ಕೊರೊನಾ ಎರಡನೇ ಅಲೆ ಕುರಿತು ಮೋದಿ ಸಭೆ; ಮುಖ್ಯಮಂತ್ರಿಗಳಿಗೆ ಕಠಿಣ ನಿರ್ಧಾರ ಕೈಗೊಳ್ಳಲು ಸಲಹೆ ಸಾಧ್ಯತೆ?

ರಾಜ್ಯದಲ್ಲಿ ಕೊವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ. ಹೀಗಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ.

ಕೊರೊನಾ ಎರಡನೇ ಅಲೆ ಕುರಿತು ಮೋದಿ ಸಭೆ; ಮುಖ್ಯಮಂತ್ರಿಗಳಿಗೆ ಕಠಿಣ ನಿರ್ಧಾರ ಕೈಗೊಳ್ಳಲು ಸಲಹೆ ಸಾಧ್ಯತೆ?
ಪ್ರಧಾನಿ ನರೇಂದ್ರ ಮೋದಿ
Follow us
Skanda
|

Updated on:Mar 16, 2021 | 1:37 PM

ಬೆಂಗಳೂರು: ಕೊರೊನಾ ಎರಡನೇ ಅಲೆ ಬಗ್ಗೆ ದೇಶಾದ್ಯಂತ ಭಯದ ವಾತಾವರಣ ಮೂಡುತ್ತಿರುವ ಬೆನ್ನಲ್ಲೇ ಮಾರ್ಚ್​ 17 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕರ್ನಾಟಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಮುಖ್ಯಮಂತ್ರಿಗಳು ನಾಗರೀಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೊವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ. ಹೀಗಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಎಂತ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ತಿಳಿಸುವ ಮೂಲಕ ಜನರಲ್ಲಿ ನಿಯಮ ಪಾಲನೆಗೆ ಮನವಿ ಮಾಡಿದ್ದಾರೆ.

ಇಂದಿನಿಂದ ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಇದುವರೆಗೂ 15 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಿದ್ದೇವೆ. ಪ್ರತಿ ದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ ವ್ಯಕ್ತಿಯ 20 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮಾಡಲೇಬೇಕು ಎಂದು ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಗಡಿ ರಾಜ್ಯಗಳಲ್ಲಿ ಸೋಂಕು ಏರಿಕೆ ಆಗಿರೋದೇ ಕೆಲ ಜಿಲ್ಲೆಗಳಲ್ಲಿ ಕೊರೊನಾ ಏರಿಕೆಗೆ ಪ್ರಮುಖ ಕಾರಣವಾಗಿದೆ. ಸಭೆ ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ಮಾಡಲಾಗುವುದು. ಪ್ರತಿಭಟನೆ, ಸಿನಿಮಾ ಹಾಲ್​ಗಳಿಗೆ ಟಫ್ ರೂಲ್ಸ್ ವಿಚಾರ ನಾಳೆ ತಿಳಿಯಲಿದೆ. ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಾರೆ. ಬಹಿರಂಗ ಸಭೆ-ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ವಿಚಾರ ಕೂಡ ಆ ಬಳಿಕ ನಿರ್ಧಾರ ಆಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 24,492 ಜನರಿಗೆ ಕೊರೊನಾ ಪಾಸಿಟಿವ್​ 

ಆನೇಕಲ್​ನ ಶ್ರೀ ಚೈತನ್ಯ ವಸತಿ ಕಾಲೇಜಿನ ಮೂವರಿಗೆ ಕೊರೊನಾ ದೃಢ; ಆಂತಕದಲ್ಲಿ ಪೋಷಕರು

Published On - 1:36 pm, Tue, 16 March 21