ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ

ಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಪ್ರತಿದಿನ ಮುಂಜಾನೆ ಹಾಗೂ ರಾತ್ರಿ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚಾರ ಮಾಡಲಿದೆ

ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ
ಬೆಂಗಳೂರು ಮೆಟ್ರೋ ರೈಲು
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 06, 2022 | 9:13 PM

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಪ್ರತಿದಿನ ಮುಂಜಾನೆ ಹಾಗೂ ರಾತ್ರಿ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚಾರ ಮಾಡಲಿದೆ ಎಂದು ಬಿಎಮ್​ಆರ್​ಸಿಎಲ್ (BMRCL) ಮಾಧ್ಯಮ ಪ್ರಕಟಣೆ ಹೊರಡಿಸಿದೆ.  ಬೆಳಿಗ್ಗೆ 5 ಗಂಟೆಯಿಂದ 6 ರವರೆಗೆ ಹಾಗೂ ರಾತ್ರಿ‌ 10 ರಿಂದ 11 ಗಂಟೆವರೆಗೆ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚರಿಸಲಿದೆ.

ಇದುವರೆಗೂ ಪ್ರತಿ 20 ನಿಮಿಷಕ್ಕೊಂದು ಮೆಟ್ರೋ ಸಂಚರಿಸುತ್ತಿತ್ತು. ಇದರಿಂದ ಬೆಳಿಗ್ಗೆ, ರಾತ್ರಿ ಓಡಾಡೋ ಪ್ರಯಾಣಿಕರಿಕರಿಗೆ ತೊಂದರೆಯಾಗಿತ್ತು. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ 15 ನಿಮಿಷಗಳ ಮಧ್ಯಂತರದಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ ಎಂದು ಬಿಎಮ್​ಆರ್​ಸಿಎಲ್ ತಿಳಿಸಿದೆ.

 ಬೆಂಗಳೂರು ಟ್ರಾಫಿಕ್ ಜಂಜಾಟಕ್ಕೆ ಬೀಳಲಿದೆ ಬ್ರೇಕ್

ಬೆಂಗಳೂರು: ನಗರದಲ್ಲಿ ವಾಹನ ಸಂಚಾರಗಳ ಓಡಾಡ ಹೆಚ್ಚಾಗತ್ತಿದ್ದು, ದಿನನಿತ್ಯ ಜನರು ಟ್ರಾಫಿಕ್ ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ. ಈ ಟ್ರಾಫಿಕ್ ಜಂಜಾಟವನ್ನು ನಿಯಂತ್ರಿಸಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಗೂಗಲ್ ಮೊರೆಹೋಗಿದ್ದು, ಇಲ್ಲಿ ನಡೆಸಿದ ಅಧ್ಯಯನವನ್ನು ಪ್ರಯೋಗಿಸಲು ಮುಂದಾಗಿದೆ. ಈಗಾಗಲೇ ಗೂಗಲ್ ಅಧ್ಯಯನದಂತೆ ಟ್ರಾಫಿಕ್ ಸಿಗ್ನಲ್ ಟೈಮಿಂಗ್ ಅನ್ನು ಕತ್ತರಿಗುಪ್ಪೆ ಸಿಗ್ನಲ್ ಬಳಿ ಪ್ರಾಯೋಗಿಕವಾಗಿ ಅಳವಡಿಸಿತು. ಈ ಪ್ರಯೋಗದಲ್ಲಿ ಯಶಸ್ವಿ ಕಂಡ ಹಿನ್ನೆಲೆ ಇತರೆ ಕಡೆಗಳಲ್ಲೂ ಟೈಮಿಂಗ್ ಸೆಟ್ ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿರುವ ಹಿನ್ನೆಲೆ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದ ನಗರ ಟ್ರಾಫಿಕ್ ಪೊಲೀಸರು, ಗೂಗಲ್ ಅಧ್ಯಯ ನಡೆಸಿದ್ದಾರೆ. ಈ ಅಧ್ಯಯನದ ಮೂಲಕ ಕಂಡುಕೊಂಡ ಟ್ರಾಫಿಕ್ ಸಿಗ್ನಲ್ ಟೈಮಿಂಗ್ ಅನ್ನು ಮೊದಲ ಬಾರಿಗೆ ಕತ್ತರಿಗುಪ್ಪೆಯಲ್ಲಿ ಪ್ರಯೋಗಿಸಲಾಗಿದೆ.

ಕತ್ರಿಗುಪ್ಪೆಯ ಜಂಕ್ಷನ್ ಸಂಪರ್ಕಿಸುವ ನಾಲ್ಕು ರಸ್ತೆಗಳ ಸಿಗ್ನಲ್ ಬಗ್ಗೆ ಉಪಗ್ರಹದ ನೆರವಿನಿಂದ ವೈಜ್ಞಾನಿಕವಾಗಿ ಗೂಗಲ್​ ಅಧ್ಯಯನ ನಡೆಸಿದೆ. ನಾಲ್ಕು ರಸ್ತೆಯಲ್ಲಿ ಯಾವ ಸಮಯದಲ್ಲಿ ಎಷ್ಟು ವಾಹನ ದಟ್ಟಣೆ ಇರುತ್ತದೆ, ಯಾವ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆ ಇರುತ್ತದೆ, ಬೆಳಗಿನ ಅವದಿಯಲ್ಲಿ ಎಷ್ಟು, ಮಧ್ಯಾಹ್ನ ಎಷ್ಟು, ಸಂಜೆ ಎಷ್ಟು ಹಾಗೂ ರಾತ್ರಿ ವೇಳೆ ಎಷ್ಟು ದಟ್ಟಣೆ ಇರುತ್ತದೆ, ಯಾವ ರಸ್ತೆಗೆ ಯಾವ ಸಮಯದಲ್ಲಿ ಎಷ್ಟು ಸೆಕೆಂಡ್ ಕಾಲಾವಧಿ ನೀಡಬೇಕು ಎಂಬಿತ್ಯಾದಿಗಳ ಬಗ್ಗೆ ವಿವರವಾಗಿ ಅಧ್ಯಯನ ನಡೆಸಲಾಗಿದೆ.

ಈ ಅಧ್ಯಯನದ ಮೂಲಕ ಕತ್ತರಿಗುಪ್ಪೆ ಸಿಗ್ನಲ್​ನಲ್ಲಿ ಟೈಮರ್ ಸೆಕೆಂಡ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗಿದೆ. ಟ್ರಾಫಿಕ್ ಪೊಲೀಸರ ಪ್ರಾಯೋಗಿಕ ಯೋಜನೆಯು ಯಶಸ್ವಿಯಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಂಡ ಟ್ರಾಫಿಕ್ ಪೊಲೀಸರ ಮುಖದಲ್ಲಿ ಮಂದಹಾಸ ಮೂಡಿದೆ.

ಕತ್ತರಿಗುಪ್ಪೆ ಸಿಗ್ನಲ್​ಗೆ ಅಳವಡಿಸಿದ ಹೊಸ ಟೈಮಿಂಗ್​ನಿಂದಾಗಿ ಸಿಗ್ನಲ್​ನಲ್ಲಿ ವಾಹನ ದಟ್ಟಣೆ ಇಳಿಕೆಯಾಗಿದೆ. ಯಶಸ್ವಿ ಪ್ರಯೋಗದ ನಂತರ ನಗರದ ಇತರೆ ಕಡೆಗಳಲ್ಲಿ ವ್ಯವಸ್ಥೆಯನ್ನು ಜಾರಿಗೊಳಿಸಲು ಪೊಲೀಸರು ಒಲವು ತೋರಿಸುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಿ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Sat, 6 August 22

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​