
ಬೆಂಗಳೂರು, ನವೆಂಬರ್ 5: ಕರ್ನಾಟಕ ಜನತೆಗೆ ಕೆಎಂಎಫ್ (KMF) ಮತ್ತೆ ದರ ಏರಿಕೆಯ ಶಾಕ್ ನೀಡಿದೆ. ನಂದಿನಿ ತುಪ್ಪದ (Nandini Ghee) ದರ ಪ್ರತಿ ಲೀಟರ್ಗೆ 90 ರೂಪಾಯಿ ಏರಿಕೆ ಮಾಡಿದೆ. ಇತ್ತೀಚಿಗಷ್ಟೇ ಜಿಎಸ್‌ಟಿ ದರ ಇಳಿಕೆಯಾದ ನಂತರ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ್ದ ಕೆಎಂಎಫ್ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ (Nandini Ghee Price) ಲೀಟರ್ಗೆ 40 ರೂ. ಇಳಿಕೆ ಮಾಡಿತ್ತು. ಆದರೆ, ಇದೀಗ ತುಪ್ಪಕ್ಕೆ ಬೇಡಿಕೆ ಹೆಚ್ಚಾದ ಬೆನ್ನಲ್ಲೇ ದಿಢೀರ್ ಆಗಿ ದರ ಏರಿಕೆ ಮಾಡಿದೆ.
ಇತ್ತೀಚಿಗಷ್ಟೇ ಜಿಎಸ್‌ಟಿ ದರ ಇಳಿಕೆಯಾದ ನಂತರ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ್ದ ಕೆಎಂಎಫ್ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ ಲೀಟರ್ಗೆ 40 ರೂ. ಇಳಿಕೆ ಮಾಡಿತ್ತು. ಆದರೆ, ಇದೀಗ ತುಪ್ಪಕ್ಕೆ ಬೇಡಿಕೆ ಹೆಚ್ಚಾದ ಬೆನ್ನಲ್ಲೇ ದಿಢೀರ್ ಆಗಿ ದರ ಏರಿಕೆ ಮಾಡಿದೆ.
ಒಂದು ಲೀಟರ್ ನಂದಿನಿ ತುಪ್ಪಕ್ಕೆ ಈಗ 700 ರೂಪಾಯಿ ದರ ನಿಗದಿ ಮಾಡಲಾಗಿದೆ. ಈ ಮೊದಲು ಮೊದಲು 610 ರೂಗೆ ಒಂದು ಲೀಟರ್ ತುಪ್ಪ ಮಾರಾಟ ಮಾಡಲಾಗುತ್ತಿತ್ತು. ಜಿಎಸ್‌ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ತಿಳಿಸಿದೆ.
ನಂದಿನಿ ತುಪ್ಪದ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗುತ್ತಿದೆ ಎಂದು ಕೆಎಂಎಫ್ ತಿಳಿಸಿದೆ.
2017 ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಲಾಗಿತ್ತು. ಆ ನಂತರದಲ್ಲಿ 2022 ರಲ್ಲಿ ಜಿಎಸ್‌ಟಿ ಪ್ರಮಾಣವನ್ನು ಶೇಕಡಾ 22ಕ್ಕೆ ಏರಿಕೆ ಮಾಡಲಾಗಿತ್ತು. ಆದರೆ ಸೆಪ್ಟೆಂಬರ್ನಲ್ಲಿ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ 12ರಿಂದ 5ಕ್ಕೆ ಇಳಿಕೆ ಮಾಡಿದ್ದು, ಸೆಪ್ಟೆಂಬರ್ 22ರಿಂದ ಜಾರಿಗೆ ಬಂದಿದೆ. ಈ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿತ್ತು. ಆ ಬಳಿಕ ರಾಜ್ಯದಲ್ಲಿ ಹಾಲಿನ ಉತ್ಪನ್ನಗಳ ಬೆಲೆ ಇಳಿಕೆ ಮಾಡಲಾಗಿತ್ತು. ಆದರೆ, ಇದೀಗ ಮತ್ತೆ ತುಪ್ಪದ ದರ ಏರಿಕೆಯಾಗಿದೆ.
ಇದನ್ನೂ ಓದಿ: ಕರ್ನಾಟಕದ ಜನರಿಗೆ ಕೆಎಂಎಫ್ನಿಂದ ಗುಡ್ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ
Published On - 1:45 pm, Wed, 5 November 25