ಮಾ.16 ರಂದು ಕಲಬುರಗಿಗೆ ಮೋದಿ, ಖರ್ಗೆ ತವರು ಜಿಲ್ಲೆಯಿಂದಲೇ ಚುನಾವಣಾ ಪ್ರಚಾರ ರಣಕಹಳೆ
ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ನಿನ್ನೆ(ಮಾ.13) ಪ್ರಕಟವಾಗಿದೆ. ಇದರ ಬೆನ್ನಲ್ಲೇ ಇದೀಗ ನಾಡಿದ್ದು(ಮಾ.18) ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರ BJP ಉಸ್ತುವಾರಿ ರಾಜುಗೌಡ ಅವರು ಹೇಳಿದ್ದಾರೆ.
ಕಲಬುರಗಿ, ಮಾ.14: ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ನಿನ್ನೆ(ಮಾ.13) ಪ್ರಕಟವಾಗಿದೆ. ಈ ಮೂಲಕ ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ನಾಡಿದ್ದು(ಮಾ.16) ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರ BJP ಉಸ್ತುವಾರಿ ರಾಜುಗೌಡ ಅವರು ಹೇಳಿದ್ದಾರೆ.
ಖರ್ಗೆ ತವರು ಜಿಲ್ಲೆಯಿಂದಲೇ ಚುನಾವಣಾ ಪ್ರಚಾರ ಆರಂಭ
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜುಗೌಡ, ‘ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ಆಯೋಜನೆ ಮಾಡಿದ್ದೆವೆ. ಕಲಬುರಗಿಯಿಂದಲೇ ಪ್ರಧಾನಿ ಮೋದಿ ಚುನಾವಣೆ ಪ್ರಚಾರ ಆರಂಭಿಸುತ್ತಿದ್ದಾರೆ. ತೆಲಂಗಾಣದಿಂದ ನೇರವಾಗಿ ಕಲಬುರಗಿ ಏರ್ಪೋರ್ಟ್ ಆಗಮಿಸಲಿರುವ ಮೋದಿ, ಪೊಲೀಸ್ ಮೈದಾನದಿಂದ 10 ರಿಂದ 12 ನಿಮಿಷ ರೋಡ್ಶೋ ಮಾಡಲಿದ್ದಾರೆ. ಬಳಿಕ 40 ನಿಮಿಷ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಲಬುರಗಿ ಹಾಗೂ ಬೀದರ್ ಕ್ಷೇತ್ರದ ಜನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಇದನ್ನೂ ಓದಿ:ಲೋಕಸಭಾ ಚುನಾವಣೆ ಭರ್ಜರಿ ತಯಾರಿ, ಅಸಾದುದ್ದೀನ್ ಓವೈಸಿ ಫಿಟ್ನೆಸ್ ಮಂತ್ರ ಇಲ್ಲಿದೆ ನೋಡಿ!
ಇನ್ನು ನಿನ್ನೆ ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಅಸಮಧಾನ ಭುಗಿಲೆದ್ದಿದೆ. ಕೆಎಸ್ ಈಶ್ವರಪ್ಪ, ಕರಡಿ ಸಂಗಣ್ಣ, ಜಗದೀಶ್ ಶೆಟ್ಟರ್, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವಾರು ಬಂಡಾಯದ ಕಹಳೆ ಊದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬೇಟಿ ನೀಡುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಇದರಿಂದ ಬಂಡಾಯದ ಬಿಸಿ ಕಡಿಮೆಯಾಗಿ, ಪಕ್ಷದಲ್ಲಿ ಒಗ್ಗಟ್ಟು ಮೂಡಲಿದೆಯಾ ಕಾದು ನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:06 pm, Thu, 14 March 24