ನಾಳೆ ಮಂಗಳೂರಿಗೆ ಮೋದಿ ಭೇಟಿ, ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ

ನಾಳೆ, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು....

ನಾಳೆ ಮಂಗಳೂರಿಗೆ ಮೋದಿ ಭೇಟಿ, ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 01, 2022 | 7:57 PM

ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಮಂಗಳೂರಿಗೆ (Mangalore) ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಇದಕ್ಕಿಂತ ಮುಂಚೆ ಮಲಯಾಳಂನಲ್ಲಿ ಟ್ವೀಟ್ ಮಾಡಿದ ಅವರು ಕೊಚ್ಚಿ ನಗರವನ್ನು ತಲುಪಿದ ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ. ಆ ನಂತರ ಕಾಲಡಿಯ ಶ್ರೀ ಆದಿಶಂಕರ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡುವ ಗೌರವ ನನ್ನದು. ಸಂಜೆ ಕೊಚ್ಚಿಯಲ್ಲಿ ಮೆಟ್ರೋ ಮತ್ತು ರೈಲು ಸಂಬಂಧಿತ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿದೆ. ಪ್ರಧಾನಿ ಮೋದಿ ಭೇಟಿ ಬಗ್ಗೆ ಮಾತನಾಡಿದ ಇಂಧನ ಸಚಿವ ವಿ.ಸುನಿಲ್ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. 3,700 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ ನೀಡುತ್ತಾರೆ. ಬಳಿಕ ಕಾರ್ಯಕ್ರಮ ಉದ್ದೇಶಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಕೃಷಿ ಸಮ್ಮಾನ್, ವಿದ್ಯಾನಿಧಿ ಸೇರಿ ಹಲವು ಫಲಾನುಭವಿಗಳು ಭಾಗಿಯಾಗಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಜನರು ಆಗಮಿಸುತ್ತಿದ್ದಾರೆ. ಜನರನ್ನು ಕರೆತರಲು 2 ಸಾವಿರ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದರು.

ಆಗಸ್ಟ್ 31 ರಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, “ಪ್ರಧಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳು ಸೇರಿದಂತೆ ಸುಮಾರು 1 ಲಕ್ಷ ಜನರು ಸೇರುತ್ತಾರೆ. ನಾವು ಕಾರ್ಯಕ್ರಮಕ್ಕೆ ಮುಂಚಿತವಾಗಿ ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಮತ್ತು ಉತ್ತಮವಾಗಿ ಸಿದ್ಧರಾಗಿದ್ದೇವೆ. ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಫಲಾನುಭವಿಗಳಿಗೆ ಮನವಿ ಮಾಡಿದ್ದೇವೆ ಎಂದಿದ್ದಾರೆ. ಕಾರ್ಯಕ್ರಮಕ್ಕೆ ಸಾರ್ವಜನಿಕರು ಯಾವುದೇ ರೀತಿಯ ಆಕ್ಷೇಪಾರ್ಹ ವಸ್ತುಗಳನ್ನು ತರುವಂತಿಲ್ಲ, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 9 ಜಂಕ್ಷನ್‌ಗಳಲ್ಲಿ ಸಂಚಾರ ವ್ಯತ್ಯಯವಿದ್ದು, ವಾಹನ ನಿಲುಗಡೆಗೆ 15 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ

Published On - 5:51 pm, Thu, 1 September 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್