Namma Metro: ಇಂದಿನಿಂದ ಟೋಕನ್​ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ; ವಾರದ ದಿನಗಳಲ್ಲಿ ಬೆಳಗ್ಗೆ 7 ರಿಂದ ಸಂಜೆ 6ರ ತನಕ ಸಂಚಾರ

Namma Metro Timings: ಇಂದಿನಿಂದ ನಮ್ಮ ಮೆಟ್ರೋ ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ ‌ಮಾಡಬಹುದು ಎನ್ನುವುದು ಗಮನಾರ್ಹ. ನಮ್ಮ ಮೆಟ್ರೋದ ಎಲ್ಲ ಸ್ಟೇಷನ್​ಗಳಲ್ಲಿ ಟೋಕನ್ ನೀಡಲಾಗುತ್ತದೆ ಎಂದು ಬಿಎಂಆರ್​ಸಿಎಲ್​ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.

Namma Metro: ಇಂದಿನಿಂದ ಟೋಕನ್​ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ; ವಾರದ ದಿನಗಳಲ್ಲಿ ಬೆಳಗ್ಗೆ 7 ರಿಂದ ಸಂಜೆ 6ರ ತನಕ ಸಂಚಾರ
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
Follow us
TV9 Web
| Updated By: Skanda

Updated on: Jul 01, 2021 | 8:34 AM

ಬೆಂಗಳೂರು: ಕೊರೊನಾ ಎರಡನೇ ಅಲೆ ಕಾರಣದಿಂದ ವ್ಯತ್ಯಯಗೊಂಡು ಮತ್ತೆ ನಿಗದಿತ ವೇಳೆಯಲ್ಲಿ ಆರಂಭಗೊಂಡಿದ್ದ ನಮ್ಮ ಮೆಟ್ರೋ ಸಂಚಾರದ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಇಂದಿನಿಂದ (ಜುಲೈ 1) ಸೋಮವಾರದಿಂದ ಶುಕ್ರವಾರದವರೆಗೆ ಮೆಟ್ರೋ ರೈಲು ಸಂಚಾರ ಮಾಡಲಿದ್ದು, ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಪ್ರಯಾಣಿಕರು ಇದರ ಅನುಕೂಲ ಪಡೆಯಬಹುದಾಗಿದೆ. ಈ ಹಿಂದೆ ಅನ್​ಲಾಕ್​ ಆಗುತ್ತಿದ್ದಂತೆ ಬೆಳಗ್ಗೆ 7 ರಿಂದ 11 ಮತ್ತು ಮಧ್ಯಾಹ್ನ 3 ರಿಂದ 6 ಗಂಟೆಯವರೆಗೆ ಮಾತ್ರ ನಮ್ಮ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಈ ಅವಧಿಯನ್ನು ಸೋಮವಾರದಿಂದ ಶುಕ್ರವಾರದ ತನಕ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ವಿಸ್ತರಿಸುತ್ತಿರುವುದಾಗಿ ಬಿಎಂಆರ್​ಸಿಎಲ್​ (BMRCL) ತಿಳಿಸಿದೆ.

ಪ್ರಸ್ತುತ ವಾರಾಂತ್ಯದ ಕೊರೊನಾ ಕರ್ಫ್ಯೂ ಇನ್ನೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರ ನಮ್ಮ ಮೆಟ್ರೋ ಸಂಚಾರ ಇರುವುದಿಲ್ಲ. ಈ ಎರಡು ದಿನಗಳನ್ನು ಹೊರತುಪಡಿಸಿ ಮಿಕ್ಕ ದಿನಗಳಲ್ಲಿ ಮಾತ್ರ ಪ್ರಯಾಣಿಕರು ಮೆಟ್ರೋದಲ್ಲಿ ಸಂಚರಿಸಬಹುದಾಗಿದೆ. ಇದೇ ವೇಳೆ ಇಂದಿನಿಂದ ನಮ್ಮ ಮೆಟ್ರೋ ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ ‌ಮಾಡಬಹುದು ಎನ್ನುವುದು ಗಮನಾರ್ಹ. ನಮ್ಮ ಮೆಟ್ರೋದ ಎಲ್ಲ ಸ್ಟೇಷನ್​ಗಳಲ್ಲಿ ಟೋಕನ್ ನೀಡಲಾಗುತ್ತದೆ ಎಂದು ಬಿಎಂಆರ್​ಸಿಎಲ್​ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿಂದೆ ಸುರಕ್ಷತೆ ದೃಷ್ಟಿಯಿಂದ ಮೆಟ್ರೋ ಕಾರ್ಡ್​ ಇದ್ದವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ, ಕಾರ್ಡ್​ ಹೊಂದಿದವರು ಆನ್​ಲೈನ್​ ಮೂಲಕವೇ ರಿಚಾರ್ಜ್​ ಮಾಡಿಸಿಕೊಂಡು ಮೆಟ್ರೋದಲ್ಲಿ ಪಯಣಿಸಬಹುದು ಎನ್ನಲಾಗಿತ್ತು. ಟೋಕನ್​ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದ್ದ ಕಾರಣ ಕಾರ್ಡ್​ ಬಳಸದ ಅನೇಕ ಪ್ರಯಾಣಿಕರಿಗೆ ಅನಾನುಕೂಲವಾಗಿತ್ತು. ಆದರೆ, ಇದೀಗ ಟೋಕನ್​ ಖರೀದಿಸಿ ಪ್ರಯಾಣ ಮಾಡಬಹುದು ಎಂದು ಹೇಳಿರುವ ಕಾರಣ ಮೆಟ್ರೋ ರೈಲು ನಿಲ್ದಾಣದತ್ತ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: Namma Metro ಮೆಟ್ರೋ ಪ್ರಯಾಣಿಕರ ಗಮನಕ್ಕೆ.. ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಶುರು 

Namma Metro: ಕೋವಿಡ್​ ವೀಕೆಂಡ್‌ ಕರ್ಫ್ಯೂ; ಶುಕ್ರವಾರ ಸಂಜೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸ್ಥಗಿತ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ