AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Recruitment 2026: ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ; ಆ. 10ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಉಪ ಪ್ರಧಾನ ವ್ಯವಸ್ಥಾಪಕ (Operation Safety) ಹುದ್ದೆಗೆ ನೇಮಕಾತಿ ಪ್ರಕಟಿಸಿದೆ. ಅರ್ಹರು ಆಗಸ್ಟ್ 10 ರೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಿ. ಸಹಿ ಮಾಡಿದ ಅರ್ಜಿಯ ಹಾರ್ಡ್ ಕಾಪಿಯನ್ನು ಆಗಸ್ಟ್ 13 ಸಂಜೆ 4 ಗಂಟೆಯೊಳಗೆ BMRCL ಕಚೇರಿಗೆ ತಲುಪಿಸುವುದು ಅಗತ್ಯ. ನಮ್ಮ ಮೆಟ್ರೋದಲ್ಲಿ ಸೇವೆ ಸಲ್ಲಿಸಲು ಇದು ಉತ್ತಮ ಅವಕಾಶ.

BMRCL Recruitment 2026: ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ; ಆ. 10ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ
ನಮ್ಮ ಮೆಟ್ರೋ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Jul 18, 2026 | 2:54 PM

Share

ಮುಖ್ಯಾಂಶಗಳು

  • ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ ನೇಮಕಾತಿ
  • ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ
  • ಅರ್ಹರು ಆಗಸ್ಟ್ 10 ರೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಿ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಸುವರ್ಣ ಅವಕಾಶ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಸಹಭಾಗಿತ್ವದ ಸಂಸ್ಥೆಯಾದ ನಮ್ಮ ಮೆಟ್ರೋ, ನಿಯೋಜನೆ ಅಥವಾ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ.

ಯಾವ ಹುದ್ದೆಗೆ ನೇಮಕಾತಿ?

ಮೆಟ್ರೋ ರೈಲು ನಿಗಮದ ಯೋಜನಾ ವಿಭಾಗದಲ್ಲಿ ಉಪ ಪ್ರಧಾನ ವ್ಯವಸ್ಥಾಪಕರು (Operation Safety – Deputy General Manager) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಈ ವಿಭಾಗದಲ್ಲಿ 01 ಹುದ್ದೆ ಖಾಲಿ ಇದ್ದು, ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತರಾಗಿರುವ ಅರ್ಹ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು ಮತ್ತು ಸಮಯ:

ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ವಿಧಾನಗಳ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್​ 10. ಇದಲ್ಲದೇ ಸಹಿ ಮಾಡಿದ ಭೌತಿಕ ಅರ್ಜಿ (Hard Copy) ತಲುಪಿಸಲು ಆಗಸ್ಟ್​ 13 ಸಂಜೆ 4:00 ಗಂಟೆಯ ವರೆಗೆ ಸಮಯವಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಉದ್ಯೋಗ 2026: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ

ಅರ್ಜಿ ಸಲ್ಲಿಕೆ ಹೇಗೆ?

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮೊದಲು ಅರ್ಜಿ ಸಲ್ಲಿಸಬೇಕು. ತದನಂತರ ಡೌನ್‌ಲೋಡ್ ಮಾಡಿದ ಮತ್ತು ಸಹಿ ಮಾಡಿದ ಅರ್ಜಿಯ ಪ್ರತಿಯನ್ನು ಅಗತ್ಯವಿರುವ ಎಲ್ಲಾ ಪೂರಕ ದಾಖಲೆಗಳೊಂದಿಗೆ (Documents) ಬಿಎಂಆರ್‌ಸಿಎಲ್ ಕಚೇರಿಗೆ ನಿಗದಿತ ಸಮಯದೊಳಗೆ ತಲುಪಿಸಬೇಕಾಗುತ್ತದೆ. ಈ ಹುದ್ದೆಗೆ ಬೇಕಾಗುವ ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ ಮತ್ತು ಅರ್ಜಿ ಪ್ರಕ್ರಿಯೆಯ ಸಂಪೂರ್ಣ ವಿವರಗಳಿಗಾಗಿ ಅಭ್ಯರ್ಥಿಗಳು ಬಿಎಂಆರ್‌ಸಿಎಲ್‌ನ ಅಧಿಕೃತ ವೆಬ್‌ಸೈಟ್ ಆದ www.bmrc.co.in/Career Section ಗೆ ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ