AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ 3ನೇ ಹಂತದ ಯೋಜನೆ: 3,627 ಮರಗಳ ಹನನಕ್ಕೆ BMRCLನಿಂದ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆ ಕಾಮಗಾರಿಗಾಗಿ ಜಿಬಿಎ (GBA) ಅರಣ್ಯ ವಿಭಾಗಕ್ಕೆ ಬಿಎಂಆರ್‌ಸಿಎಲ್ ಪ್ರಸ್ತಾವನೆ ಸಲ್ಲಿಸಿದ್ದು, ನಗರದ ವಿವಿಧೆಡೆ ಬರೋಬ್ಬರಿ 3,627 ಮರಗಳನ್ನು ಕಡಿಯಲು ಸಿದ್ಧತೆ ನಡೆದಿದೆ. ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಹೊರವರ್ತುಲ ರಸ್ತೆಯ (ORR) ಮೂಲಕ 32.15 ಕಿ.ಮೀ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗೆ ಮಾಗಡಿ ರಸ್ತೆಯ ಮೂಲಕ 12.50 ಕಿ.ಮೀ ಸೇರಿ ಒಟ್ಟು 44.65 ಕಿ.ಮೀ ಮೆಟ್ರೋ ಮಾರ್ಗವನ್ನು ಈ ಯೋಜನೆ ಒಳಗೊಂಡಿದೆ.

ನಮ್ಮ ಮೆಟ್ರೋ 3ನೇ ಹಂತದ ಯೋಜನೆ: 3,627 ಮರಗಳ ಹನನಕ್ಕೆ BMRCLನಿಂದ ಪ್ರಸ್ತಾವನೆ ಸಲ್ಲಿಕೆ
ಸಾಂದರ್ಭಿಕ ಚಿತ್ರImage Credit source: PTI and Getty Images
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Jun 19, 2026 | 3:39 PM

Share

ಬೆಂಗಳೂರು, ಜೂನ್​​ 19: ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗಾಗಿ ಮರಗಳ ಹನನಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಬೆಂಗಳೂರಿನಲ್ಲಿ (Bengaluru) ಬರೋಬ್ಬರಿ 3,627 ಮರಗಳ ಮಾರಣಹೋಮಕ್ಕೆ ಸಿದ್ಧತೆ ನಡೆದಿದೆ. ಈ ಸಂಬಂಧ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅರಣ್ಯ ವಿಭಾಗಕ್ಕೆ BMRCL ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಆ ಬೆನ್ನಲ್ಲೇ ಮರಗಳನ್ನು ಕಡಿಯುವ ಸಂಬಂಧ  ಸಾರ್ವಜನಿಕ ಪ್ರಕಟಣೆ ಕೂಡ ಹೊರಡಿಸಿ ಆಕ್ಷೇಪಣೆ ಸಲ್ಲಿಕೆಗೆ ಜಿಬಿಎ ಅವಕಾಶ ನೀಡಿದೆ.

ಮುಖ್ಯಾಂಶಗಳು

  • ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಮರಗಳ ಮಾರಣಹೋಮ
  • 3,627 ಮರಗಳ ಹನನಕ್ಕೆ GBA ಅರಣ್ಯ ವಿಭಾಗಕ್ಕೆ BMRCLನಿಂದ ಪ್ರಸ್ತಾಪ
  • ಈ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೂ ಅವಕಾಶ

ಮೆಟ್ರೋ ನಿಲ್ದಾಣ, ಮೆಟ್ರೋ ವಯಾಡಕ್ಟ್ ಜೊತೆಗೆ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣಕ್ಕೆ ಯೋಜನೆ ನಡೆದಿದ್ದು, 2,426 ವಿವಿಧ ಜಾತಿಯ ಮರಗಳು ಹಾಗೂ 1,201 ಅಡಕೆ ಮರಗಳಿಗೆ ಈಗ ಕಂಟಕ ಎದುರಾಗಿದೆ. ಸಾರ್ವಜನಿಕರ ಆಕ್ಷೇಪಣೆ ಗಮನಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಅರಣ್ಯ ವಿಭಾಗ ಮಾಹಿತಿ ನೀಡಿದೆ. ಹೊಸಹಳ್ಳಿ, ಕೆಹೆಚ್​​ಬಿ ಕಾಲೋನಿ, ಕಾಮಾಕ್ಷಿಪಾಳ್ಯ, ಸುಮನಹಳ್ಳಿ ಕ್ರಾಸ್, ಸುಂಕದಕಟ್ಟೆ, ಹೇರೋಹಳ್ಳಿ, ಬ್ಯಾಡರಹಳ್ಳಿ, ಕಾಮತ್ ಲೇಔಟ್ ಕಡಬಗೆರೆ ಪ್ರದೇಶಗಳು ಯೋಜನೆಯಿಂದ ಭಾದಿತವಾಗಲಿವೆ.

ಇದನ್ನೂ ಓದಿ: ನಮ್ಮ ಮೆಟ್ರೋ ರೆಡ್ ಲೈನ್ ವೆಚ್ಚ ಕಡಿತಕ್ಕೆ ಒಂದು ಸ್ಟೇಷನನ್ನೇ ಕೈಬಿಡಲು ನಿರ್ಧರಿಸಿದ ಬಿಎಂಆರ್​ಸಿಎಲ್!

ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಹೊರವರ್ತುಲ ರಸ್ತೆಯ (ORR) ಮೂಲಕ 32.15 ಕಿ.ಮೀ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗೆ ಮಾಗಡಿ ರಸ್ತೆಯ ಮೂಲಕ 12.50 ಕಿ.ಮೀ ಸೇರಿ ಒಟ್ಟು 44.65 ಕಿ.ಮೀ ಮೆಟ್ರೋ ಮಾರ್ಗವನ್ನು ಈ ಯೋಜನೆ ಒಳಗೊಂಡಿದೆ. ಡಬಲ್ ಡೆಕ್ಕರ್‌ ಯೋಜನೆ ಸೇರ್ಪಡೆಯಿಂದ ಅನುಮೋದನೆಗಾಗಿ ಬಾಕಿ ಉಳಿದಿದ್ದ ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಶೀಘ್ರವೇ ದೊರೆಯುವ ಸಾಧ್ಯತೆ ಇದೆ ಎಂಬ ಬಗ್ಗೆ ಇತ್ತೀಚೆಗಷ್ಟೇ ವರದಿಯಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ