Rishi Sunak: ಹೆಮ್ಮೆಯಾಗುತ್ತಿದೆ; ಅಳಿಯ ರಿಷಿ ಸುನಕ್​ರನ್ನು ಅಭಿನಂದಿಸಿದ ನಾರಾಯಣ ಮೂರ್ತಿ

ಬ್ರಿಟನ್​ನ ನೂತನ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ರಿಷಿ ಸುನಕ್​ರನ್ನು ಅವರ ಮಾವ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅಭಿನಂದಿಸಿದ್ದಾರೆ.

Rishi Sunak: ಹೆಮ್ಮೆಯಾಗುತ್ತಿದೆ; ಅಳಿಯ ರಿಷಿ ಸುನಕ್​ರನ್ನು ಅಭಿನಂದಿಸಿದ ನಾರಾಯಣ ಮೂರ್ತಿ
ಇನ್ಫೋಸಿಸ್‌ನ ಸಹ ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ
Follow us
TV9 Web
| Updated By: Ganapathi Sharma

Updated on: Oct 25, 2022 | 11:40 AM

ಬೆಂಗಳೂರು: ಬ್ರಿಟನ್​ನ ನೂತನ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ರಿಷಿ ಸುನಕ್​ರನ್ನು (Rishi Sunak) ಅವರ ಮಾವ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ಅಭಿನಂದಿಸಿದ್ದಾರೆ. ತಮ್ಮ ಅಳಿಯ ಉನ್ನತ ಹುದ್ದೆಗೇರಿರುವುದು ಹೆಮ್ಮೆ ತಂದಿದೆ ಎಂದು ಅವರು ಹೇಳಿದ್ದಾರೆ.

‘ಅಭಿನಂದನೆಗಳು ರಿಷಿ. ಆತನ ಬಗ್ಗೆ ನಮಗೆ ಹೆಮ್ಮೆ ಇದೆ. ಆತನಿಗೆ ಯಶಸ್ಸನ್ನು ಹಾರೈಸುತ್ತೇವೆ. ಆತ ಬ್ರಿಟನ್​ನ ಜನತೆಗೆ ಅತ್ಯುತ್ತಮವಾದ ಸೇವೆ ನೀಡುವ ಬಗ್ಗೆ ನಮಗೆ ವಿಶ್ವಾಸವಿದೆ’ ಎಂದು ನಾರಾಯಣ ಮೂರ್ತಿ ಹೇಳಿದ್ದಾರೆ. ರಿಷಿ ಸುನಕ್ ಪ್ರಧಾನಿ ಹುದ್ದೆಗೆ ಆಯ್ಕೆಯಾದ ಬಳಿಕ ನಾರಾಯಣ ಮೂರ್ತಿ ನೀಡಿದ ಮೊದಲ ಪ್ರತಿಕ್ರಿಯೆ ಇದಾಗಿತ್ತು ಎಂದು ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಬ್ರಿಟನ್ ಪ್ರಧಾನಿಯಾಗಿ ಅಳಿಯ ರಿಷಿ ಸುನಕ್ ಆಯ್ಕೆ: ಬೆಂಗಳೂರಿನ ಸುಧಾಮೂರ್ತಿ ನಿವಾಸದಲ್ಲಿ ಸಂಭ್ರಮಾಚರಣೆ

ಬ್ರಿಟನ್ ಅರ್ಥವ್ಯವಸ್ಥೆ ಅಧಃಪತನ ಹಿನ್ನೆಲೆಯಲ್ಲಿ ಕನ್ಸರ್ವೇಟಿವ್ ಪಕ್ಷದ ಬೋರಿಸ್ ಜಾನ್ಸನ್ ಪ್ರಧಾನಿ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರು. ಬಳಿಕ ಪಕ್ಷದಿಂದ ರಿಷಿ ಸುನಕ್ ಮೊದಲ ಬಾರಿಗೆ ಪ್ರಧಾನಿ ಹುದ್ದೆಗೆ ಸ್ಪರ್ಧಿಸಿದ್ದರು. ಆದರೆ, ತಮ್ಮದೇ ಪಕ್ಷದ ಲಿಜ್ ಟ್ರಸ್ ಎದುರು ಸೋಲನುಭವಿಸಿದ್ದರು. ಬಳಿಕ ದೇಶದ ಅರ್ಥವ್ಯವಸ್ಥೆ ಸುಧಾರಣೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾದ ಕಾರಣಕ್ಕೆ ನೈತಿಕ ಹೊಣೆ ಹೊತ್ತು ಲಿಜ್ ಟ್ರಸ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಿಷಿ ಸುನಕ್ ಅವರನ್ನು ಪ್ರಧಾನಿ ಹುದ್ದೆಗೆ ಪಕ್ಷ ಆಯ್ಕೆ ಮಾಡಿದೆ.

1980ರ ಮೇ 12ರಂದು ಬ್ರಿಟನ್​ನಲ್ಲಿ ರಿಷಿ ಸುನಕ್ ಜನಿಸಿದ್ದರು. ಯಶ್ವೀರ್-ಉಷಾ ದಂಪತಿ ಪುತ್ರನಾಗಿರೋ ರಿಷಿ ಸುನಕ್ ಅಜ್ಜ-ಅಜ್ಜಿ ಇಬ್ಬರೂ ಪಂಜಾಬ್ ಮೂಲದವರಾಗಿದ್ದಾರೆ. 2009ರಲ್ಲಿ ನಾರಾಯಣಮೂರ್ತಿ-ಸುಧಾಮೂರ್ತಿ ದಂಪತಿ ಪುತ್ರಿ ಅಕ್ಷತಾ ಮೂರ್ತಿ ಜೊತೆಗೆ ರಿಷಿ ಸುನಕ್ ವಿವಾಹವಾಗಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು