AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಬಳಿಕ ಜನರ ಕೈ ಸುಡಲಿದೆ ನಂದಿನಿ ಹಾಲಿನ ದರ: 5 ರೂ. ಏರಿಕೆ ಸಾಧ್ಯತೆ

Nandini Milk Price Hike: ಸಂಕ್ರಾಂತಿ ಹಬ್ಬದ ನಂತರ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಂದಿನಿ ಹಾಲಿನ ದರವನ್ನು ಲೀಟರ್‌ಗೆ 5 ರೂಪಾಯಿ ಹೆಚ್ಚಿಸುವ ಸಾಧ್ಯತೆಯಿದೆ. ಕೆಎಂಎಫ್ ಅಧ್ಯಕ್ಷರು ಈ ಬಗ್ಗೆ ಸೂಚನೆ ನೀಡಿದ್ದಾರೆ. ಆದರೆ, ಈ ಏರಿಕೆಯಿಂದ ಜನರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಲಿನ ದರ ಏರಿಕೆಗೆ ಸೂಕ್ತ ಮಾನದಂಡಗಳ ಅಗತ್ಯವಿದೆ ಎಂದು ಜನರು ಒತ್ತಾಯಿಸುತ್ತಿದ್ದಾರೆ.

ಸಂಕ್ರಾಂತಿ ಬಳಿಕ ಜನರ ಕೈ ಸುಡಲಿದೆ ನಂದಿನಿ ಹಾಲಿನ ದರ: 5 ರೂ. ಏರಿಕೆ ಸಾಧ್ಯತೆ
ನಂದಿನಿ ಹಾಲು
Vinayak Hanamant Gurav
| Edited By: |

Updated on:Jan 02, 2025 | 4:20 PM

Share

ಬೆಂಗಳೂರು, ಡಿಸೆಂಬರ್​ 27: ಸಂಕ್ರಾಂತಿ ಹಬ್ಬದ ಬಳಿಕ ಕರ್ನಾಟಕ ಹಾಲು ಒಕ್ಕೂಟ (KMF) ನಂದಿನಿ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಪ್ರತಿ ಲೀಟರ್​ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ (Bima Nayak) ಮಾಹಿತಿ ನೀಡಿದರು.

ಬೆಂಗಳೂರಿನ ಡೈರಿ ಸರ್ಕಲ್ ಬಳಿಯ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಟಿವಿ9 ಪ್ರತಿನಿಧಿ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಪರಿಶೀಲಿಸುತ್ತೇವೆ. ದರ ಏರಿಕೆ ದುಡ್ಡು ರೈತರ ಕೈ ಸೇರುತ್ತೆ ಎಂದರು.

ಸರ್ಕಾರ ಈ ಹಿಂದೆ ಪ್ರತಿ ಲೀಟರ್​ ಪ್ಯಾಕೇಟ್​ನಲ್ಲಿ 50 ಎಂಎಲ್ ಹಾಲನ್ನು ಹೆಚ್ಚಳ ಮಾಡಿ 2 ರೂಪಾಯಿ ದರ ಏರಿಕೆ ಮಾಡಿತ್ತು. ಇದರಿಂದ ಗ್ರಾಹಕರ ಕೆಂಗಣ್ಣಿಗೆ ಗುರಿಯಾದ ಸರ್ಕಾರ, ಇದನ್ನು ವಾಪಸ್​ ಪಡೆಯಲು ಮುಂದಾಗಿದೆ.

ಪ್ರತಿ ಲೀಟರ್​ಗೆ 5 ರೂ. ಹೆಚ್ಚಳ ಮಾಡಲು ಮುಂದಾಗಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದು, ದಿಢೀರ್ ಬೆಲೆ ಏರಿಕೆ ಮಾಡುವುದು ಸರಿಯಲ್ಲ.‌ ಹಾಲಿನ ದರ ಹೆಚ್ಚಳಕ್ಕೆ ಯಾವುದೆ ಮಾನದಂಡ ಇಲ್ಲ. ಈ ಬಗ್ಗೆ ತಜ್ಞರ ಸಲಹೆ ಪಡೆದು ಬಳಿಕ ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹಾಲು, ಮೊಸರಿನಂತೆ ಮಾರುಕಟ್ಟೆಗೆ ನಂದಿನಿ ಇಡ್ಲಿ, ದೋಸೆ ಹಿಟ್ಟು ಲಗ್ಗೆ, ಬೆಲೆ ಎಷ್ಟು?

ಸರ್ಕಾರ ಜನರಿಗೆ ಅನಕೂಲವಾಗಲಿ ಅಂತ ಗ್ಯಾರೆಂಟಿ ಯೋಜನೆ ಜಾರಿ ಮಾಡಿದೆ. ಆದರೆ, ಇದೀಗ ಹಾಲಿನ ದರ ಏರಿಕೆ ಮೂಲಕ ಜನರಿಗೆ ಹೊರೆ ಮಾಡುತ್ತಿರುವುದು ಸರಿಯಲ್ಲ. ಹೀಗಾಗಿ, ಹಾಲಿನ ದರ ಏರಿಕೆ ಬೇಡ ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ಎಷ್ಟು ಏರಿಕೆ?

ಕೆಎಂಎಫ್​​ ಈ ಹಿಂದೆ ಪ್ರತಿ ಲೀಟರ್​ನಲ್ಲಿ​ ಹೆಚ್ಚುವರಿಯಾಗಿ 50 ಎಂಎಲ್​​ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದರಿಂದ ಅರ್ಧ ಲೀಟರ್ ಹಾಲಿನ ಪ್ಯಾಕೆಟ್​ ದರ 22ರಿಂದ 24 ರೂ.ಗೆ ಏರಿಕೆಯಾಗಿತ್ತು. ಒಂದು ಲೀಟರ್​ ಹಾಲಿನ ದರ ಏರಿಕೆ 42 ರಿಂದ 44 ರೂ.ಗೆ ಏರಿಕೆಯಾಗಿತ್ತು. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಿರಲಿಲ್ಲ.

ನಂದಿನಿ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ

ನಂದಿನಿ ಇದೀಗ ಹೊಸ ಪ್ರಾಡಕ್ಟ್‌ ರೂಪದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇಷ್ಟು ದಿನಗಳ ಕಾಲ ನಂದಿನಿ ಪ್ರಾಡೆಕ್ಟ್​​ನ ತುಪ್ಪ, ಬೆಣ್ಣೆ, ಪೇಡಾ, ಮೈಸೂರು ಪಾಕ್, ಬ್ರೆಡ್‌, ಬನ್ ಸೇರಿದಂತೆ ವಿವಿಧ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಸಿಗುತ್ತಿದ್ದವು. ಇದೀಗ, ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಕೂಡ ಗ್ರಾಹಕರಿಗೆ ಸಿಗುತ್ತಿದೆ. ಗ್ರಾಹಕರಿಂದ ಸಾಕಷ್ಟು ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಬ್ರ್ಯಾಂಡ್‌ನ ದೋಸೆ ಹಾಗೂ ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:52 am, Fri, 27 December 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ