ಅವರಿಗೆ ಸಿ.ಎಂ. ಕೊವಿಡ್ ಸಂದರ್ಭದ ಬಗ್ಗೆ ತಿಳಿಸಿದ್ದಾರೆ. ಶಾಸಕರು ಏನೇ ಅಸಮಾಧಾನ ಇದ್ದರೂ ನನ್ನ, ಸಿಎಂ ಬಳಿ ಚರ್ಚೆ ಮಾಡಬೇಕು. ಅದು ಬಿಟ್ಟು ಬಹಿರಂಗವಾಗಿ ಮಾತನಾಡಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಮಾತನಾಡಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ನಳಿನ್ ಕುಮಾರ್ ತಿರುಗೇಟು
ಕುರುಬ ಸಮುದಾಯದ ST ಮೀಸಲಾತಿ ಹೋರಾಟ ವಿಚಾರವಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೂ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ST ಮೀಸಲಾತಿ ಹೋರಾಟದ ಹಿಂದೆ ಆರ್‌.ಎಸ್.ಎಸ್. ಕೈವಾಡವಿದೆ ಎಂಬ ಸಿದ್ದರಾಮಯ್ಯ ಆರೋಪವನ್ನು ತಳ್ಳಿಹಾಕಿದ್ದಾರೆ.

ಈ ಹೋರಾಟದ ಹಿಂದೆ ಆರ್‌.ಎಸ್.ಎಸ್. ಕೈವಾಡ ಇಲ್ಲ. ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಆರ್‌.ಎಸ್.ಎಸ್.ಗೆ ತನ್ನದೇ ಆದ ಕೆಲಸ ಕಾರ್ಯಗಳಿವೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತದೆ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

CM ಸ್ಥಾನದಿಂದ BSY ಕೆಳಗಿಳಿಯೋದು ಪಕ್ಕಾ.. ಆದ್ರೆ ಯಾವಾಗ ಅಂತಾ ಗೊತ್ತಿಲ್ಲ -ಸಿದ್ದರಾಮಯ್ಯ

Published On - 2:21 pm, Wed, 6 January 21