ಕಾಂಗ್ರೆಸ್ ಸರ್ಕಾರದ ನಿಗಮ ಮಂಡಳಿ ಪಟ್ಟಿಯಲ್ಲಿ RSS ಕಾರ್ಯಕರ್ತನಿಗೆ ಸ್ಥಾನ! ‘ಕೈ’ ಕಾರ್ಯಕರ್ತರಿಂದ ತೀವ್ರ ಅಸಮಾಧಾನ
ರಾಜ್ಯ ಕಾಂಗ್ರೆಸ್ ಸರ್ಕಾರ ಬುಧವಾರ ವಿವಿಧ ನಿಗಮಗಳು ಮತ್ತು ಪ್ರಾಧಿಕಾರಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನಿನ್ನೆ ಬಿಡುಗಡೆಯಾಗಿರುವ ಮೊದಲ ಪಟ್ಟಿಯಲ್ಲಿ ಚಿತ್ರದುರ್ಗದ ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ಮಾಜಿ ಬಿಜೆಪಿ ನಗರ ಮಂಡಲ ಅಧ್ಯಕ್ಷರ ಹೆಸರಿದ್ದು, ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನ ಲಭಿಸಿದೆ.

ಚಿತ್ರದುರ್ಗದ, ನವೆಂಬರ್ 12: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಪ್ತ ಎಂದು ಗುರುತಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ಬಿಜೆಪಿ ಮುಖಂಡ ಬಿಡಿ ಭೂಕಾಂತ್ಗೆ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿತ್ತು. ಇದು ಸಾಕಷ್ಟು ವಿವಾದ ಬೆನ್ನಲ್ಲೇ ಆದೇಶವನ್ನು ಹಿಂಪಡೆಯಲಾಗಿತ್ತು. ಆದರೆ ಇದೀಗ ಸರ್ಕಾರ ಮತ್ತೊಂದು ಎಡವಟ್ಟು ಮಾಡಿದ್ದು, ಬುಧವಾರ ಬಿಡುಗಡೆಯಾಗಿರುವ ಪಟ್ಟಿಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನಿಗೆ ರೇಷ್ಮೆ ಅಭಿವೃದ್ಧಿ ನಿಗಮ ನಿರ್ದೇಶಕ ಸ್ಥಾನ ನೀಡಲಾಗಿದೆ. ಇದು ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.
RSS ಕಾರ್ಯಕರ್ತನಿಗೆ ರೇಷ್ಮೆ ಅಭಿವೃದ್ಧಿ ನಿಗಮ ನಿರ್ದೇಶಕ ಸ್ಥಾನ
ರಾಜ್ಯ ಸರ್ಕಾರ ಬುಧವಾರದಂದು ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಬರೋಬ್ಬರಿ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಆ ಮೂಲಕ ಉಪ ಚುನಾವಣೆಗೂ ಮುನ್ನವೇ ಪಕ್ಷದ ಕಾರ್ಯಕರ್ತರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಆದರೆ ನಿನ್ನೆ ಪ್ರಕಟಗೊಂಡ ಪಟ್ಟಿಯಲ್ಲಿ RSS ಕಾರ್ಯಕರ್ತಗೆ ರೇಷ್ಮೆ ಅಭಿವೃದ್ಧಿ ನಿಗಮ ನಿರ್ದೇಶಕ ಸ್ಥಾನ ನೀಡಲಾಗಿದೆ.
ನಿರ್ದೇಶಕ ಸ್ಥಾನ ತಿರಸ್ಕರಿಸುವ ಬಗ್ಗೆ ಲೀಲಾಧರ ಠಾಕೂರ್ ಚಿಂತನೆ
ಹೌದು, ಚಿತ್ರದುರ್ಗದ ಲೀಲಾಧರ ಠಾಕೂರ್ಗೆ ನಿಗಮದ ನಿರ್ದೇಶಕ ಸ್ಥಾನ ಒಲಿದಿದೆ. ಇವರು ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದು, ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಆಪ್ತರೂ ಹೌದು. ಲೀಲಾಧರ ಠಾಕೂರ್ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸೇವೆ ಕೂಡ ಸಲ್ಲಿಸಿದ್ದರು. ಇನ್ನು ಠಾಕೂರ್ ಹೆಸರು ಘೋಷಣೆಯಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ನಿರ್ದೇಶಕ ಸ್ಥಾನ ತಿರಸ್ಕರಿಸುವ ಬಗ್ಗೆ ಅವರು ಚಿಂತನೆ ನಡೆಸಿದ್ದಾರೆ.
ಇದನ್ನೂ ಓದಿ: ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಗಿಫ್ಟ್ ಕೊಟ್ಟ ಸರ್ಕಾರ: ನಿಗಮ ಮಂಡಳಿ, ಪ್ರಾಧಿಕಾರಗಳಿಗೆ 428 ಕಾರ್ಯಕರ್ತರ ನೇಮಕ
ಸಿಎಂ ಡಿಕೆ ಶಿವಕುಮಾರ್ ಅನುಮೋದನೆ ಬೆನ್ನಲ್ಲೇ ರಾಜ್ಯದ ಸಾರಿಗೆ, ವಿದ್ಯುತ್ ನಿಗಮ, ಅಭಿವೃದ್ಧಿ ನಿಗಮಗಳು ಹಾಗೂ ಪ್ರಾಧಿಕಾರ ಸೇರಿದಂತೆ ವಿವಿಧ ಸಂಸ್ಥೆಗಳಿಗೆ ಒಟ್ಟು 428 ಕಾರ್ಯಕರ್ತರನ್ನು ನಿರ್ದೇಶಕರು ಮತ್ತು ಸದಸ್ಯರನ್ನ ನೇಮಕ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
