Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಾಧ್ಯತೆ ಕಡಿಮೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಬಹುತೇಕ ಖಚಿತ: ಕೊರೊನಾ ನಿಯಂತ್ರಣ ಬಗ್ಗೆ ಇಂದು ಮೋದಿ ಸಭೆ

ಕೊರೊನಾ ಸೋಂಕು ಏಕಾಏಕಿ ಏರುಗತಿಯಲ್ಲಿ ಸಾಗಲಾರಂಭಿಸಿದರೆ ಹೇಗೆ ನಿಯಂತ್ರಿಸಬೇಕು? ಲಾಕ್ಡೌನ್ ಮಾಡಬೇಕಾ, ಬೇಡವಾ? ಎರಡನೇ ಅಲೆ ತಡೆಗಟ್ಟಲು ತೆಗೆದುಕೊಂಡಿರುವ ನಿರ್ಣಯಗಳೇನು? ಎಂಬಿತ್ಯಾದಿ ವಿಚಾರಗಳು ಸಭೆಯಲ್ಲಿ ಪ್ರಸ್ತಾಪವಾಗಲಿವೆ.

ಲಾಕ್​ಡೌನ್​ ಸಾಧ್ಯತೆ ಕಡಿಮೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಬಹುತೇಕ ಖಚಿತ: ಕೊರೊನಾ ನಿಯಂತ್ರಣ ಬಗ್ಗೆ ಇಂದು ಮೋದಿ ಸಭೆ
ಸಿಎಂ ಬಿ.ಎಸ್​.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ
Follow us
Skanda
|

Updated on:Mar 17, 2021 | 11:05 AM

ಬೆಂಗಳೂರು: ದೇಶಾದ್ಯಂತ ಕೊರೊನಾ ಆತಂಕ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ, ನಿರ್ಧಾರ ಕೈಗೊಳ್ಳುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು (ಮಾರ್ಚ್​ 17) ಮಧ್ಯಾಹ್ನ 12.30ರ ಸುಮಾರಿಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಲಿದ್ದಾರೆ. ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ವಿಧಾನಸೌಧದ ಕಚೇರಿಯಿಂದ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗಿತ್ತುರುವ ಬಗ್ಗೆ ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಕುರಿತಾಗಿ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಕೊರೊನಾ ಸೋಂಕು ಏಕಾಏಕಿ ಏರುಗತಿಯಲ್ಲಿ ಸಾಗಲಾರಂಭಿಸಿದರೆ ಹೇಗೆ ನಿಯಂತ್ರಿಸಬೇಕು? ಲಾಕ್ ಡೌನ್ ಮಾಡಬೇಕಾ, ಬೇಡವಾ? ಎರಡನೇ ಅಲೆ ತಡೆಗಟ್ಟಲು ತೆಗೆದುಕೊಂಡಿರುವ ನಿರ್ಣಯಗಳೇನು? ಎಂಬಿತ್ಯಾದಿ ವಿಚಾರಗಳು ಸಭೆಯಲ್ಲಿ ಪ್ರಸ್ತಾಪವಾಗಲಿವೆ. ಪ್ರಧಾನ ಮಂತ್ರಿ ಸೂಚನೆ ಮೇರೆಗೆ ಲಾಕ್‌ಡೌನ್ ಅಥವಾ ನೈಟ್ ಕರ್ಫ್ಯೂ ಭವಿಷ್ಯ ನಿರ್ಧಾರವಾಗಲಿದೆಯಾದರೂ ತಜ್ಞರು ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಮಾಡದಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಸಭೆ ಭಾರೀ ಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಈಗಾಗಲೇ ತಿಳಿಸಿದ್ದು, ನಿಯಮ ಪಾಲನೆ ಮಾಡದವರ ವಿರುದ್ಧ ದಂಡ ಪ್ರಯೋಗ ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ. ಸಾರ್ವಜನಿಕ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಂದಿಯನ್ನ ಕರೆದೊಯ್ಯಬಾರದು, ಮದುವೆ, ಸಭೆ-ಸಮಾರಂಭ, ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳಲ್ಲಿ 500 ಜನಕ್ಕಿಂತ ಹೆಚ್ಚು ಸೇರಬಾರದು ಎಂದು ಈಗಾಗಲೇ ಸೂಚಿಸಲಾಗಿದ್ದು, ಸಿನಿಮಾ, ಪ್ರತಿಭಟನೆಗಳಿಗೂ ನಿಯಂತ್ರಣ ತರಲು ಕೆಲ ಕಠಿಣ ನಿಯಮ ತರುವ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಇದೆಲ್ಲದರೊಟ್ಟಿಗೆ ಪ್ರತಿನಿತ್ಯ ಸುಮಾರು ಮೂರೂವರೆ ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡುವುದು, ಕೊವಿಡ್ ಪರೀಕ್ಷೆ ಸಂಖ್ಯೆ ಹೆಚ್ಚಳ ಮಾಡುವುದು, ಹೊರರಾಜ್ಯಗಳಿಂದ ಆಗಮಿಸುವವರಿಗೆ ನೆಗೆಟಿವ್​ ವರದಿ ಇದ್ದರೆ ಮಾತ್ರ ಪ್ರವೇಶ ನೀಡುವುದು ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸುವ ಯೋಚನೆಯಲ್ಲಿ ಸರ್ಕಾರ ಇದೆ. ಏಪ್ರಿಲ್​ ಅಂತ್ಯದ ತನಕವೂ ಕಟ್ಟೆಚ್ಚರ ವಹಿಸಲು ಕ್ರಮ ಕೈಗೊಳ್ಳುವುದಾಗಿ ಪ್ರಧಾನಿಯೊಂದಿಗಿನ ಸಭೆಯಲ್ಲಿ ಬಿ.ಎಸ್​.ಯಡಿಯೂರಪ್ಪ ಪ್ರಸ್ತಾಪಿಸಲಿದ್ದು, ಪ್ರಧಾನಿ ನೀಡುವ ಸಲಹೆ ಮೇರೆಗೆ ಕೆಲವೊಂದು ನಿಯಮಗಳನ್ನ ಜಾರಿಗೆ ತರುಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಇಂದಿನಿಂದ ಮಾಸ್ಕ್​ ಕಡ್ಡಾಯ, ಯಾವುದೇ ಲಾಕ್​ಡೌನ್​ ಇಲ್ಲ: ಸಿಎಂ ಯಡಿಯೂರಪ್ಪ ಘೋಷಣೆ 

ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಆತಂಕ.. ಹೀಗೆಯೇ ಮುಂದುವರಿದ್ರೆ ಮುಂದೆ ಐತೆ ಮಾರಿಹಬ್ಬ, ತಜ್ಞರು ಹೇಳಿದ್ದೇನು?

Published On - 10:56 am, Wed, 17 March 21

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ