Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಬಾಲಯ್ಯ ಇನ್ನಿಲ್ಲ; ಕೊರೊನಾ ಸೋಂಕಿಗೆ ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅಭಿಮಾನಿ ಬಲಿ

ವೆಂಕಟೇಶ್ವರ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಯ ಸಾವಿಗೆ ನಟ ಬಾಲಕೃಷ್ಣ ಕಂಬನಿ ಮಿಡಿದಿದ್ದಾರೆ. ಅಷ್ಟೇ ಅಲ್ಲದೇ ವೆಂಕಟೇಶ್ವರ್ ಪುತ್ರ ಹಾಗೂ ಪತ್ನಿಯೊಂದಿಗೆ ದೂರವಾಣಿ ಮುಖಾಂತರ ಮಾತನಾಡಿರುವ ಬಾಲಕೃಷ್ಣ ಸಾಂತ್ವನ ಹೇಳಿದ್ದಾರೆ.

ಬಳ್ಳಾರಿ ಬಾಲಯ್ಯ ಇನ್ನಿಲ್ಲ; ಕೊರೊನಾ ಸೋಂಕಿಗೆ ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅಭಿಮಾನಿ ಬಲಿ
ಬಳ್ಳಾರಿ ಬಾಲಯ್ಯ ಎಂದೇ ಹೆಸರುವಾಸಿಯಾಗಿದ್ದ ವೆಂಕಟೇಶ್ವರ್
Follow us
preethi shettigar
|

Updated on: May 05, 2021 | 3:03 PM

ಬಳ್ಳಾರಿ: ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಯಾರಿಗೆ ಗೊತ್ತಿಲ್ಲ ಹೇಳಿ. ತಮ್ಮ ಖಡಕ್ ಡೈಲಾಗ್​ಗಳಿಂದಲೇ ತೆಲುಗು ಚಿತ್ರರಂಗರದಲ್ಲಿ ಸದ್ದು ಮಾಡಿದವರು. ಅಪಾರ ಪ್ರಮಾಣದ ಅಭಿಮಾನಿಗಳನ್ನ ಹೊಂದಿರುವ ನಟ ಬಾಲಕೃಷ್ಣಗೆ ಗಣಿನಾಡು ಬಳ್ಳಾರಿಯಲ್ಲೂ ಅಭಿಮಾನಿಗಳಿದ್ದಾರೆ. ಅದರಲ್ಲೂ ಬಾಲಕೃಷ್ಣರಂತೆಯೇ ವೇಷಭೂಷಣಗಳೊಂದಿಗೆ ಅವರನ್ನೇ ಹೋಲುವ ಅಪ್ಪಟ ಅಭಿಮಾನಿಯೊಬ್ಬರು ಇದ್ದು, ಅವರನ್ನು ಬಳ್ಳಾರಿ ಬಾಲಯ್ಯ ಎಂದೇ ಕರೆಯಲಾಗುತ್ತಿತ್ತು. ಸದ್ಯ ಬಳ್ಳಾರಿ ಬಾಲಯ್ಯ ಎಂದೇ ಹೆಸರುವಾಸಿಯಾಗಿದ್ದ ವೆಂಕಟೇಶ್ವರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೊವಿಡ್ ಸೋಂಕಿಗೆ ಒಳಗಾಗಿದ್ದ ವೆಂಕಟೇಶ್ವರ್ ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ‌ ನಿನ್ನೆ ಮೃತಪಟ್ಟಿದ್ದಾರೆ. ಬಳ್ಳಾರಿಯ ಮಿಲ್ಲರ್ ಪೇಟೆ ನಿವಾಸಿಯಾಗಿದ್ದ ವೆಂಟಕೇಶ್ವರ್ ಅವರಿಗೆ ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರನಿದ್ದಾರೆ.

ಬಾಲಕೃಷ್ಣ ಅವರ ಯಾವುದೇ ಚಿತ್ರ ಬಿಡುಗಡೆಯಾಗಲೀ ಮೊದಲ ಶೋನಲ್ಲಿ ಬಳ್ಳಾರಿ ಬಾಲಯ್ಯ ಇರುತ್ತಿದ್ದರು. ಸಿನಿಮಾದಲ್ಲಿ ಬಾಲಕೃಷ್ಣ ಧರಿಸಿರುವ ವೇಷ ಭೂಷಣಗಳ ಮಾದರಿಯಲ್ಲಿಯೇ ವೆಂಕಟೇಶ್ವರ್ ಉಡುಪು ಧರಿಸಿ ಎಲ್ಲರ ಗಮನ ಸೆಳೆಯುತ್ತಿದ್ದರು.

ವೆಂಕಟೇಶ್ವರ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಯ ಸಾವಿಗೆ ನಟ ಬಾಲಕೃಷ್ಣ ಕಂಬನಿ ಮಿಡಿದಿದ್ದಾರೆ. ಅಷ್ಟೇ ಅಲ್ಲದೇ ವೆಂಕಟೇಶ್ವರ್ ಪುತ್ರ ಹಾಗೂ ಪತ್ನಿಯೊಂದಿಗೆ ದೂರವಾಣಿ ಮುಖಾಂತರ ಮಾತನಾಡಿರುವ ಬಾಲಕೃಷ್ಣ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ:

2 ಹನಿ ಲಿಂಬೆ ರಸ ಮೂಗಿನಲ್ಲಿ ಹಾಕಿದರೆ ಕೊರೊನಾ ನಿವಾರಣೆ?- ಫ್ಯಾಕ್ಟ್​ಚೆಕ್​ನಲ್ಲಿ ಬಯಲಾಯ್ತು ಸತ್ಯ.. ದಯವಿಟ್ಟು ಇಂಥದ್ದು ಮಾಡ್ಬೇಡಿ ಎಂದ ವೈದ್ಯರು

ಹಸೆಮಣೆ ಏರಬೇಕಿದ್ದ ವರ ಕೊರೊನಾಗೆ ಬಲಿ; ಬೆಂಗಳೂರಿನಲ್ಲಿ 28 ವರ್ಷದ ಯುವಕನ ಸಾವು

VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ