ನಂದಿನಿ ಹಾಲಿನ ಬೆಲೆ ಏರಿಕೆ ಪ್ರಯೋಜನ ರೈತರಿಗೆ ಸಿಗಲ್ಲ! ಹಾಲು ಉತ್ಪಾದಕರು ಹೇಳುವ ಲೆಕ್ಕಾಚಾರ ಇಲ್ಲಿದೆ

ನಂದಿನಿ ಹಾಲಿನ ದರ ಏರಿಕೆ ಮಾಡುವುದಾಗಿ ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿಯೇ ಘೋಷಣೆ ಮಾಡಿದ್ದರು. ದರ ಹೆಚ್ಚಳದ ಲಾಭ ರೈತರಿಗೆ ದೊರೆಯುವಂತೆ ಮಾಡುವುದಾಗಿಯೂ ಹೇಳಿದ್ದರು. ಆದರೆ, ಬೆಲೆ ಹೆಚ್ಚಳದ ಪ್ರಯೋಜನ ನಮಗೆ ದೊರೆಯುವುದಿಲ್ಲ ಎಂದು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕರು ಹೇಳಿದ್ದಾರೆ. ಇದಕ್ಕೆ ಅವರು ನೀಡಿರುವ ಕಾರಣ ಮತ್ತು ಲೆಕ್ಕಾಚಾರ ಇಲ್ಲಿದೆ.

ನಂದಿನಿ ಹಾಲಿನ ಬೆಲೆ ಏರಿಕೆ ಪ್ರಯೋಜನ ರೈತರಿಗೆ ಸಿಗಲ್ಲ! ಹಾಲು ಉತ್ಪಾದಕರು ಹೇಳುವ ಲೆಕ್ಕಾಚಾರ ಇಲ್ಲಿದೆ
ನಂದಿನಿ ಹಾಲು
Follow us
| Updated By: ಗಣಪತಿ ಶರ್ಮ

Updated on: Sep 17, 2024 | 9:32 AM

ಕೋಲಾರ, ಸೆಪ್ಟೆಂಬರ್ 17: ರಾಜ್ಯದಲ್ಲಿ ಹಾಲಿನ ದರ‌‌ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರಸ್ತಾಪ ಮಾಡಿದ ಬೆನ್ನಲ್ಲೇ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಗಳಾಗುತ್ತಿವೆ. ಸಚಿವರು, ಶಾಸಕರು ಬೆಲೆ ಏರಿಕೆ ಕುರಿತು ಸಮರ್ಥನೆ ಮಾಡಿಕೊಂಡರೆ, ಸಾಮಾನ್ಯ ಜನರು ಹಾಗೂ ರೈತರು ಸರ್ಕಾರವು ರೈತರ ಹೆಸರು ಹೇಳಿಕೊಂಡು ಬೆಲೆ ಏರಿಕೆ ಮಾಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳು ಹಾಲು ಉತ್ಪಾದನೆಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದಿವೆ. ಅವಿಭಜಿತ ಜಿಲ್ಲೆಗಳಲ್ಲಿ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಜನ ಹಾಲು ಉತ್ಪಾದಕರಿದ್ದಾರೆ. ಜೊತೆಗೆ ಕಳೆದ ವರ್ಷ ರಾಜ್ಯ ಸೇರಿದಂತೆ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳು ಬರಗಾಲಕ್ಕೆ ತುತ್ತಾಗಿವೆ. ಹೀಗಿರುವಾಗ, ರಾಜ್ಯದಲ್ಲಿ ರೈತರು ಹಾಗೂ ಹಾಲು ಉತ್ಪಾದಕರ ನೆರವಿಗೆ ನಿಲ್ಲಬೇಕಿದ್ದ ರಾಜ್ಯ ಸರ್ಕಾರ ರೈತ ವಿರೋಧಿ ದೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷ ನಾಯಕರು ಆರೋಪ ಮಾಡುತ್ತಿದ್ದಾರೆ.

2 ಬಾರಿ ಹಾಲು ಖರೀದಿ ದರ ಇಳಿಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ

ಕೋಲಾರ, ಚಿಕ್ಕಬಳ್ಳಾಪುರದಲ್ಲಿ 1800 ಹಾಲು ಉತ್ಪಾದಕರ ಸ್ವಸಹಾಯ ಸಂಘಗಳಿವೆ. ಜಿಲ್ಲೆಯಲ್ಲಿ ನಿತ್ಯ ಸುಮಾರು ಹತ್ತು ಲಕ್ಷ ಲೀಟರ್​ ಹಾಲು ಉತ್ಪಾದನೆಯಾಗುತ್ತಿದೆ. ಹಾಗಾಗಿ ಹೈನೋದ್ಯಮವನ್ನು ನಂಬಿ ಬದುಕುತ್ತಿರುವ ರೈತರ ಸಂಖ್ಯೆ ಹೆಚ್ಚಾಗಿಯೇ ಇದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿ, ಎರಡು ಬಾರಿ ರೈತರಿಂದ ಹಾಲಿನ ಖರೀದಿ ದರವನ್ನು ಇಳಿಕೆ ಮಾಡಿದೆ.

ಹಾಲಿನ ದರದಲ್ಲಿ ರೈತರಿಗೆ ಸಿಗುತ್ತಿರುವುದೆಷ್ಟು?

ಹಾಲಿನ ಖರೀದಿ ದರ ಇಳಿಕೆ ಮಾಡುವ ಮೊದಲು ರೈತರಿಗೆ ಲೀಟರ್​ ಹಾಲಿಗೆ 34 ರೂಪಾಯಿ ಸಿಗುತ್ತಿತ್ತು. ಆದರೆ ಹಾಲು ಖರೀದಿ ದರ ಎರಡು ಬಾರಿ ಇಳಿಕೆ ಮಾಡಿದ ನಂತರ ಈಗ ಲೀಟರ್ ಹಾಲಿಗೆ ರೈತರಿಗೆ ಸಿಗುತ್ತಿರುವುದು ಕೇವಲ 30 ರೂಪಾಯಿ 15 ಪೈಸೆ ಮಾತ್ರ. ಆದರೆ, ಹಾಲು ದರ ಏರಿಕೆ ಮಾಡಿ ಸರ್ಕಾರ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದು ಮಾತ್ರ 60 ರೂಪಾಯಿಗೆ! ಈಗ ಹಾಲಿನ ದರ 5 ರೂಪಾಯಿ ಏರಿಕೆ ಮಾಡಿ ಏರಿಕೆ ಮಾಡಿದ ದರವನ್ನು ನೇರವಾಗಿ ರೈತರಿಗೆ ಕೊಟ್ಟರೂ ರೈತರಿಗೆ ಲೀಟರ್ ಹಾಲಿಗೆ ಸಿಗುವುದು ಕೇವಲ 35 ರೂಪಾಯಿ. ಆದರೆ ಗ್ರಾಹಕರಿಗೆ ಮಾರಾಟ ಮಾಡುವುದು 65 ರೂ.ಗೆ. ಹಾಗಾಗಿ ಸರ್ಕಾರ ಒಂದು ಲೀಟರ್ ಹಾಲಿನ ಮೇಲೆ 30 ರೂ. ಲಾಭ ಪಡೆಯುತ್ತಿದೆ ಎಂಬುದು ಹಾಲು ಉತ್ಪಾದಕರ ಮಾತು.

ಪಶು ಆಹಾರ ಬೆಲೆ ಇಳಿಕೆಗೆ ಆಗ್ರಹ

ಪ್ರತಿಬಾರಿ ಹಾಲಿನ ಏರಿಕೆ ಮಾಡುತ್ತಿದ್ದಂತೆ ಪಶು ಆಹಾರ ಹಾಗೂ ಪೀಡ್ಸ್​ ಸೇರಿ ಎಲ್ಲಾ ಬೆಲೆಗಳು ಏರಿಕೆಯಾಗುತ್ತವೆ. ಅವರು ಮಾತ್ರ ಬೆಲೆ ಕಡಿಮೆ ಮಾಡುವುದೇ ಇಲ್ಲ. ಇದರಿಂದ ಹಾಲಿನ ದರ ಏರಿಕೆ ಮಾಡುವುದಕ್ಕಿಂತ ಹೆಚ್ಚಾಗಿ ಪಶುಆಹಾರದ ಬೆಲೆ ಇಳಿಕೆ ಮಾಡಿದರೆ ರೈತರಿಗೆ ಸಾಕಷ್ಟು ಅನುಕೂಲ ಆಗಲಿದೆ ಎಂಬ ಮಾತುಗಳು ಕೂಡಾ ರೈತರಿಂದ ಕೇಳಿ ಬರುತ್ತಿದೆ.

ಕಳೆದ ಒಂದು ವರ್ಷದಿಂದ ಮಳೆ ಇಲ್ಲದೆ ಬೆಳೆದ ಬೆಳೆಗಳೆಲ್ಲ ಕೈಕೊಟ್ಟಿವೆ. ರೈತರಿಗೆ ಮೇವಿನ ಕೊರತೆ ಕೂಡಾ ಕಾಡುತ್ತಿದೆ. ಹಾಲು ಉತ್ಪಾದಕರಿಗೆ ಕೋಟಿ ಕೋಟಿ ಪ್ರೋತ್ಸಾಹಧನ ಬಾಕಿ ಇದ್ದು ಅದು ಇನ್ನೂ ರೈತರಿಗೆ ಕೊಟ್ಟಿಲ್ಲ. ಅದರೂ ಸಹ ಸರ್ಕಾರ ಹಾಲಿನ ದರವನ್ನು ಏರಿಕೆ ಮಾಡಲು ಚಿಂತನೆ ಮಾಡುತ್ತಿದೆ ಎಂಬ ಆರೋಪಗಳ ಕೇಳಿ ಬಂದಿವೆ.

ಸಚಿವ ಬೈರತಿ ಸುರೇಶ್ ಹೇಳುವುದೇನು?

ಇನ್ನು ಬಗ್ಗೆ ಸಚಿವ ಬೈರತಿ ಸುರೇಶ್ ಹಾಗೂ ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ನಂಜೇಗೌಡ ಹೇಳುವುದೇ ಬೇರೆ. ನಮ್ಮ ಅಕ್ಕಪಕ್ಕದ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿಯೇ ಅತಿ ಕಡಿಮೆ‌ ದರದಲ್ಲಿ ಹಾಲು ಸಿಗುತ್ತಿದೆ. ಪಕ್ಕದ ರಾಜ್ಯಗಳಲ್ಲಿ ಈಗಾಗಲೇ‌ ಹಾಲಿನ ದರವನ್ನು ಏರಿಕೆ ಮಾಡಲಾಗಿದೆ. ಹಾಗಾಗಿಯೇ ರಾಜ್ಯದ ಮುಖ್ಯಮಂತ್ರಿಗಳು ಈ ಬಗ್ಗೆ ಅಧಿಕಾರಿಗಳ ಜೊತೆ‌ ಚರ್ಚೆ ಮಾಡಿ ಅಂತಿಮ‌ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂಬುದು ಇವರಾಡುವ ಮಾತು.

ಇದನ್ನೂ ಓದಿ: ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು: ವಿಡಿಯೋ ನೋಡಿ

ಒಟ್ಟಾರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾಲಿನ ದರ ಮಾತ್ರ ಏರಿಕೆಯಾಗುತ್ತಿದ್ದು, ರೈತರಿಗೆ ಇದರ ಲಾಭ ಸಿಗುತ್ತಿಲ್ಲ. ಈ ಬಾರಿಯಾದರೂ ಸರ್ಕಾರ ಏರಿಕೆ ಮಾಡುವ ಹಾಲಿನ ದರದಲ್ಲಿ ಹಾಲು ಉತ್ಪಾದಕ ರೈತರಿಗೆ ಒಂದಷ್ಟು ಲಾಭ ಸಿಗಬೇಕಿದೆ. ಇಲ್ಲದಿದ್ದರೆ ರೈತರ ಶಾಪಕ್ಕೆ ಸರ್ಕಾರ ಗುರಿಯಾಗುವುದರಲ್ಲಿ‌ ಯಾವುದೇ ಅನುಮಾನವಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!