ರಾಜ್ಯದಲ್ಲಿ ಇಂದು 4 ಕಡೆ ಪ್ರಧಾನಿ ಮೋದಿ ರ‍್ಯಾಲಿ

ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗಿದೆ. ರಾಜ್ಯದ ಮೊದಲ ಹಂತದ ಚುನಾವಣೆ ಮುಗಿದಿದ್ದು, ಇನ್ನು ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏ.28) ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಅಬ್ಬರ ಪ್ರಚಾರ ಮಾಡಲಿದ್ದಾರೆ.

ರಾಜ್ಯದಲ್ಲಿ ಇಂದು 4 ಕಡೆ ಪ್ರಧಾನಿ ಮೋದಿ ರ‍್ಯಾಲಿ
ಬೆಳಗಾವಿಗೆ ಆಗಮಿಸಿದ ನರೇಂದ್ರ ಮೋದಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Apr 28, 2024 | 6:28 AM

ಬೆಳಗಾವಿ, ಏ.27: ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ (Lok Sabha Election) ಕಾವು ಮತ್ತಷ್ಟು ಹೆಚ್ಚಾಗಿದ್ದು, ನಿನ್ನೆಯಷ್ಟೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ ಶನಿವಾರ (ಏ.27) ರಾತ್ರಿಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಳಗಾವಿಗೆ ಆಗಮಿಸಿ, ಕಾಕತಿ ಬಳಿಯ ಹೋಟೆಲ್​ನಲ್ಲಿ ತಂಗಿದ್ದಾರೆ. ಪ್ರಧಾನಿ ಮೋದಿ ಅವರು ಇಂದು (ಏ.28) ಬೆಳಗಾವಿ, ದಾವಣಗೆರೆ, ಹೊಸಪೇಟೆ, ಶಿರಸಿಯಲ್ಲಿ ನಡೆಯುವ  ನಾಲ್ಕು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10.55ಕ್ಕೆ ಹೋಟೆಲ್​ನಿಂದ ಹೊರಡುವ ಪ್ರಧಾನಿ ಮೋದಿ, 11 ಗಂಟೆಗೆ ಬೆಳಗಾವಿಯ ಮಾಲಿನಿ ಸಿಟಿ ಮೈದಾನದ ನಡಯುವೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. 11.55ಕ್ಕೆ ಬೆಳಗಾವಿಯಿಂದ  ಹೊರಟು 12.55ಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತಲುಪಲಿದ್ದಾರೆ.

ಇದನ್ನೂ ಓದಿ:Belgaum Lok Sabha: ಪ್ರಧಾನಿ ಮೋದಿ ಸ್ವಾಗತಕ್ಕೆ ಬೆಳಗಾವಿ ಕಾರ್ಯಕರ್ತರಿಗೆ ಅವಕಾಶ: ವಿಡಿಯೋ

ಬಳಿಕ ಶಿರಸಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 2.50ಕ್ಕೆ ದಾವಣಗೆರೆಗೆ ಆಗಮಿಸಲಿದ್ದು, ದಾವಣಗೆರೆ ಸಮಾವೇಶದಲ್ಲಿ ಭಾಗವಹಿಸಿ, ನಂತರ ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. ಅಲ್ಲಿ 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗವಹಿಸಿ ರಾತ್ರಿ ಹೊಸಪೇಟೆಯಲ್ಲಿ ಮೋದಿ ವಾಸ್ತವ್ಯ ಮಾಡಲಿದ್ದಾರೆ.

ಏ.29 ರ ಪ್ರಚಾರ ವಿವರ

ಏಪ್ರಿಲ್ 29ರ ಬೆಳಗ್ಗೆ 11 ಗಂಟೆಗೆ ಹೊಸಪೇಟೆಯಿಂದ ಹೊರಟು ಮಧ್ಯಾಹ್ನ 12.05ಕ್ಕೆ ಬಾಗಲಕೋಟೆಗೆ ತಲುಪಿ ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿವಿ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಮೋದಿ ಪ್ರಯಾಣಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 pm, Sat, 27 April 24

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ