Nandini Milk Price Hike: ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ: ಮಾಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ನಂದಿನಿ ಹಾಲಿನ ಬೆಲೆ ಹೆಚ್ಚಳ: ರಾಮನಗರದ ಮಾಗಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಹೇಳಿದ್ದಾರೆ. ಆ ಮೂಲಕ ನಂದಿನಿ ಹಾಲು ಗ್ರಾಹಕರಿಗೆ ಮತ್ತೆ ಶಾಕ್ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

Nandini Milk Price Hike: ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ: ಮಾಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ: ಮಾಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Sep 13, 2024 | 3:40 PM

ರಾಮನಗರ, ಸೆಪ್ಟೆಂಬರ್​​ 13: ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ (Nandini Milk Price) ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಆ ಮೂಲಕ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ.

ಜೆಡಿಎಸ್​ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀವೆಲ್ಲ ರೈತರ ಮಕ್ಕಳಿದ್ದಾರೆ, 3 ರೂಪಾಯಿ ಹೆಚ್ಚಳ ಮಾಡಿದರೆ ಅಥವಾ ಏನೇ ಹೆಚ್ಚು ಮಾಡಿದ್ರೂ ಲಬ್ಬೊ ಲಬ್ಬೋ ಅಂತಾ ಹೇಳುತ್ತಾರೆ. ನಾವು ರೈತರ ಮಕ್ಕಳು, ರೈತರು ಮಕ್ಕಳು ಎಂದು ಹೇಳುತ್ತಾರೆ. ಆದರೆ ರೈತರ ಮಕ್ಕಳಿಗೆ ನೀವೇನಾದ್ರೂ ಕೊಟ್ಟಿದ್ದೀರಾ? ಏನೂ ಮಾಡದೇ ನಾವು ರೈತರ ಮಕ್ಕಳು ಅಂತಾ ಹೇಳುತ್ತಾರೆ ಎಂದು
ಜೆಡಿಎಸ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: Nandini Milk Price: ಮದರ್ ಡೈರಿ ಹಾಲಿನ ದರವೂ ಹೆಚ್ಚಳ; ಏರಿಕೆಯಾಗುತ್ತಾ ನಂದಿನಿ ಹಾಲಿನ ಬೆಲೆ?

ನಾನು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕೆಂಪೇಗೌಡರ ಜಯಂತಿ ಆಚರಣೆ ಮಾಡಿದ್ದು ನಮ್ಮ ಸರ್ಕಾರ. ಬಹಳಷ್ಟು ಒಕ್ಕಲಿಗ ನಾಯಕರು ಅನಿಸಿಕೊಂಡವರು ಮಾಡಲಿಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಗೆ ಟಾಂಗ್​ ನೀಡಿದ್ದಾರೆ. ಹಿಂದೆ ಸಿಎಂ ಆಗಿದ್ದಾಗ ಕೆಂಪೇಗೌಡ ಜಯಂತಿ ಆಚರಣೆಗೆ ಸೂಚನೆ ನೀಡಲಾಗಿತ್ತು. ಮಾಗಡಿ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ಕೊಡುತ್ತೇವೆ. ಬಾಲಕೃಷ್ಣಗೆ ಸಚಿವರಾಗುವ ಅರ್ಹತೆ ಇದೆ, ಇದರಲ್ಲಿ ಎರಡು ಮಾತಿಲ್ಲ. ಆದ್ರೆ ಮುಖ್ಯಮಂತ್ರಿ ಸೇರಿ‌ 34‌ ಜನರಿಗೆ ಮಾತ್ರ ಅವಕಾಶ ಇದೆ ಎಂದಿದ್ದಾರೆ.

ಮಂತ್ರಿ ಆಗದಿದ್ದರೂ ಅಭಿವೃದ್ಧಿ ಕೆಲಸದಲ್ಲಿ ಮುಂಚೂಣಿಯಲ್ಲಿದ್ದಾರೆ. ಹೆಚ್​.ಸಿ.ಬಾಲಕೃಷ್ಣ ಎಲ್ಲಾ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಗ್ಯಾರಂಟಿಗಳಿಂದ ಅಭಿವೃದ್ಧಿ ಕೆಲಸಗಳಿಗೆ ದುಡ್ಡಿಲ್ಲ ಅಂತಾ ಹೇಳುತ್ತಾರೆ. ಹಾಗಾದರೆ 120 ಕೋಟಿ ರೂ. ಅಭಿವೃದ್ಧಿ ಕೆಲಸ ಹೇಗೆ ಬಂತು? ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಾಗಮಂಗಲ ಗಲಭೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್ ಹುನ್ನಾರ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಗಂಭೀರ ಆರೋಪ

ಬೆಂಗಳೂರು ಹೊರವಲಯದಲ್ಲಿ ಇರುವ ಊರು ಮಾಗಡಿ. ಬಹಳ ಪ್ರಮುಖವಾದ ಪಟ್ಟಣ. ಕೆಂಪೇಗೌಡರ ರಾಜಧಾನಿ ಅಂತ ಕರೆಯುತ್ತಾರೆ. ಕೆಂಪೇಗೌಡರು ಬೆಂಗಳೂರು ಪಟ್ಟಣವನ್ನು ಕಟ್ಟಿದವರು. ಅವರು ಕಟ್ಟಿದ ರಾಜಧಾನಿ ಮಾಗಡಿಯಲ್ಲಿ ಅಭಿವೃದ್ಧಿ ಆಗಬೇಕು ಅನ್ನೋದು ಅಭಿಮತ‌ ಇದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:52 pm, Fri, 13 September 24

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us