AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ, 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಟ್ಟ ಕಾಂಗ್ರೆಸ್: ಬಿಜೆಪಿ ಆಕ್ರೋಶ

ಕೇರಳದಲ್ಲಿ ನಂದಿನಿ ಮಾರುಕಟ್ಟೆ ವಿಸ್ತರಣೆ ಹಿಂಪಡೆಯಲಾಗಿದೆ. ಈ ನಡುವೆ ತಿರುಪತಿ ಲಡ್ಡು ತಯಾರಿಗೆ ಹೋಗುತ್ತಿದ್ದ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ.

ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ, 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಟ್ಟ ಕಾಂಗ್ರೆಸ್: ಬಿಜೆಪಿ ಆಕ್ರೋಶ
ತಿರುಪತಿ ಲಡ್ಡು ತಯಾರಿಕೆಗೆ ಬಳಸುತ್ತಿದ್ದ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಳಿಸಿದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
TV9 Web
| Edited By: |

Updated on:Jul 31, 2023 | 4:30 PM

Share

ಬೆಂಗಳೂರು, ಜುಲೈ 31: ಕೇರಳದಲ್ಲಿ ನಂದಿನಿ ಮಾರುಕಟ್ಟೆ ವಿಸ್ತರಣೆಗೆ ವಾಪಸ್ ಬೆನ್ನಲ್ಲೇ ತಿರುಪತಿ ಲಡ್ಡು (Tirupati Laddu) ತಯಾರಿಕೆಗೆ ಬಳಸುತ್ತಿದ್ದ ನಂದಿನಿ ತುಪ್ಪದ (Nandini Ghee) ಪೂರೈಕೆಯನ್ನು ಕರ್ನಾಟಕ ಸರ್ಕಾರವೇ ಸ್ಥಗಿತಗೊಳಿಸಿದೆ. ಈ ಬಗ್ಗೆ ಟಿವಿ9 ಮಾಡಿದ ವರದಿಯನ್ನು ಟ್ವೀಟ್ ಮೂಲಕ ಹಂಚಿಕೊಂಡ ಬಿಜೆಪಿ (BJP) ರಾಜ್ಯ ಘಟಕ, ಕಾಂಗ್ರೆಸ್ (Congress) ವಿರುದ್ಧ ಆಕ್ರೋಶ ಹೊರಹಾಕಿದೆ.

“ಚುನಾವಣೆಗೂ ಮುನ್ನ ನಂದಿನಿಯನ್ನು ದುರುಪಯೋಗ ಪಡಿಸಿಕೊಂಡ ಕಾಂಗ್ರೆಸ್ ಇಂದು ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದೆ. ನಂದಿನಿಗೆ ರಾಜಕೀಯ ಸ್ಪರ್ಶ ನೀಡಿದ ಪರಿಣಾಮ ಕೇರಳ ಮಾರುಕಟ್ಟೆಯನ್ನು ನಂದಿನಿ ಈಗಾಗಲೇ ಕಳೆದುಕೊಂಡಿದೆ. ಇದೀಗ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದೆ” ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: Tirupati Laddu: ಇನ್ನುಮುಂದೆ ತಿರುಪತಿ ಲಡ್ಡುವಿನಲ್ಲಿ ಇರುವುದಿಲ್ಲ ನಂದಿನಿ ತುಪ್ಪದ ಘಮ

“ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರಕ್ಕೆ ಬಂದಾಗ ಲಾಭ-ನಷ್ಟದ ಲೆಕ್ಕ ಹೇಳುವ ಕಾಂಗ್ರೆಸ್‌ ಇದೇ ಸೂತ್ರವನ್ನು ಇತರ ಧರ್ಮಗಳಿಗೆ ಅನ್ವಯಿಸಲು ಒಪ್ಪುವುದಿಲ್ಲ. ಹಿಂದೂಗಳೆಡೆಗೆ ತಾತ್ಸಾರ ತಮ್ಮ ಜಾತ್ಯಾತೀತ ಸೂತ್ರ ಎಂಬುದನ್ನು ಸಿದ್ದರಾಮಯ್ಯ ಅವರು ಈಗ ಮತ್ತೆ ರುಜುವಾತು ಮಾಡಿದ್ದಾರೆ” ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

ಕೆಎಂಎಫ್ ರಿಯಾಯಿತಿ ದರದಲ್ಲಿ ನಂದಿನಿ ತುಪ್ಪ ನೀಡುವ ಟೆಂಡರ್​ ಅನ್ನು ಕೈಬಿಟ್ಟಿದೆ, ಕಡಿಮೆ ಬೆಲೆಗೆ ತುಪ್ಪ ಕೊಡಲು ಸಾಧ್ಯವಿಲ್ಲ. ಹೀಗಾಗಿ ಲಡ್ಡು ತಯಾರಿಕೆಗಾಗಿ ಸರಬರಾಜು ಆಗುತ್ತಿದ್ದ ತುಪ್ಪವನ್ನು ಇನ್ನು ಮುಂದೆ ಕಳುಹಿಸಲಾಗುವುದಿಲ್ಲ ಎಂದು ಕೆಎಂಎಫ್​ ಅಧ್ಯಕ್ಷ ಭೀಮನಾಯ್ಕ್ ಹೇಳಿದ್ದರು. ಈ ಬಗ್ಗೆ ಟಿವಿ9ಗೆ ಸ್ಪಷ್ಟನೆ ನೀಡಿದ ಭೀಮನಾಯ್ಕ್, ದರ ವಿಚಾರದಲ್ಲಿ ತಿರುಪತಿಗೆ ತುಪ್ಪ ಪೂರೈಕೆ ಮಾಡಲು ಆಗಿಲ್ಲ. ಅವರ ದರಕ್ಕೆ ನಂದಿನಿ ತುಪ್ಪ ಪೂರೈಕೆ ಮಾಡಲು ಆಗಲ್ಲ ಎಂದಿದ್ದೆವು. 2022ರಿಂದ ನಾವು ತಿರುಪತಿಗೆ ನಂದಿನಿ ತುಪ್ಪ ಪೂರೈಸುತ್ತಿಲ್ಲ. ನಾವು ಕೇಳಿದ ದರಕ್ಕೆ ಒಪ್ಪಿದre ನಂದಿನಿ ತುಪ್ಪ ಪೂರೈಕೆ ಮಾಡುತ್ತೇವೆ ಎಂದರು.

ಬಿಜೆಪಿ ಸರ್ಕಾರ ಇದ್ದಾಗಲೇ ನಂದಿನಿ ತುಪ್ಪ ಪೂರೈಕೆ ಸ್ಥಗಿತ ಆಗಿದೆ. ಕೆಎಂಎಫ್​ ವಿಚಾರವಾಗಿ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ಕೆಎಂಎಫ್​ ಕರ್ನಾಟಕ ಸಂಸ್ಥೆ, ಅಮುಲ್​ಗೆ KMF​ ವಿಲೀನ ಮಾಡಲ್ಲ ಎಂದು ಸ್ಪಷ್ಟನೆ ನೀಡಿದರು.

ಕೆಎಂಎಫ್ ಎಂಡಿ ಹೇಳುವುದೇನು?

ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ತಡೆ ವಿಚಾರವಾಗಿ ಟಿವಿ9 ಜೊತೆ ಮಾತನಾಡಿದ ಕೆಎಂಎಫ್ ಎಂಡಿ ಜಗದೀಶ್, ಒಂದೂವರೆ ವರ್ಷದ ಹಿಂದೆಯೇ ನಂದಿನಿ ತುಪ್ಪ ಪೂರೈಕೆ ಸ್ಥಗಿತವಾಗಿದೆ. 2021-22ರಲ್ಲಿ 345 ಮೆಟ್ರಿಕ್ ಟನ್ ತುಪ್ಪ ಪೂರೈಕೆ ಮಾಡಿದ್ದೇವೆ. ಟೆಂಡರ್ ಮೂಲಕ ಭಾಗವಹಿಸಿದರೆ ನಮ್ಮ ರೈತರಿಗೆ ನಷ್ಟವಾಗುತ್ತದೆ. ಕಳೆದ ಬಾರಿ ನಾವು ಬಿಡ್ಡಿಂಗ್​ನಲ್ಲಿ L3 ಇದ್ದರೂ ಖರೀದಿಸಿದ್ದಾರೆ. ಕೆಎಂಎಫ್​ನಿಂದಲೇ ನಂದಿನಿ ತುಪ್ಪ ಖರೀದಿಸಿದ್ದಾರೆ. ಈಗಲೂ ನಮ್ಮ ಬೆಲೆಗೆ ಖರೀದಿಸಲು ಸಿದ್ಧರಿದ್ದರೆ ಪೂರೈಕೆ ಮಾಡುತ್ತೇವೆ. ಯಾವುದೇ ಗೊಂದಲವಿಲ್ಲ, ಈಗ ನಿಲ್ಲಿಸಿದ್ದಾರೆ ಅನ್ನೋದು ಸುಳ್ಳು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Mon, 31 July 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?