ಪ್ರಧಾನಿ ಮೋದಿ ಮತ್ತೊಮ್ಮೆ ಗೆದ್ದರೆ ತಮ್ಮ ದೇವಸ್ಥಾನ ತಾವೇ ಕಟ್ಟಿಕೊಳ್ತಾರೆ: ಶಿವರಾಜ ತಂಗಡಗಿ ಲೇವಡಿ

ಕೊಪ್ಪಳದ ಕಾರಟಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಶಿವರಾಜ ತಂಗಡಗಿ, ಪ್ರಧಾನಿ ಮೋದಿ ಮತ್ತೊಮ್ಮೆ ಗೆದ್ದರೆ ತಮ್ಮ ದೇವಸ್ಥಾನ ತಾವೇ ಕಟ್ಟಿಕೊಳ್ಳುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ಜನ ಮತ್ತೊಮ್ಮೆ ಅವಕಾಶ ಕೊಟ್ಟರೆ ಮೋದಿ ದೇಗುಲ ಕಟ್ಟುವ ಪರಿಸ್ಥಿತಿ ನಿರ್ಮಾಣವಾಗಬಹುದು. ಪ್ರತಿ ಊರಲ್ಲಿ ಪ್ರಧಾನಿ ಮೋದಿ ದೇವಸ್ಥಾನ ಕಟ್ಟಿ ಅನ್ನೋ ಸ್ಥಿತಿ ಬರುತ್ತೆ ಎಂದಿದ್ದಾರೆ.

ಪ್ರಧಾನಿ ಮೋದಿ ಮತ್ತೊಮ್ಮೆ ಗೆದ್ದರೆ ತಮ್ಮ ದೇವಸ್ಥಾನ ತಾವೇ ಕಟ್ಟಿಕೊಳ್ತಾರೆ: ಶಿವರಾಜ ತಂಗಡಗಿ ಲೇವಡಿ
ಪ್ರಧಾನಿ ಮೋದಿ ಮತ್ತೊಮ್ಮೆ ಗೆದ್ದರೆ ತಮ್ಮ ದೇವಸ್ಥಾನ ತಾವೇ ಕಟ್ಟಿಕೊಳ್ತಾರೆ: ಶಿವರಾಜ ತಂಗಡಗಿ ಲೇವಡಿ
Updated By: ಗಂಗಾಧರ​ ಬ. ಸಾಬೋಜಿ

Updated on: May 25, 2024 | 6:23 PM

ಕೊಪ್ಪಳ, ಮೇ 25: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತೊಮ್ಮೆ ಗೆದ್ದರೆ ತಮ್ಮ ದೇವಸ್ಥಾನ ತಾವೇ ಕಟ್ಟಿಕೊಳ್ಳುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ (Shivaraj tangadagi) ಲೇವಡಿ ಮಾಡಿದ್ದಾರೆ. ಕೊಪ್ಪಳದ ಕಾರಟಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮನ ದೇಗುಲ ಆಯ್ತು, ಇನ್ನು ನನ್ನ ದೇಗುಲ ಅಂತಾ ಕಟ್ಟಿಕೊಳ್ಳುತ್ತಾರೆ. ಯಾಕೆ ಅಂದರೆ ಮೋದಿ ಸ್ಟೇಟ್​​ಮೆಂಟ್​​ಗಳು ಹಾಗೆ ಇವೆ ಎಂದು ಹೇಳಿದ್ದಾರೆ.

ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ ಅಂತಾ ಮೋದಿ ಹೇಳುತ್ತಾರೆ. ಜನ ಮತ್ತೊಮ್ಮೆ ಅವಕಾಶ ಕೊಟ್ಟರೆ ಮೋದಿ ದೇಗುಲ ಕಟ್ಟುವ ಪರಿಸ್ಥಿತಿ ನಿರ್ಮಾಣವಾಗಬಹುದು. ಪ್ರತಿ ಊರಲ್ಲಿ ಪ್ರಧಾನಿ ಮೋದಿ ದೇವಸ್ಥಾನ ಕಟ್ಟಿ ಅನ್ನೋ ಸ್ಥಿತಿ ಬರುತ್ತೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು: ಸಚಿವ ಶಿವರಾಜ ತಂಗಡಗಿ

ಪುರಿಜಗನ್ನಾಥರು ಮೋದಿ ಭಕ್ತರು ಅಂತಾರೆ, ಎಲ್ಲಿಗೆ ಬಂದಿದೆ ಸ್ಥಿತಿ. ನಾವು ಜನಪ್ರತಿನಿಧಿಗಳು ದೇವರಾಗೋಕಾಗತ್ತಾ ಎಂದು ಪ್ರಶ್ನಿಸಿದ್ದಾರೆ. ಮೋದಿ ಸಬ್ ಕಾ ಸಾಥ್ ಅಂತಾರೆ, ವೇದಿಕೆಯಲ್ಲಿ ಹಿಂದುತ್ವ ಅಂತಾರೆ, ಇಂತಹ ಮಾತನ್ನು ಹಿಂದಿನ ಯಾವ ಪ್ರಧಾನಮಂತ್ರಿಯೂ ಮಾತಾಡಿಲ್ಲ. ಇದು ನರೇಂದ್ರ ಮೋದಿ ಅವರ ಅಹಂಕಾರದ ಕೊನೆಯ ಹಂತ ಎಂದು ಕಿಡಿಕಾರಿದ್ದಾರೆ.

ಇತ್ತೀಚೆಗೆ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದಿದ್ದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ್ದ ತಂಗಡಗಿ, ಶಾಸಕ ಜನಾರ್ಧನ ರೆಡ್ಡಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಪ್ರಧಾನಿ ಮೋದಿ ಅವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುತ್ತೇವೆ ಅಂತ ಹೇಳಿದ್ದರು.

ಇದನ್ನೂ ಓದಿ: ಮೋದಿ…ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

ಆದರೆ ಉದ್ಯೋಗ ನೀಡಲಿಲ್ಲ. ಉದ್ಯೋಗ ನೀಡಿ ಅಂದ್ರೆ ಪಕೋಡ ಮಾರಿ ಅಂತ ಹೇಳಿದ್ದರು. ಹೀಗಾಗಿ ನಾನು ಯುವಕರಿಗೆ ಮೋದಿ ಮೋದಿ ಅನ್ನಬೇಡಿ ಅಂತ ಹೇಳಿದ್ದೆ. ಆದರೆ ಇದೀಗ ಸುಳ್ಳು ಹೇಳಿರುವ ಬಿಜೆಪಿಗೆ ಈ ಬಾರಿ ಕಾಂಗ್ರೆಸ್​ಗೆ ಮತ ಹಾಕುವ ಮೂಲಕ ಕಪಾಳಕ್ಕೆ ಹೊಡೆಯಬೇಕು ಎಂದು ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.