AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಹೆಸರು ಬದಲಿಸುವಂತೆ ಸಿಎಂ ಯಡಿಯೂರಪ್ಪಗೆ ನಂಜಾವಧೂತ ಸ್ವಾಮೀಜಿ ಮನವಿ

ಕೆಂಪೇಗೌಡ ಅಧ್ಯಯನ ಪೀಠ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ಕೆಂಪೇಗೌಡರು ನಾಡಿಗೆ ಅಭಿವೃದ್ಧಿಗೆ ಹಲವಾರು ಕೊಡುಗೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯಕ್ಕೆ ಅವರ ಕೊಡುಗೆ ಹಾಸುಹೊಕ್ಕಾಗಿದೆ. ಐದು ಶತಮಾನಗಳ ಹಿಂದೆ ಈ ನಗರ ನಿರ್ಮಾಣವಾಗಿತ್ತು. ಅಧ್ಯಯನ ಪೀಠದಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ನಮ್ಮ ಮೆಟ್ರೋ ಹೆಸರು ಬದಲಿಸುವಂತೆ ಸಿಎಂ ಯಡಿಯೂರಪ್ಪಗೆ ನಂಜಾವಧೂತ ಸ್ವಾಮೀಜಿ ಮನವಿ
ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Jun 27, 2021 | 3:53 PM

Share

ಬೆಂಗಳೂರು: ನಮ್ಮ ಮೆಟ್ರೋ ಹೆಸರು ಬದಲಿಸುವಂತೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ನಂಜಾವಧೂತ ಸ್ವಾಮೀಜಿ ಮನವಿ ಮಾಡಿದ್ದಾರೆ. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮನವಿ ಮಾಡಿದ ಸ್ವಾಮೀಜಿ, ನಮ್ಮ ಮೆಟ್ರೋ ಹೆಸರನ್ನು ನಮ್ಮ ಕೆಂಪೇಗೌಡ ಮೆಟ್ರೋ ಅಥವಾ ಕೆಂಪೇಗೌಡ ಮೆಟ್ರೋ ಎಂದು ಬದಲಿಸಿ ಎಂದಿದ್ದಾರೆ. ಅಲ್ಲದೆ ವಿಧಾನಸೌಧದಲ್ಲೂ ಒಂದು ಕೆಂಪೇಗೌಡ ಪ್ರತಿಮೆಯನ್ನು ಸ್ಥಾಪಿಸಿ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೂ ಅತ್ಯುತ್ತಮ ಅಧ್ಯಕ್ಷರನ್ನು ನೇಮಕ ಮಾಡಿ ಎಂದು ಶ್ರೀಗಳು ಮನವಿ ಮಾಡಿದ್ದಾರೆ.

ಆಡಳಿತ ಚುಕ್ಕಾಣಿ ಹಿಡಿದವರಿಗೆ ಬಿಎಸ್​ವೈ ಮಾದರಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಡಳಿತ ಚುಕ್ಕಾಣಿ ಹಿಡಿದವರು ಹೇಗಿರಬೇಕು ಎಂಬುದಕ್ಕೆ ಮಾದರಿಯಾಗಿದ್ದಾರೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಯಡಿಯೂರಪ್ಪ ಜೊತೆಗೆ ಸಾಕಷ್ಟು ಮಂದಿ ಸಮಾಜದ ಉಳಿವಿಗೆ, ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕೆಂಪೇಗೌಡ ಅಧ್ಯಯನ ಪೀಠ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ಕೆಂಪೇಗೌಡರು ನಾಡಿಗೆ ಅಭಿವೃದ್ಧಿಗೆ ಹಲವಾರು ಕೊಡುಗೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯಕ್ಕೆ ಅವರ ಕೊಡುಗೆ ಹಾಸುಹೊಕ್ಕಾಗಿದೆ. ಐದು ಶತಮಾನಗಳ ಹಿಂದೆ ಈ ನಗರ ನಿರ್ಮಾಣವಾಗಿತ್ತು. ಅಧ್ಯಯನ ಪೀಠದಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. 108 ಅಡಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಮೂಲ ಸೌಕರ್ಯ ಅಭಿವೃದ್ಧಿಗೆ ಯಡಿಯೂರಪ್ಪ ಸರ್ಕಾರದಿಂದ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡಲಾಗುತ್ತದೆ ಎಂದು ಸ್ವಾಮೀಜಿ ಹೇಳಿದರು.

ಬಿಎಸ್‌ವೈರನ್ನು ಹೊಗಳಿದ ಸಿದ್ದಗಂಗಾ ಶ್ರೀ ಒಳ್ಳೆಯದು ಎಲ್ಲೇ ಬಂದರೂ ಸಿಎಂ ಅದನ್ನು ಸ್ವೀಕರಿಸುತ್ತಾರೆ. ರಾಜ್ಯದ ಎಲ್ಲಾ ಜಾತಿ ಜನಾಂಗಕ್ಕೆ ಒಲವನ್ನು ತೋರಿ, ಅವರನ್ನ ಮೇಲೆತ್ತುವ ಕೆಲಸ ಯಡಿಯೂರಪ್ಪ ಮಾಡುತ್ತಿದ್ದಾರೆ. ಇಂಥ ದೊಡ್ಡ ಸಾಹಸ ಯಡಿಯೂರಪ್ಪನವರು ಮಾಡುತ್ತಿದ್ದಾರೆ. ಯಡಿಯೂರಪ್ಪನವರದ್ದು ಜಗ್ಗದ, ಬಹು ದೊಡ್ಡ ವ್ಯಕ್ತಿತ್ವ. ಸಿಎಂರದ್ದು 20ರ ವಯಸ್ಸಿನವರಂತೆ ಕೆಲಸ ಮಾಡುವ ಮನಸ್ಸು ಎಂದು ಸಿಎಂ ಬಿಎಸ್‌ವೈ ಬಗ್ಗೆ ತುಮಕೂರಿನ ಸಿದ್ದಗಂಗಾ ಶ್ರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ; ಟ್ವಿಟರ್​ನಲ್ಲಿ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ

ಕಾಸರಗೋಡಿನ ಕೆಲ ಊರುಗಳ ಹೆಸರು ಮಲಯಾಳಂಗೆ.. ಪ್ರತಾಪ್ ಸಿಂಹ, ವಾಟಾಳ್ ನಾಗರಾಜ್ ಆಕ್ರೋಶ

(Nanjavadutha swamiji appealed to CM Yeddiyurappa to change the name of Namma Metro)

Published On - 2:46 pm, Sun, 27 June 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ