ನ.13ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಇದೇ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮೆಟ್ರೋದ ಪಿಂಕ್ ಲೈನ್ ಉದ್ಘಾಟಿಸಲಿದ್ದಾರೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 6 ನಿಲ್ದಾಣಗಳು ಕಾರ್ಯಾರಂಭ ಮಾಡಲಿದ್ದು, ಬನ್ನೇರುಘಟ್ಟ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಂಚಾರ ದಟ್ಟಣೆಗೆ ದೊಡ್ಡ ಮಟ್ಟದ ಪರಿಹಾರ ಸಿಗಲಿದೆ. ಇನ್ನು ಪ್ರಧಾನಿ ಮೋದಿ ಬೆಂಗಳೂರಿಗೆ ಎಷ್ಟು ಗಂಟೆಗೆ ಬರುತ್ತಾರೆ? ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ನ.13ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
Narendra Modi
Edited By:

Updated on: Nov 06, 2026 | 7:16 PM

ಬೆಂಗಳೂರು, (ನವೆಂಬರ್ 6): ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸಾರಿಗೆಯ ಜೀವನಾಡಿಯಾಗಿರುವ ನಮ್ಮ ಮೆಟ್ರೋದ ಬಹುನಿರೀಕ್ಷಿತ ‘ಗುಲಾಬಿ ಮಾರ್ಗ ’ ನವೆಂಬರ್ 13ರಂದು ಉದ್ಘಾಟನೆಯಾಗಲಿದೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಮ್ಮ ಮೆಟ್ರೋವನ್ನು ಪ್ರಧಾನಿ ನರೇಂದ್ರ ಮೋದಿ  ಉದ್ಘಾಟಿಸಲಿದ್ದಾರೆ. ನವೆಂಬರ್ 13ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಮೆಟ್ರೋ ಉದ್ಘಾಟನೆ ಜೊತೆಗೆ ಇಡೀ ದಿನ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ ಮೈಸೂರಿನ ಕಾರ್ಯಕ್ರಮವೊಂದರಲ್ಲೂ ಸಹ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸುದೀರ್ಘ ಪತ್ರ: ನಿಮ್ಮ ಬೆಂಬಲ ಹಾಗೂ ತುರ್ತು ಮಧ್ಯಪ್ರವೇಶ ಅಗತ್ಯವಿದೆ, ಪತ್ರದಲ್ಲಿ ಏನಿದೆ ಗೊತ್ತಾ?

ನ.13ರ ಇಡೀ ದಿನದ ಮೋದಿ ವೇಳಾಪಟ್ಟಿ ಹೀಗಿದೆ

  • ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬೆಳಗ್ಗೆ ನವದೆಹಲಿಯಿಂದ ಹೊರಟು ಬೆಳಗ್ಗೆ 10.5ಕ್ಕೆ ಬೆಂಗಳೂರಿನ ಹೆಚ್ಎಎಲ್ ಏರ್ ಪೋರ್ಟ್ಗೆ ಆಗಮಿಸಲಿದ್ದಾರೆ.
  • 10.45ಕ್ಕೆ ಬೆಂಗಳೂರಿನಲ್ಲಿ ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿರುವ ಮೋದಿ.
  • ಮಧ್ಯಾಹ್ನ 12.40ಕ್ಕೆ ತಾವರೆಕರೆ ಮೆಟ್ರೋ ರೈಲು‌ ನಿಲ್ದಾಣಕ್ಕೆ ಅಗಮಿಸಲಿದ್ದು, ಮಧ್ಯಾಹ್ನ 12.45ಕ್ಕೆ ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಪಿಂಕ್ ಲೈನ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ ಮೆಟ್ರೋನಲ್ಲಿ ಐಐಎಂಬಿ ನಿಲ್ದಾಣದವರೆಗೆ ಪ್ರಯಾಣ ಮಾಡಲಿದ್ದಾರೆ.
  • ಮಧ್ಯಾಹ್ನ 1.15ಕ್ಕೆ ಐಐಎಂಬಿ ಆಡಿಟೋರಿಯಂನಲ್ಲಿ ವಿವಿಧ ಶಂಕುಸ್ಥಾಪನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಯೋಜನೆಗಳಿಗೆ ಹಸಿರು ನಿಶಾನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
  • ಮಧ್ಯಾಹ್ನ 2.30ಕ್ಕೆ ಬೆಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ಮೈಸೂರಿಗೆ ಪ್ರಯಾಣ.
  • ಮಧ್ಯಾಹ್ನ 3.30ಕ್ಕೆ ಮೈಸೂರಿನ ಕೆ.ಸಿ. ಲೇಔಟ್ ಪಾರ್ಕ್ ನಲ್ಲಿ ಭಾರತ್ ವ್ಯಾನ್ ಕಾರ್ಯಕ್ರಮದಲ್ಲಿ ಭಾಗಿ.
  • ಸಂಜೆ 4 ಗಂಟೆಗೆ ಮೈಸೂರು ಕಾಸ್ಮೋಸ್ ಉದ್ಘಾಟಿಸಲಿರುವ ಮೋದಿ.
  • ಸಂಜೆ 6.05ಕ್ಕೆ ಮೈಸೂರಿನಿಂದ ನವದೆಹಲಿಗೆ ಪ್ರಧಾನಿ ಮೋದಿ ‌ನಿರ್ಗಮನ.

ವಿಶ್ವದ ಮೊದಲ ಟಿಲ್ಟೆಡ್ LED ಡೋಮ್ ಪ್ಲಾನೆಟೋರಿಯಂ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ಪ್ಲಾನೆಟೋರಿಯಂ ಅನ್ನು ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ವಿಶ್ವವಿದ್ಯಾನಿಲಯದ ಶ್ರೀ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ ಅತ್ಯಾಧುನಿಕ ತಾರಾಲಯ ನಿರ್ಮಾಣವಾಗಿದೆ. ಇದಕ್ಕಾಗಿ ವಿಶ್ವವಿದ್ಯಾನಿಲಯ ಮೂರು ಎಕರೆ ಜಾಗ ನೀಡಿದ್ದು, ಬರೋಬ್ಬರಿ 91 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಸಾಕಾರಗೊಂಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ MPLADS ನಿಧಿ ಸೇರಿದಂತೆ ಕೇಂದ್ರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ಯೋಜನೆ ರೂಪುಗೊಂಡಿದೆ.

Loading...

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us