ಬೆಳಗಾವಿ, ಏ.27: ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ (Lok Sabha Election) ಕಾವು ಮತ್ತಷ್ಟು ಹೆಚ್ಚಾಗಿದ್ದು, ನಿನ್ನೆಯಷ್ಟೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ ಶನಿವಾರ (ಏ.27) ರಾತ್ರಿಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಳಗಾವಿಗೆ ಆಗಮಿಸಿ, ಕಾಕತಿ ಬಳಿಯ ಹೋಟೆಲ್ನಲ್ಲಿ ತಂಗಿದ್ದಾರೆ. ಪ್ರಧಾನಿ ಮೋದಿ ಅವರು ಇಂದು (ಏ.28) ಬೆಳಗಾವಿ, ದಾವಣಗೆರೆ, ಹೊಸಪೇಟೆ, ಶಿರಸಿಯಲ್ಲಿ ನಡೆಯುವ ನಾಲ್ಕು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10.55ಕ್ಕೆ ಹೋಟೆಲ್ನಿಂದ ಹೊರಡುವ ಪ್ರಧಾನಿ ಮೋದಿ, 11 ಗಂಟೆಗೆ ಬೆಳಗಾವಿಯ ಮಾಲಿನಿ ಸಿಟಿ ಮೈದಾನದ ನಡಯುವೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. 11.55ಕ್ಕೆ ಬೆಳಗಾವಿಯಿಂದ ಹೊರಟು 12.55ಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತಲುಪಲಿದ್ದಾರೆ.
ಇದನ್ನೂ ಓದಿ:Belgaum Lok Sabha: ಪ್ರಧಾನಿ ಮೋದಿ ಸ್ವಾಗತಕ್ಕೆ ಬೆಳಗಾವಿ ಕಾರ್ಯಕರ್ತರಿಗೆ ಅವಕಾಶ: ವಿಡಿಯೋ
ಬಳಿಕ ಶಿರಸಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 2.50ಕ್ಕೆ ದಾವಣಗೆರೆಗೆ ಆಗಮಿಸಲಿದ್ದು, ದಾವಣಗೆರೆ ಸಮಾವೇಶದಲ್ಲಿ ಭಾಗವಹಿಸಿ, ನಂತರ ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. ಅಲ್ಲಿ 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗವಹಿಸಿ ರಾತ್ರಿ ಹೊಸಪೇಟೆಯಲ್ಲಿ ಮೋದಿ ವಾಸ್ತವ್ಯ ಮಾಡಲಿದ್ದಾರೆ.
ಏಪ್ರಿಲ್ 29ರ ಬೆಳಗ್ಗೆ 11 ಗಂಟೆಗೆ ಹೊಸಪೇಟೆಯಿಂದ ಹೊರಟು ಮಧ್ಯಾಹ್ನ 12.05ಕ್ಕೆ ಬಾಗಲಕೋಟೆಗೆ ತಲುಪಿ ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿವಿ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಮೋದಿ ಪ್ರಯಾಣಿಸಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:50 pm, Sat, 27 April 24